BREAKING | ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ, ಶಾಲೆ, ಕಾಲೇಜಿಗೆ ರಜೆ

Shimoga Dc Dr.selvamani

SHIVAMOGGA LIVE | 14 ಮಾರ್ಚ್ 2022 ಶಾಲೆಯಲ್ಲಿ ಸಮವಸ್ತç ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಸಮವಸ್ತç ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ … Read more

ಶಿವಮೊಗ್ಗದಲ್ಲಿ ಶಾಲೆ, ಕಾಲೇಜು ಪುನಾರಂಭ, ಮುಂದುವರೆದ ಹಿಜಾಬ್ ವಿವಾದ

Burkha-Wearing-Students-Stand-outside-DVS-college

SHIVAMOGGA LIVE NEWS | 28 ಫೆಬ್ರವರಿ 2022 ಒಂದು ವಾರದ ಬಳಿಕ ಶಿವಮೊಗ್ಗ ನಗರದಲ್ಲಿ ಶಾಲೆ, ಕಾಲೇಜುಗಳು ಪುನಾರಂಭವಾಗಿವೆ. ತಣ್ಣಗಾಗಿದ್ದ ಹಿಜಾಬ್ ವಿವಾದ ಪುನಃ ತಲೆ ಎತ್ತಿದೆ. ಹಿಜಾಬ್ ತೆಗೆಯುವಂತೆ ತಿಳಿಸಿದ್ದರಿಂದ ವಿದ್ಯಾರ್ಥಿನಿಯರು ಕಾಲೇಜು ಪ್ರವೇಶಿಸದೆ ಹೊರಗೆ ನಿಂತಿದ್ದಾರೆ. ಡಿವಿಎಸ್ ಕಾಲೇಜಿನಲ್ಲಿ ಸಮವಸ್ತ್ರದೊಂದಿಗೆ ಕಾಲೇಜಿನ ಒಳಗೆ ಬರುವಂತೆ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಸೂಚಿಸಿದೆ. ಈ ಸಂಬಂಧ ಗೇಟ್ ಮುಂಭಾಗ ನೊಟೀಸ್ ಕೂಡ ಅಂಟಿಸಲಾಗಿದೆ. ಹಿಜಾಬ್ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿನಿಯರು ಕಾಲೇಜು ಆವರಣವನ್ನು ಪ್ರವೇಶಿಸಲು ನಿರಾಕರಿಸಿದ್ದಾರೆ. ಕಾಲೇಜು ಮುಂದೆ … Read more

ಶಿವಮೊಗ್ಗದಲ್ಲಿ ಹಿಜಾಬ್ ಹೋರಾಟ ಮತ್ತಷ್ಟು ತೀವ್ರ, ಇವತ್ತು ಎಲ್ಲೆಲ್ಲಿ ಏನೇನಾಯ್ತು?

Students Wearing Burka in DVS Campus

ಶಿವಮೊಗ್ಗದ ಲೈವ್.ಕಾಂ | SHIMOGA NEWS | 17 ಫೆಬ್ರವರಿ 2022 ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ಹೊಸ ಸ್ವರೂಪ ಪಡೆದುಕೊಂಡಿದೆ. ಹಿಜಾಬ್ ಹೋರಾಟ ಶಿಕ್ಷಣ ಸಂಸ್ಥೆಗಳ ಬದಲು ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತಲುಪಿದೆ. ತಮ್ಮ ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರೆಸುವುದಾಗಿ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ನಗರದ ವಿವಿಧ ಪದವಿ ಕಾಲೇಜುಗಳಲ್ಲಿ ಇವತ್ತು ಕೂಡ ವಿದ್ಯಾರ್ಥಿನಿಯರು ಹಿಜಾಬ್ ಪರ ಹೋರಾಟ ನಡೆಸಿದರು. ಕೆಲವು ಹೊತ್ತು ಕಾಲೇಜುಗಳ ಪ್ರವೇಶ ದ್ವಾರದಲ್ಲಿ ನಿಂತು ತಮ್ಮ ಹಕ್ಕುಗಳ ಪರವಾಗಿ ವಿದ್ಯಾರ್ಥಿನಿಯರು ಧ್ವನಿ ಏರಿಸಿದರು. … Read more

ನಾಳೆಯಿಂದ ಕಾಲೇಜುಗಳು ಪುನಾರಂಭ, ಹೇಗಿದೆ ಸಿದ್ಧತೆ? ಎಷ್ಟಿದೆ ಬಂದೋಬಸ್ತ್?

Police Bus at Shimoga BH Road

ಶಿವಮೊಗ್ಗದ ಲೈವ್.ಕಾಂ | SHIMOGA NEWS | 15 ಫೆಬ್ರವರಿ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಕಾಲೇಜುಗಳು ಪುನಾರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಿಜಾಬ್, ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿಯು ರಜೆ ಘೋಷಿಸಲಾಗಿತ್ತು. ಸಂಘರ್ಷದ ಬಳಿಕ ಕಾಲೇಜುಗಳು ಪುನಾರಂಭ ಆಗುತ್ತಿದೆ. ಇದಕ್ಕೆ ಪೂರ್ವ ಸಿದ್ಧತೆಯನ್ನು ಕೈಗೊಳ್ಳಲಾಗುತ್ತಿದೆ. ಗಲಾಟೆ, ಕಲ್ಲು ತೂರಾಟದ ಹಿನ್ನೆಲೆ ಕಾಲೇಜುಗಳು ಕಟ್ಟುನಿಟ್ಟು ಕ್ರಮ ಕೈಗೊಂಡಿವೆ. ಖಾಸಗಿ ಶಾಲೆ, ಕಾಲೇಜು ಕ್ಯಾಂಪಸ್’ಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಏನೆಲ್ಲ ಕ್ರಮ … Read more

ಶಿವಮೊಗ್ಗದಲ್ಲಿ ಹಿಜಾಬ್’ಗಾಗಿ ಪರೀಕ್ಷೆಯನ್ನೇ ತ್ಯಜಿಸಿದ 13 ವಿದ್ಯಾರ್ಥಿನಿಯರು

Police Bus at Shimoga BH Road

ಶಿವಮೊಗ್ಗದ ಲೈವ್.ಕಾಂ | SHIMOGA NEWS | 14 ಫೆಬ್ರವರಿ 2022 ಶಿವಮೊಗ್ಗದಲ್ಲಿ ಹಿಜಾಬ್ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ ವಿದ್ಯಾರ್ಥಿನಿಯರು ಪರೀಕ್ಷೆ ತ್ಯಜಿಸಿ ಹೊರ ನಡೆದಿದ್ದಾರೆ. ಬಿ.ಹೆಚ್.ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜ ಪ್ರೌಢಶಾಲೆ ವಿಭಾಗದಲ್ಲಿ ಘಟನೆ ಸಂಭವಿಸಿದೆ. 13 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ಹೊರ ನಡೆದಿದ್ದಾರೆ. ಎಂದಿನಂತೆ ವಿದ್ಯಾರ್ಥಿನಿಯರು ಪರೀಕ್ಷಾ ಕೊಠಡಿಗೆ ತೆರಳಿದ್ದರು. ಆದರೆ ಹೈಕೋರ್ಟ್ ಆದೇಶದ ಹಿನ್ನೆಲೆ ಹಿಜಾಬ್ ಧರಿಸದಂತೆ ಶಿಕ್ಷಕರು ಸೂಚಿಸಿದರು. ಪರೀಕ್ಷಾ ಕೊಠಡಿಯಿಂದ ಹೊರ … Read more

ಹಿಜಾಬ್, ಕೇಸರಿ ಶಾಲು ವಿವಾದ, ಮಂಗಳವಾರ ಜಿಲ್ಲೆಯ ಯಾವ್ಯಾವ ಕಾಲೇಜಿನಲ್ಲಿ ಏನೇನಾಯ್ತು?

saffron flag hoisted at bapuji nagara college in shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 9 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷ ಮಂಗಳವಾರ ಶಿವಮೊಗ್ಗ ಜಿಲ್ಲೆಯ ಹಲವು ಕಾಲೇಜಿಗೆ ವ್ಯಾಪಿಸಿತು. ವಿವಿಧೆಡೆ ಪ್ರತಿಭಟನೆಗಳನ್ನು ನಡೆಸಲಾಯಿತು. ಕೆಲವು ಕಡೆಯಂತೂ ಪ್ರತಿಭಟನೆ ತೀವ್ರ ಸ್ವರೂಪ ಪಡೆದು, ವಿಕೋಪಕ್ಕೆ ತಿರುಗಿತು. ಜಿಲ್ಲೆಯಾದ್ಯಂತ ಏನೆಲ್ಲ ಆಯ್ತು? ಸಹ್ಯಾದ್ರಿ ಕಾಲೇಜು | ಮಂಗಳವಾರವು ಹಿಜಾಬ್, ಬುರ್ಖಾ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೇಸರಿ ಶಾಲು ಧರಿಸುವ ಬದಲು, ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು. ಕಾಲೇಜು ಆವರಣದಲ್ಲಿ ಮೆರವಣಿಗೆ ನಡೆಸಿದರು. … Read more

ಶಿವಮೊಗ್ಗದ ವ್ಯಾಪಾರಿಗಳಿಗೆ ಗಾಯದ ಮೇಲೆ ಬರೆ ಎಳೆದ ಹಿಜಾಬ್, ಕೇಸರಿ ಶಾಲು ಸಂಘರ್ಷ

080222 Shops Closed due to 144 Section

ಶಿವಮೊಗ್ಗದ ಲೈವ್.ಕಾಂ | SHIMOGA NEWS | 8 ಫೆಬ್ರವರಿ 2022 ಹಿಜಾಬ್, ಕೇಸರಿ ಶಾಲು ಸಂಘರ್ಷ ಶಿವಮೊಗ್ಗದ ವ್ಯಾಪಾರಿಗಳಿಗೆ ಬರೆ ಎಳೆದಿದೆ. ನಿಷೇಧಾಜ್ಞೆ ಜಾರಿಗೊಳಿಸಿದ ಬೆನ್ನಿಗೆ ನಗರದ ಬಹುತೇಕ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಗಿದೆ. ಈಗಾಗಲೇ ಲಾಕ್ ಡೌನ್’ನಿಂದಾಗಿ ಕಂಗೆಟ್ಟಿದ್ದ ವ್ಯಾಪಾರಿಗಳು, ಈ ವಿವಾದದಿಂದಾಗಿ ಮತ್ತಷ್ಟು ಸಂಕಷ್ಟಕ್ಕೀಡಾಗಿದ್ದಾರೆ. ಶಿವಮೊಗ್ಗ ನಗರದಲ್ಲಿ ಫೆಬ್ರವರಿ 8 ಮತ್ತು 9ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜನ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಈ ನಡುವೆ ಇವತ್ತು ಬಹುತೇಕ ಅಂಗಡಿ ಮುಂಗಟ್ಟು ಬಂದ್ ಮಾಡಿಸಲಾಯಿತು. ಮಧ್ಯಾಹ್ನದ … Read more

ಭದ್ರಾವತಿಯಲ್ಲಿ ಹಿಜಾಬ್ ವಿರುದ್ಧ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

Hijab-Controversy-in-Bhadravati-Sir-MV-College

ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 1 ಫೆಬ್ರವರಿ 2022 ಉಡುಪಿ ಕಾಲೇಜಿನ ಹಿಜಾಬ್ ವಿವಾದ ಜೀವಂತವಾಗಿದೆ. ಈ ಮಧ್ಯೆ ಭದ್ರಾವತಿಯ ಪ್ರತಿಷ್ಠಿತ ಕಾಲೇಜಿನಲ್ಲೂ ಇದೇ ರೀತಿಯ ವಿವಾದ ಭುಗಿಲೆದ್ದಿದೆ. ಸಮವಸ್ತ್ರವಿದ್ದರೂ ಕೆಲವರಿಗೊಂದು, ಉಳಿದವರಿಗೊಂದು ನೀತಿ ಅನುಸರಿಸದಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಭದ್ರಾವತಿ ನ್ಯೂಸ್ ಟೌನ್’ನ ಸರ್.ಎಂ.ವಿ.ಕಾಲೇಜಿನಲ್ಲಿ ಇವತ್ತು ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು, ಹಿಂದೂ ಸಂಘಟನೆಗಳ ಕಾರ್ಯಕರ್ತರು … Read more

‘ಶೇಷಗಿರಿ ಭಟ್ ಹಠಾವೋ, ಸಿಗಂದೂರು ಬಚಾವೊ ಘೋಷಣೆಯೊಂದಿಗೆ ಸಿಗಂದೂರು ಚಲೋ’

Siganduru-Temple-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಅಕ್ಟೋಬರ್ 2020 ಶೇಷಗಿರಿ ಭಟ್ ಹಠಾವೊ, ಸಿಗಂದೂರು ಬಚಾವೋ ಘೋಷಣೆಯೊಂದಿಗೆ ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನಾ ಸಂಘದ ವತಿಯಿಂದ ಸಿಗಂದೂರು ಚಲೋ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಸೈದಪ್ಪ ಗುತ್ತೇದಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೈದಾಪುರ ಗುತ್ತೇದಾರ್ ಅವರು, ಶೇಷಗಿರಿ ಭಟ್ ಅವರ ಸಹೋದರ ದೇವಸ್ಥಾನದಲ್ಲಿ ಮಾಡಿದ ರಂಪಾಟ, ಹಲ್ಲೆ ವಿರುದ್ಧ ಜಿಲ್ಲಾಧಿಕಾರಿ ಅವರು ಕ್ರಮ ಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 29ರಂದು ಸಿಗಂದೂರು ಲಾಂಚ್‍ನಿಂದ ದೇವಸ್ಥಾನದವರೆಗೆ … Read more

ಸಿಗಂದೂರು ದೇಗುಲ ಮುಜರಾಯಿಗೆ ಸೇರಿಸುವ ವಿಚಾರ, ಚರ್ಚೆ ಬಳಿಕ ಮುಂದಿನ ಕ್ರಮ ಅಂದರು ಸಿಎಂ

181020 Yedyurappa Visit Shikaripura Doctors Check 1

ಶಿವಮೊಗ್ಗ ಲೈವ್.ಕಾಂ | SHIMOGA | 18 ಅಕ್ಟೋಬರ್ 2020 ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿನ ಗೊಂದಲಗಳ ಕುರಿತು ಜನಪ್ರತಿನಿಧಿಗಳು, ಅಧಿಕಾರಿhiಗಳ ಜೊತೆ ಸೇರಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ಶಿಕಾರಿಪುರ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸಿಗಂದೂರಿನಲ್ಲಿ ಗಲಾಟೆಗಳು ನಡೆಯುತ್ತಿವೆ. ದೇವರ ಹೆಸರಲ್ಲಿ ಇಂತಹ ಘಟನೆಗಳು ನಡೆಯುವುದು ಶೋಭೆಯಲ್ಲ ಎಂದರು. ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿಸುವ ಕುರಿತು ಕೇಳಿದ ಪ್ರಶ್ನೆಗೆ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ, ಶಾಸಕರಾದ ಹಾಲಪ್ಪ, ಕುಮಾರ್ … Read more