ಗಾಂಧಿ ಪಾರ್ಕ್ ಮುಂದೆ ಹೈ ಡ್ರಾಮಾ, ಉಪವಾಸ ಕುಳಿತ ಮಾಜಿ ಶಾಸಕ, ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್

ಶಿವಮೊಗ್ಗ ಲೈವ್.ಕಾಂ | SHIMOGA | 16 ಡಿಸೆಂಬರ್ 2019 ಪೌರತ್ವ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ನೇತೃತ್ವದಲ್ಲಿ ಇವತ್ತು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪೊಲೀಸರು ಉಪವಾಸ ಕುಳಿತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಗಾಂಧಿ ಪಾರ್ಕ್ ಮುಂಭಾಗ ಉಪವಾಸ ಸತ್ಯಾಗ್ರಹ ಆಯೋಜಿಸಲಾಗಿತ್ತು. ಮಾಜಿ ಶಾಸಕ ಪ್ರಸನ್ನಕುಮಾರ್, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ರಮೇಶ್ ಹೆಗ್ಡೆ ಸೇರಿದಂತೆ ಹಲವರು ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು. … Read more

SHIMOGA | ಕೇಂದ್ರ ಸರ್ಕಾರದ ನಡೆ ವಿರುದ್ಧ ಶಿವಮೊಗ್ಗದಲ್ಲಿ ತೀವ್ರ ಆಕ್ರೋಶ, ಮಸೂದೆಗೆ ಅಂಗೀಕಾರ ನೀಡದಂತೆ ರಾಷ್ಟ್ರಪತಿಗೆ ಒತ್ತಾಯ

ಶಿವಮೊಗ್ಗ ಲೈವ್.ಕಾಂ | SHIMOGA | 13 ಡಿಸೆಂಬರ್ 2019 ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಶಿವಮೊಗ್ಗದಲ್ಲಿ ಇವತ್ತು ಮುಸ್ಲಿಂ ಸಮುದಾಯದವರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರಾಜಕೀಯ ಲಾಭಕ್ಕಾಗಿ ಮಸೂದೆಯನ್ನು ಜಾರಿಗೊಳಿಸಲಾಗುತ್ತಿದೆ ಎಂದು ಆರೋಪಿಸಿದರು. ಮುಸ್ಲಿಂ ಮುತ್ತಹಿದ ಮಹಾಝ್ ಕಮಿಟಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ನಡೆ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪೌರತ್ವ ತಿದ್ದುಪಡಿ ಮಸೂದೆಯು ಸಂವಿದಾನದ ಪರಿಚ್ಛೇದ 14 ಮತ್ತು ಅಂತಾರಾಷ್ಟ್ರೀಯ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, … Read more