ಶಿವಮೊಗ್ಗದ ಹಾಲು ಉತ್ಪಾದಕರಿಗೆ DCC ಬ್ಯಾಂಕ್‌ನಿಂದ ಸಾಲ, ಹಸು, ಎಮ್ಮೆ ಸಾಕಾಣಿಕೆಗೆ ಶೂನ್ಯ ಬಡ್ಡಿ ದರದಲ್ಲಿ ನೆರವು

RM-Manjunatha-Gowda-Press-meet-in-DCC-Bank

ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ (DCC BANK) ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಶೇ.3ರ ಬಡ್ಡಿ ದರದಲ್ಲಿ ಗರಿಷ್ಠ ₹80,000ದವರೆಗೆ ಮಧ್ಯಮಾವಧಿ ಪಶುಸಂಗೋಪನೆ ಸಾಲ (Dairy farmers loan) ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ತಿಳಿಸಿದ್ದಾರೆ. ಡಿಸಿಸಿ ಬ್ಯಾಂಕ್‌ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ ಗೌಡ, ಶಿಮುಲ್‌ ಮತ್ತು ಡಿಸಿಸಿ ಬ್ಯಾಂಕ್‌ ಒಪ್ಪಂದ ಮಾಡಿಕೊಳ್ಳಲಾಗಿದೆ. ಜಿಲ್ಲೆಯ 542 ಹಾಲು ಉತ್ಪಾದಕ ಸಹಕಾರ ಸಂಘಗಳ ಖಾತೆಯನ್ನು ಬ್ಯಾಂಕಿನಲ್ಲಿ ತೆರೆಯಲಾಗಿದೆ. … Read more