ಶಿವಮೊಗ್ಗ ಈದ್ಗಾ ಮೈದಾನಕ್ಕೆ ಸಿಸಿಟಿವಿ ಕ್ಯಾಮರಾ ಕಣ್ಗಾವಲು, ಎಷ್ಟು ಕ್ಯಾಮರಾ ಅಳವಡಿಸಲಾಗಿದೆ?
ಶಿವಮೊಗ್ಗ : ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಈದ್ಗಾ ಮೈದಾನದ ಮಾಲೀಕತ್ವ ವಿವಾದದ ಬೆನ್ನಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈದ್ಗಾ ಮೈದಾನಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಇಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ. ಈಗ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮೈದಾನದ ಸುತ್ತಲು ಒಟ್ಟು 14 ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮಹಾನಗರ ಪಾಲಿಕೆ ಮತ್ತು ಪೊಲೀಸ್ ಅಧಿಕಾರಿಗಳು ಇದನ್ನು ಪರಿಶೀಲಿಸುತ್ತಿದ್ದಾರೆ. … Read more