ಶಿವಮೊಗ್ಗದ ವಂದನಾ ಟಾಕೀಸ್ ಪ್ರೊಜೆಕ್ಟರ್ ರೂಂನಲ್ಲಿ ಬೆಂಕಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021 ಶಿವಮೊಗ್ಗದ ಬಿ.ಬಿ.ಸ್ಟ್ರೀಟ್‍ನಲ್ಲಿರುವ ವಂದನಾ ಟಾಕೀಸ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ದಟ್ಟ ಹೊಗೆ ಕಾಣಿಸಿಕೊಂಡ ಕೂಡಲೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ. ಚಿತ್ರಮಂದಿರದ ಪ್ರೊಜೆಕ್ಟರ್ ರೂಂನಲ್ಲಿ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೆ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರೊಜೆಕ್ಟರ್ ರೂಂನಲ್ಲಿ ಕೆಲವು ಉಪಕರಣಗಳಿಗೆ ಹಾನಿಯಾಗಿದೆ. … Read more