ಇವತ್ತು ಪಲ್ಸ್ ಪೋಲಿಯೊ, ಶಿವಮೊಗ್ಗ ಜಿಲ್ಲೆಯಲ್ಲಿ ಹೇಗಿದೆ ವ್ಯವಸ್ಥೆ? ಎಷ್ಟು ಬೂತ್ ಸ್ಥಾಪಿಸಲಾಗಿದೆ?
ಶಿವಮೊಗ್ಗ: ಜಿಲ್ಲಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೊ (Pulse Polio) ಲಸಿಕಾ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಲು ಸರ್ವರೂ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ 5 ವರ್ಷದೊಳಗಿನ 1,45,255 ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದೆ. ಅತಿ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾದ ಕೊಳಚೆ ಪ್ರದೇಶ, ಅಲೆಮಾರಿ ಜನಾಂಗ, ಇಟ್ಟಿಗೆ ಬಟ್ಟಿಗಳು, ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಪ್ರದೇಶಗಳು, ಬಸ್ ನಿಲ್ದಾಣ, ರೈಲು ನಿಲ್ದಾಣ ಸೇರಿದಂತೆ … Read more