ತರಕಾರಿ ಹಾರ ಧರಿಸಿ, ನಡುರಸ್ತೆಯಲ್ಲೇ ಒಲೆ ಹಚ್ಚಿ, ಅಡುಗೆ ಮಾಡಿ ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021 ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ ನಡೆಸಲಾಯಿತು. ನಡು ರಸ್ತೆಯಲ್ಲೇ ಸೌದೆ ಒಲೆ ಹಚ್ಚಿ ಅಡುಗೆ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಶಿವಪ್ಪನಾಯಕ ಪ್ರತಿಮೆ ಬಳಿ ನಡು ರಸ್ತೆಯಲ್ಲೇ ಒಲೆ ಹಚ್ಚಿ ವಿಭಿನ್ನವಾಗಿ ಪ್ರತಿಭಟಿಸಲಾಯಿತು. ಬೋಂಡ ಕರೆದು, ಟೀ ಮಾಡಿ ಎಲ್ಲರಿಗೂ ಹಂಚಿ ಪ್ರತಿಭಟನೆ ನಡೆಸಲಾಯಿತು. … Read more