ಶಿವಮೊಗ್ಗದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ ನಿಷೇಧ, ಯಾವಾಗ?
ಶಿವಮೊಗ್ಗ: ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕಲರ್ ಪೇಪರ್ (Color Paper) ಬ್ಲಾಸ್ಟಿಂಗ್ ಮತ್ತು ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಲಾಗಿದೆ. ಶಿವಮೊಗ್ಗ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಆ.27 ರಿಂದ ಸೆಪ್ಟೆಂಬರ್ 15ರವರೆಗೆ ಜಿಲ್ಲೆಯಾದ್ಯಂತ ಕಲರ್ ಪೇಪರ್ ಬ್ಲಾಸ್ಟಿಂಗ್ ಮತ್ತು ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಇದನ್ನೂ ಓದಿ » ಶಿವಮೊಗ್ಗದ ಖಾಸಗಿ ಬಡಾವಣೆಗಳಲ್ಲಿ ನಿವೇಶನ ಹಂಚಿಕೆ, ಅರ್ಜಿ ಸಲ್ಲಿಕೆ … Read more