‘ನಾವೇನಾದರೂ ಕೊಲೆ ಮಾಡಲು ಬಂದಿದ್ದೇವಾ?’ ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯರ ಆಕ್ರೋಶ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022 ಶಿವಮೊಗ್ಗ ಜಿಲ್ಲೆಯಾದ್ಯಂತ ಕಾಲೇಜು ತರಗತಿಗಳು ಪುನಾರಂಭವಾಗಿವೆ. ಸಣ್ಣಪುಟ್ಟ ಗೊಂದಲ ಹೊರತು ಜಿಲ್ಲೆಯಲ್ಲಿ ತರಗತಿಗಳು ಸುಗಮವಾಗಿ ನಡೆದವು. ಕೆಲವು ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಕ್ಕೆ ವಿರೋಧ ವ್ಯಕ್ತಪಡಿಸಿ, ತರಗತಿ ಪ್ರವೇಶಿಸದೆ ಹೊರ ನಡೆದಿದ್ದಾರೆ. ನಗರದ ಎರಡು ಖಾಸಗಿ ಕಾಲೇಜಿನಲ್ಲಿ ಹಿಜಾಬ್ ವಿಚಾರವಾಗಿ ಗೊಂದಲ ಸೃಷ್ಟಿಯಾಗಿತ್ತು. ಬುರ್ಖಾ ಮತ್ತು ಹಿಜಾಬ್ ತೆಗೆಯಲು ನಿರಾಕರಿಸಿದ ವಿದ್ಯಾರ್ಥಿನಿಯರು ಕಾಲೇಜು ಆವರಣದಿಂದ ಹಿಂತಿರುಗಿದರು. ಡಿವಿಎಸ್ ಕಾಲೇಜಿನಲ್ಲಿ ಗೊಂದಲ ಶಿವಮೊಗ್ಗದ ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ … Read more