ಸಮೀಕ್ಷೆ, ಶಿವಮೊಗ್ಗ ಜಿಲ್ಲೆಯಲ್ಲಿ ಸಹಾಯವಾಣಿ ಆರಂಭ, ಹೆಲ್ಪ್‌ಲೈನ್ ಉದ್ದೇಶವೇನು?
ಶಿವಮೊಗ್ಗ: ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿ (Helpline) ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷಾ ಕಾರ್ಯ ಪ್ರಗತಿಯಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಶೇ.85ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ರಾಜ್ಯ ಸರ್ಕಾರದ ಆದೇಶದಂತೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ ಪೂರ್ಣಗೊಳ್ಳಲಿದೆ. ಇನ್ನೂ ಹಲವು ಕುಟುಂಬ ಸಮೀಕ್ಷೆಗೆ ಒಳಪಟ್ಟಿಲ್ಲ. … Read more