ಕಾರು ಚಲಾಯಿಸುವಾಗಲೇ ಹೃದಯಾಘಾತ, ಚಾಲಕ ಸಾವು
ಶಿವಮೊಗ್ಗ: ಚಲಿಸುತ್ತಿದ್ದ ಕಾರಿನಲ್ಲೇ ಹೃದಯಾಘಾತವಾಗಿ (Heart Attack) ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿಯಲ್ಲಿ ಘಟನೆ ಸಂಭವಿಸಿದೆ. ಹುಡ್ಕೊ ಕಾಲೋನಿ ನಿವಾಸಿ ಮಲ್ಲಿಕಾರ್ಜುನ (45) ಮೃತರು. ಕಾರು ಚಲಾಯಿಸುವಾಗ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೆ ಅವರು ಆಸ್ಪತ್ರೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಇದೇ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿನೋಬನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಶಿವಮೊಗ್ಗ ದಸರಾದಲ್ಲಿ ಇವತ್ತು ಏನೇನೆಲ್ಲ ಕಾರ್ಯಕ್ರಮ ಇದೆ? ಇಲ್ಲಿದೆ ಕಂಪ್ಲೀಟ್ … Read more