ಡೆವಿಲ್‌ ಸಿನಿಮಾ ಸಂಭ್ರಮಾಚರಣೆ ಮುಗಿಸಿ ತೆರಳುವಾಗ ಅಪಘಾತ, ಯುವಕ ಸಾವು

Bike-and-rajahamsa-bus-mishap-near-ranjadakatte-in-shimoga

ತೀರ್ಥಹಳ್ಳಿ: ಡೆವಿಲ್‌ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್‌ (Rajahamsa bus) ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿ ತಾಲೂಕು ರಂಜದಕಟ್ಟೆ ಸಮೀಪದ ಶಿವರಾಜಪುರದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗದಲ್ಲಿ ಡೆವಿಲ್‌ ಮೇನಿಯಾ, ದರ್ಶನ್‌ ಅಭಿಮಾನಿಗಳ ಅಬ್ಬರ, ಹೇಗಿದೆ ಸಂಭ್ರಮಾಚರಣೆ? ಮೀನುಗುಂದ ಗ್ರಾಮದ ಪುನೀತ್‌ (26) ಮೃತ ದುರ್ದೈವಿ. ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಡೆವಿಲ್‌ ಸಿನಿಮಾದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುನೀತ್‌ ತಮ್ಮ ಬೈಕಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ರಾಜಹಂಸ ಬಸ್‌ ಡಿಕ್ಕಿಯಾಗಿ … Read more

ಗಾಡಿಕೊಪ್ಪ ಬಳಿ ಕಾರು ಡಿಕ್ಕಿ, 7 ಎಮ್ಮೆಗಳು ಸ್ಥಳದಲ್ಲೇ ಸಾವು

Car-Accident-at-Gadikoppa-Buffalo-dies

SHIVAMOGGA LIVE NEWS | ACCIDENT | 16 ಮೇ 2022 ಕಾರು ಡಿಕ್ಕಿಯಾಗಿ ಏಳು ಎಮ್ಮೆಗಳು ಸ್ಥಳದಲ್ಲೆ ಸಾವನ್ನಪ್ಪಿವೆ. ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿದ್ದಾರೆ. ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಗಾಡಿಕೊಪ್ಪದ ತುಂಗಾ ನಾಲೆ ಬಳಿ ಭಾನುವಾರ ರಾತ್ರಿ ಘಟನೆ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಡಿಕ್ಕಿ ಹೊಡೆದಿದೆ. ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿರುವುದು ಗೊತ್ತಾಗದೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಏಳು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ. ರಸ್ತೆ ಮೇಲೆ ಎಮ್ಮೆಗಳ ಮೃತದೇಹಗಳು … Read more

ಶಿವಮೊಗ್ಗ ತ್ಯಾವರೆಕೊಪ್ಪ ಸಫಾರಿಯಲ್ಲಿ ಹುಲಿ ಸಾವು

Tiger-Dies-at-Lion-Tiger-safari-in-Shimoga

SHIVAMOGGA LIVE NEWS | TIGER| 12 ಮೇ 2022 ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಗಂಡು ಹುಲಿಯೊಂದು ಮೃತಪಟ್ಟಿದೆ. ರಾಮ (17) ಮೃತಪಟ್ಟಿರುವ ಹುಲಿ. ವಯೋಸಹಜ ಕಾರಣದಿಂದ ಹುಲಿ ಮೃತಪಟ್ಟಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾನೂನು ರೀತಿ ಮರಣೋತ್ತರ ಪರೀಕ್ಷೆ ನಡೆದಿದ್ದು, ದಹನ ಪ್ರಕ್ರಿಯೆ ನಡಸಲಾಗಿದೆ. ಸದ್ಯ ಹುಲಿ ಮತ್ತು ಸಿಂಹಧಾಮದಲ್ಲಿ ಪ್ರಸ್ತುತ 5 ಹುಲಿಗಳಿವೆ. ಇದನ್ನೂ ಓದಿ ⇒ ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ನೀರಿನ ರಭಸಕ್ಕೆ ಹಳ್ಳದಲ್ಲಿ ಕೊಚ್ಚಿ ಹೋದ ಮಹಿಳೆ

Thirrthahalli Taluk Graphics

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 07 ಅಕ್ಟೋಬರ್ 2021 ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಮಹಿಳೆಯೊಬ್ಬರು ಕೊಚ್ಚಿ ಹೋಗಿದ್ದಾರೆ. ಹಳ್ಳ ದಾಟುತ್ತಿದ್ದಾಗ ಘಟನೆ ಸಂಭವಿಸಿದೆ. ಸ್ವಲ್ಪ ದೂರದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕು ನೆರಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಡಿ ಬಳಿ ಹಳ್ಳ ದಾಟುವಾಗ ರೈತ ಮಹಿಳೆಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ. ಅಗಸರಕೊಪ್ಪದ ಜೆರಾಲ್ಡ್ ಮಚಾದೋ ಅವರ ಪತ್ನಿ ಜಸ್ಟಿನ್ ಮಚಾದೋ (36) ಮೃತ ದು ರ್ದೈವಿ. ಗದ್ದೆಗೆ ಹೋಗಲು ಹಳ್ಳ ದಾಟುವಾಗ … Read more

ರಿಪ್ಪನ್ ಪೇಟೆ ಬಳಿ ಕಾಡಲ್ಲಿ ಯುವತಿ ಹತ್ಯೆ ಕೇಸ್, ಶಿವಮೊಗ್ಗದಲ್ಲಿ ಪ್ರಿಯಕರ ಸಾವು, ಘಟನೆಗೆ ಕಾರಣವಾಯ್ತಾ ಭದ್ರಾವತಿ ಯುವಕನ ಪರಿಚಯ?

270821 Ripponpete Murder Case Youth Dies at Mc Gann

ಶಿವಮೊಗ್ಗ ಲೈವ್.ಕಾಂ | RIPPONPETE / SHIMOGA NEWS | 27 ಆಗಸ್ಟ್ 2021 ನೇರಲಿಗೆ ಅರಣ್ಯ ಪ್ರದೇಶದಲ್ಲಿ ಯುವತಿ ಹತ್ಯೆ ಮಾಡಿ, ವಿಷ ಸೇವಿಸಿದ್ದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಕೊಲೆಗೈದು ಆತ್ಮಹತ್ಯೆಗೆ ಯತ್ನ ಶಿವಮೊಗ್ಗದ ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿನಿ ಕವಿತಾ (22) ಎಂಬಾಕೆಯನ್ನು ಆಕೆಯ ಸ್ನೇಹಿತ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಶಿವಮೂರ್ತಿ ಕೊಲೆ … Read more

ಸೀರೆಯಿಂದ ಕಟ್ಟಿದ್ದ ಜೋಕಾಲಿಗೆ ಸಿಲುಕಿ ಭದ್ರಾವತಿಯ ಬಾಲಕ ಶಿವಮೊಗ್ಗದಲ್ಲಿ ಸಾವು

jayanagara police station in shimoga

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021 ಆಟವಾಡುತ್ತಿದ್ದ ಬಾಲಕನಿಗೆ ಜೋಕಾಲಿಯೇ ಉರುಳಾಗಿದ್ದು, ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಶಿವಮೊಗ್ಗದ ಜಯನಗರದಲ್ಲಿ ಘಟನೆ ಸಂಭವಿಸಿದೆ. ಭರತ್ (12) ಮೃತ ದುರ್ದೈವಿ. ಸೀರೆಯಿಂದ ಕಟ್ಟಿದ ಜೋಕಾಲಿ ಕುತ್ತಿಗೆಗೆ ಬಿಗಿದುಕೊಂಡಿದ್ದು, ಭರತ್ ಕೊನೆಯುಸಿರೆಳೆದಿದ್ದಾನೆ. ಹೇಗಾಯ್ತು ಘಟನೆ? ಹಲ್ಲಿನ ಸಮಸ್ಯೆಗೆ ಚಿಕಿತ್ಸೆ ಪಡೆಯಲು ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಭರತ ತನ್ನ ತಾಯಿಯೊಂದಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದ. ಜಯನಗರದಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಮನೆಯ ಕೊಠಡಿಯಲ್ಲಿ ಸೀರೆಯಿಂದ … Read more

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೃತರಾದ ಇಬ್ಬರು ಸವಾರರ ಗುರುತು ಪತ್ತೆ

Thirthahalli Name Graphics

ಶಿವಮೊಗ್ಗ ಲೈವ್.ಕಾಂ |THIRTHAHALLI NEWS | 28 ಜುಲೈ 2021 ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಮೃತರಾದ ಸವಾರರ ಗುರುತು ಪತ್ತೆಯಾಗಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ತಾಲೂಕಿನ ಬೂದಿಗೆರೆಯ ಪ್ರಭು (22) ಮತ್ತು ರಮೇಶ್ (25) ಮೃತರು. ಇವರು ಬೆಜ್ಜವಳ್ಳಿ ಕಡೆಯಿಂದ ಆಯನೂರು ಕಡೆಗೆ ಬರುವ ರಸ್ತೆಯಲ್ಲಿ ಹೊರಬೈಲು ಬಳಿ ಬೈಕ್‍ನಲ್ಲಿ ಬರುವಾಗ ಅಪಘಾತವಾಗಿದೆ. ಹೇಗಾಯ್ತು ಅಪಘಾತ? ಪ್ರಭು ಬೈಕ್ ಚಲಾಯಿಸುತ್ತಿದ್ದ. ಅತಿ ವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಓಡಿಸಿದ್ದರಿಂದ … Read more

BREAKING NEWS | ಅಭಿನಯ ಶಾರದೆ ನಟಿ ಜಯಂತಿ ಇನ್ನಿಲ್ಲ

260721 Actress Jayanthi No More 1

ಶಿವಮೊಗ್ಗ ಲೈವ್.ಕಾಂ | STATE NEWS | 26 ಜುಲೈ 2021 ಕನ್ನಡ ಚಿತ್ರರಂಗದ ಅಭಿನಯ ಶಾರದೆ, ಹಿರಿಯ ನಟಿ ಜಯಂತಿ (76) ವಿಧಿವಶರಾಗಿದ್ದಾರೆ. ಬೆಂಗಳೂರಿನ ತಮ್ಮ ಮನೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಅಸ್ತಮ ಮತ್ತು ವಯೋಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಅನಾರೋಗ್ಯದ ಕಾರಣ ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದರು. 500ಕ್ಕೂ ಹೆಚ್ಚು ಸಿನಿಮಾಗಳು ಜಯಂತಿ ಅವರು 500ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದರು. 1963ರಲ್ಲಿ ವೈ.ಆರ್.ಸ್ವಾಮಿ ನಿರ್ದೇಶನದ ಜೇನುಗೂಡು ಚಿತ್ರದ … Read more

ಜೋಕಾಲಿಯ ಸೀರೆ ಕೊರಳಿಗೆ ಸುತ್ತಿಕೊಂಡು ಉಸಿರುಗಟ್ಟಿ ಬಾಲಕ ಸಾವು

HIVAMOGGA-NEWS- map

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಜುಲೈ 2021 ಮಕ್ಕಳ ಆಟಕ್ಕಾಗಿ ಕಟ್ಟಿದ್ದ ಜೋಕಾಲಿಯ ಸೀರೆ ಕೊರಳಿಗೆ ಸುತ್ತಿಕೊಂಡ ಪರಿಣಾಮ ಬಾಲಕನೊಬ್ಬ ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಕಿಶೋರ್ (13) ಮೃತ ಬಾಲಕ. ಶಿವಮೊಗ್ಗ ತಾಲೂಕು ಹಾಡೋನಹಳ್ಳಿಯ ಮನೆಯೊಂದರಲ್ಲಿ ಘಟನೆ ಸಂಭವಿಸಿದೆ. ಕಿಶೋರ್, ಮೂಲತಃ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದೊಡ್ಡೇರಿ ಗ್ರಾಮದವನು. ಹಾಡೋನಹಳ್ಳಿಯ ದೊಡ್ಡಮ್ಮ ಜಯಮ್ಮ ಎಂಬುವರ ಮನೆಯಲ್ಲಿದ್ದುಕೊಂಡು ಕಿಶೋರ್‌ ವಿದ್ಯಾಭ್ಯಾಸ ಮಾಡುತ್ತಿದ್ದ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಣ್ಣ ಮಗುವಿಗಾಗಿ ಕಟ್ಟಿದ ಸೀರೆಯಲ್ಲಿ ಜೋಕಾಲಿ … Read more

ಹಿರಿಯ ಸಾಹಿತಿ ಡಾ.ಲಕ್ಷ್ಮೀನಾರಾಯಣ ಭಟ್ಟ ಇನ್ನಿಲ್ಲ

shivamogga graphics map

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MARCH 2021 ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಡಾ. ಎನ್‍.ಎಸ್.ಲಕ್ಷ್ಮೀನಾರಾಯಣ ಭಟ್ಟ (85) ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ಬನಶಂಕರಿಯ ನಿವಾಸದಲ್ಲಿ ಬೆಳಗಿನ ಜಾವ ಡಾ. ಲಕ್ಷ್ಮೀನಾರಾಯಣ ಭಟ್ಟ ಅವರು ಕೊನೆಯುಸಿರೆಳೆದಿದ್ದಾರೆ. ಮನೆಯ ಬಳಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಡಾ. ಲಕ್ಷ್ಮೀನಾರಾಯಣ ಭಟ್ಟ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯವರು. 1936ರ ಅಕ್ಟೋಬರ್ 29ರಂದು ಶಿವಮೊಗ್ಗದಲ್ಲಿ ಜನಿಸಿದರು. ತಂದೆ ಶಿವರಾಮ ಭಟ್ಟ, … Read more