ಸಿಎಂ ಸಿದ್ದರಾಮಯ್ಯ ಬಗ್ಗೆ ಫೇಸ್‌ಬುಕ್‌ನಲ್ಲಿ ಕಾಮೆಂಟ್, ಭದ್ರಾವತಿಯಲ್ಲಿ ದಾಖಲಾಯ್ತು ಕೇಸ್
ಭದ್ರಾವತಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್‌ಬುಕ್‌ನಲ್ಲಿ ಕಾಮೆಂಟ್ (Comment) ಪ್ರಕಟಿಸಿದ್ದ ವ್ಯಕ್ತಿ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರ ವಿಡಿಯೋಗೆ ಷಡಾಕ್ಷರಿ ಎಂಬ ಫೇಸ್‌ಬುಕ್ ಖಾತೆಯಿಂದ ಅವಾಚ್ಯ ಪದಗಳಿಂದ ನಿಂದಿಸಲಾಗಿದೆ. ಈ ಸಂಬಂಧ ಹಳೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ » ಅಪಘಾತಕ್ಕೀಡಾದ ಕಾರಿನಲ್ಲಿ ಫೋನ್‌ಗಳು, ಪರ್ಸ್, ನಗದು ಕಳ್ಳತನ