ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
ಸಾಗರ: ಇಲ್ಲಿನ ಸೊರಬ ರಸ್ತೆಯ ಚಂದ್ರಮಾವಿನಕೊಪ್ಪಲು ಸಮೀಪ ಆನಂದ್ ಎಂಬುವವರ ಮನೆ ಹಿಂಭಾಗದ ಸುಮಾರು 20 ಅಡಿ ಆಳದ ಬಾವಿಗೆ ಆಕಸ್ಮಿಕವಾಗಿ ಬಿದ್ದ ಗೂಳಿಯನ್ನು (Bull Rescued) ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಗೂಳಿಯು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ತಂಡವು ಸುಮಾರು ಎರಡು ಗಂಟೆ ಕಠಿಣ ಕಾರ್ಯಾಚರಣೆ ನಡೆಸಿ ಗೂಳಿಯನ್ನು ಬಾವಿಯಿಂದ ಮೇಲೆತ್ತಿ ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ … Read more