ಸಿದ್ದರಾಮಯ್ಯ ಅವರ ಕ್ರಾಸ್‌ಬೀಡ್‌ ಹೇಳಿಕೆಗೆ ಈಶ್ವರಪ್ಪ ತಿರುಗೇಟು, ಸಚಿವರು ಹೇಳಿದ್ದೇನು?

021220 Eshwarappa Procession in Shimoga 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020 ಲವ್ ಜಿಹಾದ್, ಗೋ ಹತ್ಯೆ ನಿಷೇಧ, ಕುರುಬರ ಎಸ್ಟಿ ಹೋರಾಟಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗಳಿಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಲವ್ ಜಿಹಾದ್‍ ಸಂಬಂಧ ಕಾಯ್ದೆ ಜಾರಿಯಾಗುವ ಮೊದಲೇ ಬಾಯಿಗೆ ಬಂದಂತೆ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಅದರಲ್ಲು ಕ್ರಾಸ್ಬೀಡ್ ಎಂಬರ್ಥದ ಅವರ ಮಾತು ಅಯೋಗ್ಯತನದ್ದು. ಇಂದಿರಾಗಾಂಧಿ ಮುಸ್ಲಿಂ ಒಬ್ಬರನ್ನು, ಸೋನಿಯಾ ಮತ್ತೊಂದು ಜಾತಿಯೋರ್ವನನ್ನು, ಪ್ರಿಯಾಂಕ ಕ್ರಿಶ್ಚಿಯನ್ನರನ್ನು ಮದುವೆಯಾಗಿದ್ದಾರೆ. ಹಾಗಾದರೆ ಇವರೆಲ್ಲರೂ … Read more

‘ಗ್ರಾಮ ಪಂಚಾಯಿತಿ ಚುನಾವಣೆಗೆ ಬಿಜೆಪಿ ಸಿದ್ಧ, ಪ್ರತಿ ಜಿಲ್ಲೆಯಲ್ಲೂ ನಡೆಯುತ್ತೆ ಗ್ರಾಮ ಸ್ವರಾಜ್’

Minister KS Eshwarappa

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020 ಗ್ರಾಮೀಣಾಭಿವೃದ್ದಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಆದ್ಯತೆ ನೀಡಿದ್ದು, ಹಳ್ಳಿಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದೇ ನಮ್ಮ ಗುರಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಗ್ರಾ.ಪಂ.ಚುನಾವಣೆಗೆ ಬಿಜೆಪಿ ಸಿದ್ದವಾಗಿದೆ. ಈ ಚುನಾವಣೆಯಲ್ಲಿ ಪಕ್ಷದ ಚಿಹ್ನೆ ಇಲ್ಲ. ಆದರೆ ಬಿಜೆಪಿ ಪಕ್ಷದ ಆಶಯಗಳನ್ನು ಮತ್ತು ಅಭಿವೃದ್ದಿ ಕಾರ್ಯಗಳನ್ನು ಶ್ರದ್ದೆಯಿಂದ ಮಾಡುವವರಿಗೆ ಆದ್ಯತೆ ನೀಡಲಾಗಿದೆ. ಲೋಕಸಭೆ ಮತ್ತು ವಿಧಾನಸಬಾ ಕ್ಷೇತ್ರದ ಚುನಾವಣೆಯಂತೆಯೇ ಗ್ರಾಮ … Read more

ಬಸವನಗುಡಿ, ಅಮೀರ್ ಅಹಮದ್ ಕಾಲೋನಿ ನಿವಾಸಿಗಳಿಗೆ ಪರಿಚಯ ಪತ್ರ ವಿತರಣೆ

211120 Hakkupathra To Basavanagudi slum dwellers 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 21 NOVEMBER 2020 ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಇವತ್ತು ಬಸವನಗುಡಿ, ಅಮೀರ್ ಅಹಮ್ಮದ್ ಕಾಲೋನಿ ನಿವಾಸಿಗಳಿಗೆ ಮನೆ ಪರಿಚಯ ಪತ್ರ ವಿತರಿಸಿದರು. ಬಳಿಕ ಮಾತನಾಡಿದ ಸಚಿವ ಈಶ್ವರಪ್ಪ, ನಗರದ 23 ಪ್ರದೇಶಗಳಲ್ಲಿ ಪರಿಚಯ ಪತ್ರ ವಿತರಿಸಿದ್ದೇವೆ. ಈ ಪರಿಚಯ ಪತ್ರ ಹೊಂದಿದವರಿಗೆ ಹಕ್ಕುಪತ್ರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಾಲಿಕೆ ವತಿಯಿಂದ ಇಲ್ಲಿನ ನಿವಾಸಿಗಳಿಗೆ ಮೂಲ ಸೌಲಭ್ಯ ಸೇರಿದಂತೆ ಅಗತ್ಯ ಸೌಕರ್ಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು. … Read more

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಮಿನಿಸ್ಟರ್, 2021ರ ಆರಂಭದಲ್ಲಿ ವಿಮಾನ ಹಾರಾಟ ಶುರು

181120 Eshwarappa Visit Shivamogga Airport Work 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸೋಗಾನೆಯಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಿನಿಸ್ಟರ್ ಹೇಳಿದ್ದೇನು? ಕಾಮಗಾರಿ ತ್ವರಿತವಾಗಿ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಮೊದಲ ಹಂತದ ಕಾಮಗಾರಿಗೆ ಸರ್ಕಾರ ಕಾಯ್ದಿರಿಸಿದ್ದ ಒಟ್ಟು 220 ಕೋಟಿ … Read more

ವಿಜಯೇಂದ್ರ ವೈಭವೀಕರಣಕ್ಕೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಆಕ್ಷೇಪ

KS-Eshwarappa-DC-Office-Meeting

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ಶಿರಾ ಉಪ ಚುನಾವಣೆ ಗೆಲುವಿನ ಸಂಬಂಧ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಮಾಧ್ಯಮಗಳಲ್ಲಿ ವೈಭವೀಕರಿಸಲಾಗುತ್ತಿದೆ. ಇದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ‍್ವರಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರೊಬ್ಬರೆ ಕೆಲಸ ಮಾಡಿದ್ದಾ. ಮಾಧ್ಯಮಗಳಲ್ಲಿ ವಿಜಯೇಂದ್ರ ಅವರನ್ನು ವೈಭವೀಕರಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು. ಅವರೊಬ್ಬರಿಗೆ ಜವಾಬ್ದಾರಿ ಕೊಟ್ಟಿರಲಿಲ್ಲ ಉಪ ಚುನಾವಣೆಯಲ್ಲಿ ವಿಜಯೇಂದ್ರ ಅವರಿಗೂ ಜವಾಬ್ದಾರಿ ನೀಡಲಾಗಿತ್ತು. ಹಾಗೆ ಉಪ ಮುಖ್ಯಮಂತ್ರಿ … Read more

‘ಮೂಲೆಗುಂಪಾಗಿರೋ ಕಾಂಗ್ರೆಸ್ ಆರ್‌ಎಸ್‌ಎಸ್‌ ಟೀಕಿಸಿ ಧೂಳಾಗಿ ಹೋಗುತ್ತೆ’

Minister KS Eshwarappa

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ ವಿರುದ್ಧ ಟೀಕೆ ಮಾಡಿದ್ದ ಕಾಂಗ್ರೆಸ್ ಪಕ್ಷ ದೇಶದಲ್ಲಿ ಮೂಲೆಗುಂಪಾಗಿದೆ. ಆರ್‍ಎಸ್‍ಎಸ್‍ ವಿರುದ್ಧ ಟೀಕೆ ಮಾಡಿದರೆ ಧೂಳಾಗಿ ಹೋಗುತ್ತೆ ಅಂತಾ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಸಿದ್ದರಾಮಯ್ಯ ಅವರು ಆರ್‍ಎಸ್‍ಎಸ್ ಅನ್ನು ಜಾತಿವಾದಿ ಸಂಘಟನೆ ಅಂದಿದ್ದಾರೆ. ಬಿ.ಕೆ.ಹರಿಪ್ರಸಾದ್ ಅವರು ಆರ್‌ಎಸ್ಎಸ್‍ನವರಿಗೆ ರಾಷ್ಟ್ರಧ್ವಜ ಹಾರಿಸಲು ಅರ್ಹತೆ ಇಲ್ಲ ಎಂದಿದ್ದಾರೆ. ಇವರಿಬ್ಬರಿಗೆ ಆರ್‍ಎಸ್‍ಎಸ್‍ ಬಗ್ಗೆ … Read more

‘ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡುವುದು ಒಳ್ಳೆಯದು’

281020 KS Eshwarappa in Shimoga Programme 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಅಕ್ಟೋಬರ್ 2020 ರಾಜ್ಯದಲ್ಲಿ ಕರೋನಾ ಸೋಂಕು ಹರಡುತ್ತಿರುವುದರಿಂದ ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿದರೆ ಒಳ್ಳೆಯದು. ಆದರೆ ಹೈಕೋರ್ಟ್ ಮತ್ತು ಚುನಾವಣಾ ಆಯೋಗದ ಸೂಚನೆ ಪಾಲಿಸಲು ಬದ್ಧ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಒಂದೆಡೆ ಕರೋನಾ ಸೋಂಕು ಇರುವುದರಿಂದ ಶಾಲೆಗಳನ್ನು ಆರಂಭಿಸುವುದು ಬೇಡ ಎಂಬ ಅಭಿಪ್ರಾಯ ಇದೆ. ಅದೇ ರೀತಿ ಗ್ರಾಪಂ ಚುನಾವಣೆ ನಡೆಸಿದರೂ ಸೋಂಕು ಹೆಚ್ಚಳದ ಆತಂಕ ಇದೆ. … Read more

ಸಿಎಂ ಯಡಿಯೂರಪ್ಪ ಅವರಿಗೆ ವೇದಿಕೆಯಲ್ಲೇ ಒಂದು ಬೇಡಿಕೆ ಇಟ್ಟ ಸಚಿವ ಈಶ್ವರಪ್ಪ

201020 Eshwarappa yedyurappa in kalloddu inauguration 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020 ಯಡಿಯೂರಪ್ಪ ಅವರೆ ನಮ್ಮ ಇಲಾಖೆಗೆ ಒಳ್ಳೆಯ ಅಧಿಕಾರಿಗಳನ್ನು ಕೊಡಿ. ಇನ್ನೊಂದು ವರ್ಷದಲ್ಲಿ ಈ ಯೋಜನೆ ಜಾರಿಗೊಳಿಸುತ್ತೇನೆ. ಇದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಿಎಂ ಯಡಿಯೂರಪ್ಪ ಅವರ ಮುಂದಿಟ್ಟಿರುವ ಬಹಿರಂಗ ಬೇಡಿಕೆ ಇದು. ಶಿಕಾರಿಪುರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಮನೆ ಮನೆಗೆ ಗಂಗೆ ಯೋಜನೆ ಜಾರಿಗೊಳಿಸಿ, ಪ್ರತಿ ಹಳ್ಳಿಯ ಮನೆ ಮನೆಗೂ ನಲ್ಲಿ ನೀರು ಪೂರೈಕೆ … Read more

ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಎದುರಲ್ಲೇ ಕೇಂದ್ರ, ರಾಜ್ಯ ಸರ್ಕಾರಕ್ಕೆ ಧಿಕ್ಕಾರ

021020 Congress Protest in Fornt of Eshwarappa 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಚಿವ ಕೆ.ಎಸ್.ಈಶ‍್ವರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಎದುರು ಕೇಂದ್ರ, ರಾಜ್ಯ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳಕ್ಕೆ ಆಗಮಿಸಿದ ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಅವರು ಮನವಿ ಸ್ವೀಕರಿಸಲು ಬಂದಿದ್ದರು. ಇದೇ ವೇಳೆ … Read more

ಶಿವಮೊಗ್ಗದಲ್ಲಿ ಆರೋಗ್ಯ, ವೈದ್ಯಕೀಯ ಶಿಕ್ಷಣ ಗುತ್ತಿಗೆ, ಹೊರ ಗುತ್ತಿಗೆ ನೌಕರರ ಪ್ರತಿಭಟನೆ, ಸ್ಥಳಕ್ಕೆ ಮಿನಿಸ್ಟರ್, ಸಂಸದರ ಭೇಟಿ

021020 Outsource Workers Protest Minister Visit 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಅಕ್ಟೋಬರ್ 2020 ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಶಿವಮೊಗ್ಗ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ನೌಕರರು ಪ್ರತಿಭಟನೆ ನಡೆಸಿದರು. ಪ್ರತಿದಿನ ಒಂದು ಗಂಟೆ ಪ್ರತಿಭಟನೆ ಏಳು ದಿನದಿಂದ ಕೆಲಸ ಸ್ಥಗಿತಗೊಳಿಸಿ ನೌಕರರು ಧರಣಿ ನಡೆಸಿದ್ದರು. ಇನ್ಮುಂದೆ ಜಿಲ್ಲಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ … Read more