ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ, MRS ಸರ್ಕಲ್’ನಿಂದ ರಸ್ತೆ ಅಗಲೀಕರಣ, ಅಲಂಕಾರಿಕ ದೀಪ

Airport-Meeting-in-Bengaluru-With-Minister-Somanna-and-BY-Raghavendra

SHIVAMOGGA LIVE NEWS | AIRPORT| 08 ಮೇ 2022 ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ 25 ಎಕರೆ ಭೂಮಿ ಸ್ವಾಧೀನ ಸೇರಿದಂತೆ ರೈತರಿಗೆ ನಿವೇಶನ ಹಾಗೂ ಪರಿಹಾರ ಮಂಜೂರಾತಿಗೆ ಸರ್ಕಾರ ಅನುಮೋದನೆ ನೀಡಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಸರ್ಕಾರದ ಉನ್ನತಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಭೂಮಿ ಸ್ವಾಧೀನಕ್ಕೆ ಸಂಬಂಧಪಟ್ಟಂತೆ ರೈತರಿಗೆ ಪರಿಹಾರ ನೀಡುವುದು … Read more

ಈಶ್ವರಪ್ಪ ರಾಜೀನಾಮೆ, ಬಿಜೆಪಿಯ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣದ ಯುಗಾಂತ್ಯವಾ?

Eshwarappa-Yedyurappa-Shankaramurthy

SHIVAMOGGA LIVE NEWS | SHIMOGA | 16 ಏಪ್ರಿಲ್ 2022 ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಯ ತ್ರಿಮೂರ್ತಿಗಳ ಸಕ್ರಿಯ ರಾಜಕಾರಣದ ಯುಗಾಂತ್ಯವಾಗುತ್ತಾ ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ. ಬಿ.ಎಸ್.ಯಡಿಯೂರಪ್ಪ, ಕೆ.ಎಸ್.ಈಶ್ವರಪ್ಪ ಮತ್ತು ಡಿ.ಹೆಚ್.ಶಂಕರಮೂರ್ತಿ ಅವರು ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದ ತ್ರಿಮೂರ್ತಿಗಳು. ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಮಾರ್ಗಸೂಚಿ ರೂಪಿಸಿದ ನಾಯಕರು ಈಗ ಮಾರ್ಗದರ್ಶಿ ಮಂಡಳಿ ಸೇರುವಂತಾಗಿದೆ. ಮಲೆನಾಡು ಭಾಗದ ರಾಜಕಾರಣದ ಮತ್ತೊಂದು ಅಧ್ಯಾಯ ಮುಗಿದಂತಾಯಿತಾ ಎಂದು ಬಿಜೆಪಿ ಕಾರ್ಯಕರ್ತರು ಯೋಚಿಸುವಂತಾಗಿದೆ. … Read more

‘ಹಗಲು ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕನಸಾಗಿಯೇ ಉಳಿಯಲಿದೆ’

Shimoga MP BY Raghavendra

SHIVAMOGGA LIVE NEWS | 10 ಮಾರ್ಚ್ 2022 ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಕನಸಾಗಿಯೇ ಉಳಿಯಲಿದೆ ಅನ್ನುವುದನ್ನ ಪಂಚ ರಾಜ್ಯ ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟಿದ್ದಾರೆ. ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಿಗೆ ಸಂಸದ ರಾಘವೇಂದ್ರ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿಯ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ, BJP ನಾಯಕರು, ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. … Read more

ಶಿವಮೊಗ್ಗದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಆರೋಪಿಗಳ ವಿರುದ್ಧ ಕಠಿಣ ಕ್ರಮದ ಭರವಸೆ, ಸಂಪುಟ ವಿಸ್ತರಣೆ ಬಗ್ಗೆ ಏನಂದ್ರು?

191221 Yedyurappa at Shimoga Vinobanagara House

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಡಿಸೆಂಬರ್ 2021 ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ಮತ್ತು ಗಲಭೆ ಪ್ರಕರಣ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಲಭೆಕೋರರು ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಹಿರಿಯರ ಪುತ್ಥಳಿ ಹಾಳುಗೆಡವಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು. … Read more

‘ಕಾಂಗ್ರೆಸ್ ಧೂಳಿಪಟವಾಗಲಿದೆ’, ಯಡಿಯೂರಪ್ಪ ಭವಿಷ್ಯ, ಪರಿಷತ್ ಚುನಾವಣೆ ಬಗ್ಗೆ ಮಾಜಿ ಸಿಎಂ ಹೇಳಿಕೆಯ ಪ್ರಮುಖಾಂಶ ಇಲ್ಲಿದೆ

101221 Yedyurappa Visit to Purasabhe in Shikaripura for voting

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15 ಸ್ಥಾನ ಗೆಲ್ಲಲಿದೆ. ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಧೂಳಿಪಟವಾಗಿ ಬಿಜೆಪಿ ಪರವಾದ ಅಲೆ ಇದೆ ಅನ್ನುವುದು ಸ್ಪಷ್ಟವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರ ಪುರಸಭೆಯಲ್ಲಿ ಮತದಾನ ಮಾಡಿದ ಬಳಿಕ ಮಾಧ್ಯಮಗಳಿಗೆ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದರು. ಯಡಿಯೂರಪ್ಪ ಪ್ರತಿಕ್ರಿಯೆಯ ಪ್ರಮುಖಾಂಶಗಳು ‘ನಾನು ಈಗಾಗಲೆ ಹೇಳಿದ್ದೇನೆ ಕನಿಷ್ಠ 15 ಕ್ಷೇತ್ರಗಳಲ್ಲಿ ನೂರಕ್ಕೆ ನೂರು ಗೆಲ್ಲುತ್ತೇವೆ.’ ‘ಶಿವಮೊಗ್ಗದಲ್ಲಿ … Read more

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ ಮತದಾನ

101221 Yedyurappa and Raghavendra voting in shikaripura

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 10 ಡಿಸೆಂಬರ್ 2021 ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಹಕ್ಕು ಚಲಾಯಿಸಿದರು. ಶಿಕಾರಿಪುರ ಪುರಸಭೆ ಆವರಣದಲ್ಲಿ ಸ್ಥಾಪಿಸಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಮಾಜಿ ಸಿಎಂ ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರು ಒಟ್ಟಿಗೆ ಬಂದು ಮತದಾನ ಮಾಡಿದರು. ದೇವಸ್ಥಾನದಲ್ಲಿ ವಿಶೇಷ ಪೂಜೆ ಮತದಾನಕ್ಕೂ ಮೊದಲು ಯಡಿಯೂರಪ್ಪ, ಸಂಸದ ರಾಘವೇಂದ್ರ, ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಡಿ.ಎಸ್.ಅರುಣ್ ಅವರೊಂದಿಗೆ ವಿಶೇಷ … Read more

ದೇಶದಲ್ಲಿ ಶಿವಮೊಗ್ಗ ಸಂಸದ ರಾಘವೇಂದ್ರಾಗೆ ನಂಬರ್ 2 ಸ್ಥಾನ

BY Raghavendra 1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಸಂಸದರ ನಿಧಿಯಡಿ ಸಾರ್ವಜನಿಕರಿಗೆ ಉಪಯುಕ್ತವಾಗುವ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದ್ದು ಸಂಸದರ ನಿಧಿ ಬಳಕೆಯಲ್ಲಿ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ದೇಶಕ್ಕೆ ಎರಡನೇ ಸ್ಥಾನದಲ್ಲಿದ್ದಾರೆ. 2019-20ರ ಸಾಲಿಗೆ ಸಂಬಂಧಿಸಿದಂತೆ 5 ಕೋಟಿ ರೂ. ಅನುದಾನ ಹಾಗೂ 10 ರಿಂದ 15ನೇ ಲೋಕಸಭೆವರೆಗೆ ಬಳಕೆಯಾಗದೆ ಇದ್ದ 4.40 ಕೋಟಿ ರೂ. ಅನುದಾನವೂ ಸೇರಿದಂತೆ 9.40 ಕೋಟಿ ರೂ.ದಲ್ಲಿ ಈಗಾಗಲೇ 9 ಕೋಟಿ ರೂ. ಬಳಕೆ ಮಾಡಿದ್ದಾರೆ. … Read more

ಶಿವಮೊಗ್ಗದಲ್ಲಿ RSS ಪಥಸಂಚಲನ, ಗಣವೇಷ ಧರಿಸಿ ಪಾಲ್ಗೊಂಡರು ಸಂಸದ

171021 RSS March Fast in Shimoga City

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಅಕ್ಟೋಬರ್ 2021 ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವತಿಯಿಂದ ಇವತ್ತು ಶಿವಮೊಗ್ಗ ನಗರದಲ್ಲಿ ವಿಜಯದಶಮಿ ಪಥಸಂಚಲನ ಆಯೋಜಿಸಲಾಗಿತ್ತು. ನಗರದ ವಿವಿಧೆಡೆ RSS ಕಾರ್ಯಕರ್ತರು ಪಥಸಂಚಲನ ನಡೆಸಿದರು. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಹಲವು ಬಿಜೆಪಿ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಗಣವೇಷ ತೊಟ್ಟು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು. ಶಿವಮೊಗ್ಗದ ಸೈನ್ಸ್ ಮೈದಾನದಿಂದ ಹೊರಟ ಮೆರವಣಿಗೆ ಬಿ.ಹೆಚ್.ರಸ್ತೆ, ಗಾಂಧಿ ಬಜಾರ್ ಸೇರಿದಂತೆ ವಿವಿಧೆಡೆ ಸಾಗಿತು. RSS ಬ್ಯಾಂಡ್, ಗಣವೇಷ, ದಂಡ … Read more

‘ನಾನು ಓದುತ್ತಿದ್ದಾಗ ಶಿವಮೊಗ್ಗದಲ್ಲಿ ಭವಿಷ್ಯವಿಲ್ಲ ಅನ್ನೋ ಮಾತಿತ್ತು’

051021 BY Raghavendra Visit National Public School

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021 ನಾನು ಬಿಬಿಎಂ ಓದುವಾಗ ಶಿವಮೊಗ್ಗಕ್ಕೆ ಭವಿಷ್ಯ ಇಲ್ಲ ಎನ್ನುತ್ತಿದ್ದರು. ಆದರೆ ಇವತ್ತು ನಮ್ಮ ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜ್, ಕೃಷಿ ವಿಶ್ವವಿದ್ಯಾಲಯ, ಇರುವಕ್ಕಿಯಲ್ಲಿ ಸಾವಿರ ಎಕರೆ ಕ್ಯಾಂಪಸ್ ಹೊಂದಿರುವ ಶಿವಪ್ಪನಾಯಕ ಯೂನಿವರ್ಸಿಟಿಯನ್ನು ನಿರ್ಮಾಣ ಮಾಡಿ ಜಿಲ್ಲೆಯ್ನನು ಎಜುಕೇಶನ್ ಹಬ್ ಆಗಿ ಪರಿವರ್ತನೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಭಾರತ ಸರ್ಕಾರದ ಅಟಲ್ ಇನ್ನೋವೆಷನ್ ಮಿಷನ್ ಆಯೋಗದಿಂದ ನಿರ್ಮಾಣವಾಗಿರುವ ಅಟಲ್ ಥಿಂಕರಿಂಗ್ ಲ್ಯಾಬನ್ನು … Read more

‘ಶೀಘ್ರದಲ್ಲೇ ಈ ವಿಚಾರ ಸಂಬಂಧ ಶಾಶ್ವತ ಪರಿಹಾರ ಹುಡುಕುವ ಪ್ರಯತ್ನವಾಗಲಿದೆ’

170921 By Raghavendra in Shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ಮುಂದಿನ ನಿರ್ಧಾರದವರೆಗೆ ದೇಗುಲಗಳನ್ನು ತೆರವು ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ, ಸಂವಿಧಾನದ ವ್ಯವಸ್ಥೆಯಲ್ಲಿ ನಾವು ನ್ಯಾಯಾಲಯದ ಆದೇಶಕ್ಕೆ ತಲೆಬಾಗಿ ನಡೆಯುತ್ತಿದ್ದೇವೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಂದಿನ ಚರ್ಚೆವರೆಗೂ ದೇವಾಲಯ ತೆರವು ಮಾಡಬಾರದು ಎಂದು ಆದೇಶಿಸಿದ್ದಾರೆ ಎಂದರು. ದೇವಾಲಯಗಳ ತೆರವು ವಿಷಯಕ್ಕೆ ಸಂಬಂಧಿಸಿದಂತೆ ಶಾಶ್ವತ ಪರಿಹಾರ ಒದಗಿಸುವ … Read more