ಶಿವಮೊಗ್ಗ ಪಾಲಿಕೆ ಅಧಿಕಾರಿಗೆ ಶಾಕ್ ಕೊಟ್ಟ ವಾಟ್ಸಾಪ್ ಕಾಲ್, ಏನಿದು ಪ್ರಕರಣ?
ಶಿವಮೊಗ್ಗ: ಲೋಕಾಯುಕ್ತ ಇನ್‌ಸ್ಪೆಕ್ಟರ್ (Inspector) ಹೆಸರಿನಲ್ಲಿ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರಿಗೆ ಕರೆ ಮಾಡಿ, ಭ್ರಷ್ಟಾಚಾರದ ಆರೋಪ ಹೊರಿಸುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಮಹಾನಗರ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ ರಂಗಸ್ವಾಮಿ.ಎಸ್.ಕೆ ಎಂಬುವವರು ದೂರು ನೀಡಿದ್ದಾರೆ. ಫೆಬ್ರವರಿ 2 ರಂದು ರಂಗಸ್ವಾಮಿ ಅವರು ಕಚೇರಿಯಲ್ಲಿದ್ದಾಗ ಅವರ ಮೊಬೈಲ್‌ಗೆ ಅಪರಿಚಿತ ನಂಬರ್‌ನಿಂದ ವಾಟ್ಸಾಪ್ ವಾಯ್ಸ್ ಕಾಲ್ ಬಂದಿತ್ತು. ಆ ನಂಬರ್‌ನ ಪ್ರೊಫೈಲ್‌ನಲ್ಲಿ LOKAYUKTA RAVIPRAKASH C.I KSP ಎಂಬ ಹೆಸರಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ. … Read more