ಹಿಂದಿ ದಿವಸ್ ವಿರುದ್ಧ ಶಿವಮೊಗ್ಗದಲ್ಲಿ ಕರಾಳ ದಿನಾಚರಣೆ, ಭಾಷೆ ಹೇರಿಕೆ ಮಾಡದಂತೆ ಸರ್ಕಾರಕ್ಕೆ ಎಚ್ಚರಿಕೆ

140921 Protest Against Hindi Divas

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ಹಿಂದಿ ಭಾಷೆಯನ್ನು ಬಲವಂತವಾಗಿ ಹೇರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ ಪ್ರತಿಭಟನೆ ನಡೆಸಿತು. ಹಿಂದಿ ದಿವಸ್ ಅನ್ನು ಕರಾಳ ದಿನವೆಂದು ಆಚರಿಸಲಾಗುತ್ತಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು, ಸೆಪ್ಟೆಂಬರ್ 14ನ್ನು ಹಿಂದಿ ದಿವಸ್ ಎಂದು ಆಚರಿಸಲಾಗುತ್ತಿದೆ. ಹಿಂದಿಯನ್ನು ಒತ್ತಾಯ ಪೂರ್ವಕವಾಗಿ ಹೇರಿಕೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು. … Read more