ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ವಿದ್ಯಾರ್ಥಿಗಳ ಆಕ್ರೋಶ, ಡಿಸಿ ಕಚೇರಿ ಮುಂದೆ ಪ್ರತಿಭಟನೆ
SHIVAMOGGA LIVE NEWS | 30 ಮಾರ್ಚ್ 2022 ಕುವೆಂಪು ವಿಶ್ವವಿದ್ಯಾಲಯದ ಮೊದಲನೇ ವರ್ಷದ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕುವೆಂಪು ವಿವಿ ಮೊದಲನೇ ವರ್ಷದ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಬಿಎ, ಬಿ.ಎಸ್.ಸಿ. ವಿದ್ಯಾರ್ಥಿಗಳಿಗೆ ಸುಮಾರು 300ರೂ. ಮತ್ತು ಬಿಕಾಂ, ಬಿಬಿಎ, ಬಿಸಿಎ ವಿದ್ಯಾರ್ಥಿಗಳಿಗೆ ಸುಮಾರು 800 ರೂ. ಶುಲ್ಕ ಹೆಚ್ಚಳ ಮಾಡಿರುವುದನ್ನು ವಿದ್ಯಾರ್ಥಿಗಳು ಖಂಡಿಸಿದರು. … Read more