BREAKING NEWS | ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭ, ಡಿಸಿ ಆದೇಶ

Shimoga Dc Dr.selvamani

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭ ಸಂಬಂಧ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ‌. ಫೆ.28ರಂದು ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅದೇಶ ಹೊರಡಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್ ಸಂಬಂಧ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜು ಪುನಾರಂಭಕ್ಕೆ ದಿನಾಂಕ ನಿಗದಿ

Shimoga Dc Dr.selvamani

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳ ಪುನಾರಂಭ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಫೆ.26ರ ಶನಿವಾರದಿಂದ ಶಾಲೆ, ಕಾಲೇಜುಗಳನ್ನು ಪುನಾರಂಭ ಮಾಡುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಹರ್ಷ ಹತ್ಯೆ ಬಳಿಕ ಉಂಟಾಗಿದ್ದ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿತ್ತು. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇದನ್ನೂ ಓದಿ | ಗಾಂಧಿ ಬಜಾರ್ ವಹಿವಾಟು ಸ್ಥಗಿತ, ಇದರ ಪರಿಣಾಮವೇನು? ಇಲ್ಲಿದೆ ಟಾಪ್ 5 ಪಾಯಿಂಟ್

ಶಿವಮೊಗ್ಗದಲ್ಲಿ ಹಿಜಾಬ್ ಹೋರಾಟ ಮತ್ತಷ್ಟು ತೀವ್ರ, ಇವತ್ತು ಎಲ್ಲೆಲ್ಲಿ ಏನೇನಾಯ್ತು?

Students Wearing Burka in DVS Campus

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022 ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ಹೊಸ ಸ್ವರೂಪ ಪಡೆದುಕೊಂಡಿದೆ. ಹಿಜಾಬ್ ಹೋರಾಟ ಶಿಕ್ಷಣ ಸಂಸ್ಥೆಗಳ ಬದಲು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತಲುಪಿದೆ. ತಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಸುವುದಾಗಿ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ನಗರದ ವಿವಿಧ ಪದವಿ ಕಾಲೇಜುಗಳಲ್ಲಿ ಇವತ್ತು ಕೂಡ ವಿದ್ಯಾರ್ಥಿನಿಯರು ಹಿಜಾಬ್ ಪರ ಹೋರಾಟ ನಡೆಸಿದರು. ಕೆಲವು ಹೊತ್ತು ಕಾಲೇಜುಗಳ ಪ್ರವೇಶ ದ್ವಾರದಲ್ಲಿ ನಿಂತು ತಮ್ಮ ಹಕ್ಕುಗಳ ಪರವಾಗಿ ವಿದ್ಯಾರ್ಥಿನಿಯರು ಧ್ವನಿ ಏರಿಸಿದರು. … Read more

‘ನಾವೇನಾದರೂ ಕೊಲೆ ಮಾಡಲು ಬಂದಿದ್ದೇವಾ?’ ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯರ ಆಕ್ರೋಶ

shimoga hijab controversy at ATNC college

ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಕಾಲೇಜು ತರಗತಿಗಳು ಪುನಾರಂಭವಾಗಿವೆ. ಸಣ್ಣಪುಟ್ಟ ಗೊಂದಲ ಹೊರತು ಜಿಲ್ಲೆಯಲ್ಲಿ ತರಗತಿಗಳು ಸುಗಮವಾಗಿ ನಡೆದವು. ಕೆಲವು ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಕ್ಕೆ ವಿರೋಧ ವ್ಯಕ್ತಪಡಿಸಿ, ತರಗತಿ ಪ್ರವೇಶಿಸದೆ ಹೊರ ನಡೆದಿದ್ದಾರೆ. ನಗರದ ಎರಡು ಖಾಸಗಿ ಕಾಲೇಜಿನಲ್ಲಿ ಹಿಜಾಬ್ ವಿಚಾರವಾಗಿ ಗೊಂದಲ ಸೃಷ್ಟಿಯಾಗಿತ್ತು. ಬುರ್ಖಾ ಮತ್ತು ಹಿಜಾಬ್ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿನಿಯರು ಕಾಲೇಜು ಆವರಣದಿಂದ ಹಿಂತಿರುಗಿದರು. ಡಿವಿಎಸ್ ಕಾಲೇಜಿನಲ್ಲಿ ಗೊಂದಲ ಶಿವಮೊಗ್ಗದ ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ … Read more

ಶಿವಮೊಗ್ಗ ಜಿಲ್ಲೆಯ ಶಾಲೆ, ಕಾಲೇಜು ಸುತ್ತಮುತ್ತ ನಿಷೇಧಾಜ್ಞೆ, ಮೂರು ಕಾಲೇಜಿಗೆ ಇವತ್ತೂ ರಜೆ

Police Bus at Shimoga BH Road

ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳು ಇವತ್ತಿನಿಂದ ಪುನಾರಂಭವಾಗಲಿದೆ. ಎಲ್ಲಾ ಶಾಲೆ, ಕಾಲೇಜುಗಳ ಬಳಿ ನಿಷೇಧಾಜ್ಞೆ ಮುಂದುವರೆಸಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ. ಈ ನಡುವೆ ಮೂರು ಕಾಲೇಜುಗಳಿಗೆ ಇವತ್ತು ಕೂಡ ರಜೆ ನೀಡಲಾಗಿದೆ. ಹಿಜಾಬ್, ಕೇಸರಿ ಶಾಲೆ ವಿವಾದ ಹಿನ್ನೆಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇವತ್ತು ಕಾಲೇಜು ತರಗತಿಗಳು ಪುನಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾಲೇಜು … Read more

ಶಿವಮೊಗ್ಗ ನಗರದಲ್ಲಿ ವಿಧಿಸಲಾಗಿದ್ದ ಸೆಕ್ಷನ್ 144ರ ನಿಷೇಧಾಜ್ಞೆ ಅಂತ್ಯ

police Route March and Gandhi bazaar after 144 section

ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಸಿಆರ್’ಪಿಸಿ ಸೆಕ್ಷನ್ 144 ಅನ್ವಯ ವಿಧಿಸಲಾಗಿದ್ದ ನಿಷೇಧಾಜ್ಞೆ ಅಂತ್ಯಗೊಂಡಿದೆ. ಶಿವಮೊಗ್ಗ ನಗರ ಸಂಪೂರ್ಣ ಸಹಜ ಸ್ಥಿತಿಗೆ ಮರಳಿದೆ. ವಿದ್ಯಾರ್ಥಿಗಳು ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಫೆ.8ರ ಮಧ್ಯಾಹ್ನದಿಂದ ಫೆ.9ರ ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಿ ತಹಶೀಲ್ದಾರ್ ಡಾ.ನಾಗರಾಜ್ ಅವರು ಆದೇಶ ಹೊರಡಿಸಿದ್ದರು. ಕಳೆದ ರಾತ್ರಿಗೆ ನಿಷೇಧಾಜ್ಞೆ ಅವಧಿ ಮುಗಿದಿದೆ. ಸಹಜ … Read more

ತ್ರಿವರ್ಣ ಧ್ವಜ ಹಾರಿಸಿದವರ ವಿರುದ್ಧ ಕ್ರಮಕ್ಕೆ ಮುಂದಾದ ಪೊಲೀಸರು, ಕಾರಣವೇನು?

Tri-Color-hoisted-in-GFGC-Bapuji-nagara.

ಶಿವಮೊಗ್ಗದ ಲೈವ್.ಕಾಂ | SHIMOGA NEWS | 10 ಫೆಬ್ರವರಿ 2022 ಕೇಸರಿ ಧ್ವಜ ಹಾರಿಸಿದ್ದ ಧ್ವಜ ಸ್ತಂಭದಲ್ಲಿ ತ್ರಿವರ್ಣ ಧ್ವಜ ಹಾರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಶಿವಮೊಗ್ಗದ ಬಾಪೂಜಿನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ NSUI ಸಂಘಟನೆ ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದ್ದರು. ಧ್ವಜಾರೋಹಣ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಕ್ರಮ ಕೈಗೊಳ್ಳಲು ಕಾರಣವೇನು? ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರು, ಕೆಲವರು ‘ಬಾಪೂಜಿನಗರ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾರಿಸಿದ್ದಾರೆ. 144 … Read more

BREAKING NEWS | ರಾಜ್ಯಾದ್ಯಂತ ಮೂರು ದಿನ ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ

breaking news graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷ ತಾರಕಕ್ಕೇರಿದ ಬೆನ್ನಿಗೆ ರಾಜ್ಯಾದ್ಯಂತ ಪ್ರೌಢ ಶಾಲೆ, ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದಾರೆ. ರಾಜ್ಯದ ಎಲ್ಲಾ ಪ್ರೌಢ ಶಾಲೆಗಳು ಮತ್ತು ಕಾಲೇಜುಗಳನ್ನು ಮೂರು ದಿನ ಬಂದ್ ಮಾಡಬೇಕು. ಈ ಕುರಿತು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, … Read more

‘ಹಿಜಾಬ್, ಕೇಸರಿ ಶಾಲು ಧರಿಸಿ ಬಂದರೆ ಸಹ್ಯಾದ್ರಿ ಕಾಲೇಜಿನಲ್ಲಿ ತರಗತಿಗೆ ಪ್ರವೇಶವಿಲ್ಲ’

sahyadri college principal veena

ಶಿವಮೊಗ್ಗದ ಲೈವ್.ಕಾಂ | SHIMOGA NEWS | 7 ಫೆಬ್ರವರಿ 2022 ಸಹ್ಯಾದ್ರಿ ಕಾಲೇಜಿನಲ್ಲಿ ಯುನಿಫಾರಂ ಕಡ್ಡಾಯವೇನಿಲ್ಲ. ಆದರೆ ಹಿಜಾಬ್, ಕೇಸರಿ ಶಾಲು ಧರಿಸಿ ಬಂದರೆ ತರಗತಿಗೆ ಪ್ರವೇಶವಿಲ್ಲ ಎಂದು ಸಹ್ಯಾದ್ರಿ ವಾಣಿಜ್ಯ ಕಾಲೇಜು ಪ್ರಾಂಶುಪಾಲರಾದ ಎಂ.ಕೆ.ವೀಣಾ ತಿಳಿಸಿದ್ದಾರೆ. ಸಹ್ಯಾದ್ರಿ ಕಾಲೇಜಿನಲ್ಲಿ ಇವತ್ತು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಂಶುಪಾಲರಾದ ಎಂ.ಕೆ.ವೀಣಾ, ಇವತ್ತಿನ ಬೆಳವಣಿಗೆ ಕುರಿತು ಕುವೆಂಪು ವಿವಿಯ ಹಿರಿಯ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು. ಪ್ರಾಂಶುಪಾಲರು … Read more

ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲೂ ಹಿಜಾಬ್, ಕೇಸರಿ ಶಾಲು ಸಂಘರ್ಷ

070222 Saffron Shawl Controversy in Sahyadri College shimoga

ಶಿವಮೊಗ್ಗದ ಲೈವ್.ಕಾಂ | SHIMOGA CRIME NEWS | 7 ಫೆಬ್ರವರಿ 2022 ಹಿಜಾಬ್ ವಿವಾದ ಶಿವಮೊಗ್ಗಕ್ಕೂ ಕಾಲಿಟ್ಟಿದೆ. ವಸ್ತ್ರ ಸಂಹಿತೆ ಕಡ್ಡಾಯಗೊಳಿಸಬೇಕು ಎಂದು ಆಗ್ರಹಿಸಿ ಸಹ್ಯಾದ್ರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ, ದಿಢೀರ್ ಪ್ರತಿಭಟನೆ ನಡೆಸಿದರು. ಸಹ್ಯಾದ್ರಿ ಕಾಲೇಜು ಕ್ಯಾಂಪಸ್’ನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ವಾಣಿಜ್ಯ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಬಂದಿದ್ದರು. ಇದಕ್ಕೆ ಕಾಲೇಜು ಆಡಳಿತ ಮಂಡಳಿ ಅವಕಾಶ ನೀಡಲಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಕ್ಯಾಂಪಸ್’ನಲ್ಲಿ ವಿದ್ಯಾರ್ಥಿಗಳ … Read more