ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ರಸ್ತೆ ಪಕ್ಕದಲ್ಲಿ ಪತ್ತೆ
ಸಾಗರ: ಕಳೆದ ಕೆಲವು ದಿನದಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು (Person) ಶವವಾಗಿ ಪತ್ತೆಯಾಗಿದ್ದಾರೆ. ಸಾಗರ ತಾಲೂಕು ಯಲಗಳಲೆ ಗ್ರಾಮದ ಸಮೀಪ, ರಸ್ತೆಯ ಪಕ್ಕದಲ್ಲಿ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಜಂಬಗಾರು ಗ್ರಾಮದ ಹನುಮಂತಪ್ಪ (65) ಎಂದು ಗುರುತಿಸಲಾಗಿದೆ. ಖಿನ್ನತೆಯಿಂದ ಬಳಲುತ್ತಿದ್ದ ಹನುಮಂತಪ್ಪ ಅವರು ಕಾಣೆಯಾಗಿದ್ದಾರೆ ಎಂದು 15 ದಿನಗಳ ಹಿಂದೆ ಅವರ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ನೀರಿನ ತೊಟ್ಟಿಯಲ್ಲಿ ಕಾಡು ಕೋಣದ ಮೃತದೇಹ ಪತ್ತೆ