ಶಿವಮೊಗ್ಗದಲ್ಲಿ ಒಂದೇ ದಿನ 150ಕ್ಕೂ ಹೆಚ್ಚು ಜನರನ್ನು ಕಾಪಾಡಿದ ‘ಆಪತ್ಭಾಂಧವರು’, ಯಾರದು?

Fire-department-rescue-operation-Special-News

SHIVAMOGGA LIVE NEWS | FIRE DEPARTMENT | 24 ಮೇ 2022 ಭಾರಿ ಮಳೆ. ಚರಂಡಿಗಳು ತುಂಬಿ ರಸ್ತೆಗಳು ಜಲಾವೃತವಾಗಿತ್ತು. ಮನೆಗಳಿಗೂ ನೀರು ನುಗ್ಗಿತ್ತು. ಮನೆ ಒಳಗಿದ್ದವರಿಗೆ ಹೊರಗೆ ಬರಲು ಭಯ. ಒಳಗಿರಲು ಆತಂಕ. ಇಂತಹ ಸಂದರ್ಭ ಜನರ ನೆರವಿಗೆ ಬಂದಿದ್ದೆ ಶಿವಮೊಗ್ಗ ಅಗ್ನಿಶಾಮಕ ಸಿಬ್ಬಂದಿ. ಮೇ 19ರಂದು ಶಿವಮೊಗ್ಗ ನಗರ ಅಕ್ಷರಶಃ ಮುಳುಗಿತ್ತು. ಸ್ಮಾರ್ಟ್ ಸಿಟಿ ಅವಾಂತರ, ಪಾಲಿಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವ ಹಿನ್ನೆಲೆ ನಗರದ ಬಹು ಬಡಾವಣೆಗಳು ಜಲಾವೃತವಾಗಿದ್ದವು. ಇಂತಹ ಸಂದರ್ಭ ಅಗ್ನಿಶಾಮಕ … Read more

ಹೊಳೆಹೊನ್ನೂರು ಬಳಿ ಭದ್ರಾ ನಾಲೆಯಲ್ಲಿ ಈಜಲು ಹೋದ ಮಕ್ಕಳು ನಾಪತ್ತೆ

Children-Drowned-in-Bhadra-Canal

SHIVAMOGGA LIVE NEWS | DROWN | 12 ಮೇ 2022 ಭದ್ರಾ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಚಂದನಾ (14) ಮತ್ತು ಹರ್ಷ (10) ನಾಪತ್ತೆಯಾಗಿದ್ದಾರೆ. ಹೊಳೆಹೊನ್ನೂರು ಸಮೀಪದ ಅಗರದಹಳ್ಳಿ ಬಳಿ ಭದ್ರಾ ಬಲದಂಡೆ ನಾಲೆಯಲ್ಲಿ ಮಕ್ಕಳು ತಮ್ಮ ದೊಡ್ಡಪ್ಪನೊಂದಿಗೆ ಈಜಲು ತೆರಳಿದ್ದರು. ಈ ಸಂದರ್ಭ ನಾಪತ್ತೆಯಾಗಿದ್ದಾರೆ. ರಜೆಗೆ ದೊಡ್ಡಪ್ಪನ ಮನೆಗೆ ಬಂದಿದ್ದರು ಮಕ್ಕಳು ಶಿವಮೊಗ್ಗ ತಾಲೂಕು ಮುದುವಾಲ ಗ್ರಾಮದವರು. ಶಾಲೆಗೆ ರಜೆ … Read more

ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಎಂಜಿನಿಯರ್ ಬೈಕ್’ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Tunga-Nagara-Police-Station-Shimoga

SHIVAMOGGA LIVE NEWS | Crime News Today | 12 ಏಪ್ರಿಲ್ 2022 ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ. ಎಂಜಿನಿಯರ್ ಸುರೇಂದ್ರಬಾಬು ಎಂಬುವವರು ಓಡಿಸುತ್ತಿದ್ದ ಹೋಂಡಾ ಆಕ್ಟೀವಾ ಬೈಕ್’ಗೆ ಬೆಂಕಿ ಹಚ್ಚಲಾಗಿದೆ. ಶನಿವಾರ ಬೆಳಗಿನ ಜಾವ ರಾಮಿನಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ | ‘ಕಸ್ಟಮರ್ ಕೇರ್’ಗೆ ಕರೆ ಮಾಡಿದ್ಮೇಲೆ ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ಉಳಿದದ್ದು ಬರೀ 2 ರೂ..! ಸುರೇಂದ್ರ … Read more

ಶಿವಮೊಗ್ಗ ಬೈಪಾಸ್ ರಸ್ತೆಯಲ್ಲಿ ಮಧ್ಯರಾತ್ರಿ ಅಂಗಡಿಗೆ ಬೆಂಕಿ ಹಚ್ಚಲು ಯತ್ನ

crime name image

SHIVAMOGGA LIVE NEWS | 6 ಏಪ್ರಿಲ್ 2022 ನಡುರಾತ್ರಿ ಅಂಗಡಿಗಳಿಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ವಿಫಲ ಯತ್ನ ನಡೆಸಿದ್ದಾರೆ. ಗಸ್ತು ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಅನಾಹುತ ತಪ್ಪಿದಂತಾಗಿದೆ. ಶಿವಮೊಗ್ಗ ಬೈಪಾಸ್ ರಸ್ತೆಯ ವಾದಿ-ಎ-ಹುದಾ ಬಡಾವಣೆ ಬಳಿ ಘಟನೆ ಸಂಭವಿಸಿದೆ. ಅಜ್ಮಲ್ ಅಹಮದ್ ಎಂಬುವವರಿಗೆ ಸೇರಿದ ಹಣ್ಣಿನ ಅಂಗಡಿಗೆ ಬೆಂಕಿ ಹಚ್ಚಲು ಕಿಡಿಗೇಡಿಗಳು ಯತ್ನಿಸಿದ್ದಾರೆ. ಬೆಂಕಿ ಹಚ್ಚಿದ ಕಿಡಿಗೇಡಿಗಳು ಸಂಬಂಧಿಯೊಬ್ಬರ ಜಾಗದಲ್ಲಿ ಹಲವು ವರ್ಷದಿಂದ ಅಜ್ಮಲ್ ಅಹಮದ್ ಅವರು ಶೆಡ್ ನಿರ್ಮಿಸಿ, ಹಣ್ಣಿನ ಅಂಗಡಿ ನಡೆಸುತ್ತಿದ್ದಾರೆ. ಏಪ್ರಿಲ್ … Read more

ಖಾಸಗಿ ಶಾಲೆಯ ಅಡುಗೆ ಮನೆಯಲ್ಲಿ ಗ್ಯಾಲ್ ಲೀಕ್, ಪ್ರಾಣ ಪಣಕ್ಕಿಟ್ಟು ಕಾರ್ಯಾಚರಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Gas-Leakage-in-Shimoga-Mandara-school

SHIVAMOGGA LIVE NEWS | 19 ಮಾರ್ಚ್ 2022 ಖಾಸಗಿ ಶಾಲೆಯೊಂದರ ವಸತಿ ನಿಲಯದ ಅಡುಗೆ ಮನೆಯಲ್ಲಿ ಗ್ಯಾಸ್ ಲೀಕ್ ಆಗಿದ್ದು ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಖಾಸಗಿ ಶಾಲೆಯೊಂದರ ವಸತಿ ನಿಲಯದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಅಡುಗೆ ಮನೆಯಲ್ಲಿ ಬಳಕೆ ಮಾಡುತ್ತಿದ್ದ ಅಡುಗೆ ಅನಿಲ ಸೋರಿಕೆ ಆಗಿದೆ. ಗ್ಯಾಸ್ ವಾಸನೆ ಎಂದು ಗೊತ್ತಾಗುತ್ತಿದ್ದ ಹಾಗೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಲಾಗಿತ್ತು. ಪ್ರಾಣ … Read more

ಚಾರ್ಜ್’ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಪೋಟ, ಹಲವು ವಸ್ತುಗಳು ಭಸ್ಮ, ಹೇಗಾಯ್ತು ಘಟನೆ?

Electric-Bike-Blast-at-Nimbegondi-Village-Near-Holehonnur.

SHIVAMOGGA LIVE NEWS | 16 ಮಾರ್ಚ್ 2022 ಚಾರ್ಜ್’ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡು ಹಲವು ವಸ್ತುಗಳು ಬೆಂಕಿಗೆ ಆಹುತಿ ಆಗಿವೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಹೊಳೆಹೊನ್ನೂರು ಸಮೀಪದ ನಿಂಬೆಗುಂದಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರಾತ್ರಿ ಚಾರ್ಜ್’ಗೆ ಹಾಕಿದ್ದಾಗ ವಾಹನ ಸ್ಪೋಟಗೊಂಡು ಅವಘಡ ಸಂಭವಿಸಿದೆ. ಹೇಗಾಯ್ತು ಘಟನೆ? ನಿಂಬೆಗುಂದಿ ಗ್ರಾಮದ ಕಾಡಪ್ಪರ ಮಲ್ಲಿಕಾರ್ಜುನ ಎಂಬುವವರಿಗೆ ಸೇರಿದ ಬೈಕ್ ಸ್ಪೋಟಗೊಂಡಿದೆ. ಮಲ್ಲಿಕಾರ್ಜುನ ಅವರ ಮಗ ಕಿರಣ್ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಕಾಡಪ್ಪರ ಮಲ್ಲಿಕಾರ್ಜುನ … Read more

BREAKING NEWS | ಭಾರಿ ಸ್ಪೋಟ, ಮನೆ ಸುಟ್ಟು ಭಸ್ಮ, ಗ್ರಾಮದಲ್ಲಿ ಕೆಲಕಾಲ ಆತಂಕ

Cylinder-Blast-At-Antaragange-in-Bhadravathi.

SHIVAMOGGA LIVE NEWS | 15 ಮಾರ್ಚ್ 2022 ಸಿಲಿಂಡರ್ ಸ್ಫೋಟಗೊಂಡು ಮನೆಯಲ್ಲಿದ್ದ ವಸ್ತುಗಳೆಲ್ಲ ಸುಟು ಭಸ್ಮವಾಗಿವೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಭದ್ರಾವತಿ ತಾಲೂಕು ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಂಗನಾಥಪುರ ಗ್ರಾಮದಲ್ಲಿ ಇವತ್ತು ಮಧ್ಯಾಹ್ನ ಘಟನೆ ಸಂಭವಿಸಿದೆ. ಭಾರಿ ಶಬ್ದಕ್ಕೆ ಬೆಚ್ಚಿಬಿದ್ದರು ಮಧ್ಯಾಹ್ನ 3.30ರ ಹೊತ್ತಿಗೆ ರಂಗನಾಥಪುರ ಗ್ರಾಮದಲ್ಲಿ ಸ್ಪೋಟದ ಶಬ್ದ ಕೇಳಿದೆ. ಭಾರಿ ಶಬ್ದಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಈ ವೇಳೆ ರಂಗನಾಥಪುರ ಗ್ರಾಮದ ವಳ್ಳೂರುಮದಿ ಅವರ ಮನೆ ಸಂಪೂರ್ಣ ಸುಟ್ಟು ಹೋಗಿದೆ. ಅದೃಷ್ಟವಶಾತ್ ಉಳಿಯಿತು … Read more

ಧಗಧಗ ಉರಿದ ದಿನಸಿ ಅಂಗಡಿ, ಕಿಡಿಗೇಡಿಗಳಿಂದ ಬೆಂಕಿ ಶಂಕೆ

crime name image

SHIVAMOGGA LIVE NEWS | 14 ಮಾರ್ಚ್ 2022 ದಿನಸಿ ಅಂಗಡಿಯಲ್ಲಿಬೆಂಕಿ ಕಾಣಿಸಿಕೊಂಡು ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ತನಿಖೆ ನಡೆಯುತ್ತಿದೆ. ಸೊರಬ ತಾಲೂಕು ಚಂದ್ರಗುತ್ತಿ ಹೋಬಳಿಯ ಗುಂಜನೂರಿನಲ್ಲಿ ಘಟನೆ ಸಂಭವಿಸಿದೆ. ಕಾಳಪ್ಪ ಎಂಬುವವರಿಗೆ ಸೇರಿದ ದಿನಸಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾಳಪ್ಪ ಅವರ ಮನೆಗೆ ಹೊಂದಿಕೊಂಡ ಹಾಗೆ ಅಂಗಡಿ ಇದೆ. ಭಾನುವಾರ ಕಾಳಪ್ಪ ಅವರ ಕುಟುಂಬದವರು ಸಂಬಂಧಿಯ ಮನೆಗೆ ತೆರಳಿದ್ದರು. ಆಗ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ … Read more

ಸೋಮಿನಕೊಪ್ಪದಲ್ಲಿ ಮೆಕ್ಕೆಜೋಳದ ರಾಶಿಗೆ ಬೆಂಕಿ

Jowar-Caught-fire-in-Sominakopp

SHIVAMOGGA LIVE NEWS | 7 ಮಾರ್ಚ್ 2022 ಮೆಕ್ಕೆಜೋಳದ ರಾಶಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ. ಹಾನಿ ಉಂಟಾಗಿದೆ. ಶಿವಮೊಗ್ಗದ ಸೋಮಿನಕೊಪ್ಪದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಕುಮಾರಪ್ಪ, ನರಸಿಂಹಪ್ಪ, ಸರಸ್ವತಮ್ಮ ಅವರಿಗೆ ಸೇರಿದ ಮೆಕ್ಕೆಜೋಳದ ರಾಶಿಗೆ ಬೆಂಕಿ ತಗುಲಿದೆ. ಸುಮಾರು 210 ಕ್ವಿಂಟಾಲ್ ಮೆಕ್ಕೆ ಜೋಳವನ್ನು ಒಂದು ಕಡೆ ರಾಶಿ ಮಾಡಿ ಇಡಲಾಗಿತ್ತು. ಇದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಅಗ್ನಿಶಾಮಕ ಸಿಬ್ಬಂದಿ ಗ್ರಾಮಸ್ಥರ ನೆರವಿನೊಂದಿಗೆ ಬೆಂಕಿ ನಂದಿಸಿದರು. ಬೆಂಕಿಯಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. … Read more

ರೈಲ್ವೆ ಗೇಟ್ ತೆಗೆಯುವಂತೆ ಮಹಿಳಾ ಸಿಬ್ಬಂದಿಗೆ ಬೆದರಿಕೆ, ಬೈಕ್’ಗೆ ಬೆಂಕಿ

Train engine and boggies

SHIVAMOGGA LIVE NEWS | 2 ಮಾರ್ಚ್ 2022 ರೈಲ್ವೆ ಗೇಟ್ ತೆಗೆಯುವಂತೆ ರೈಲ್ವೆ ಇಲಾಖೆ ಮಹಿಳಾ ಸಿಬ್ಬಂದಿಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಲಾಗಿದೆ. ಅಲ್ಲದೆ ಅವರ ಬೈಕಿಗೆ ಬೆಂಕಿ ಹಚ್ಚಲಾಗಿದೆ. ಘಟನೆ ಸಂಬಂಧ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.   ಯಡೇಹಳ್ಳಿ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ರೈಲು ಬರುವ ಸಂದರ್ಭ ಗೇಟ್’ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂದಿ ಗೇಟ್ ಹಾಕಿದ್ದಾರೆ. ಆಗ ಬಂದ ಗಿರೀಶ್, ಬಾಲಿ, ಇಲಿಯಾಸ್, ರಫಿ ಮತ್ತಿತರರು ಗೇಟ್ ತೆಗೆಯುವಂತೆ ತಿಳಿಸಿದ್ದಾರೆ. ಮಹಿಳಾ … Read more