ಶಿವಮೊಗ್ಗ ಸಿಟಿಯ ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿ.9ರಂದು ನಾಲ್ಕು ಗಂಟೆ ಕರ್ಫ್ಯೂ ಸಡಿಲಿಕೆ
ಶಿವಮೊಗ್ಗ ಲೈವ್.ಕಾಂ |SHIMOGA NEWS | 8 DECEMBER 2020 ಹಳೆ ಶಿವಮೊಗ್ಗ ಭಾಗದಲ್ಲಿ ನಾಲ್ಕು ಗಂಟೆ ಕರ್ಫ್ಯೂ ಸಡಿಲಿಕೆ ಮಾಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಇದರ ಸಮಯವನ್ನು ನಿಗದಿ ಮಾಡಿದೆ. ಡಿಸೆಂಬರ್ 9ರಂದು ಬೆಳಗ್ಗೆ 7ರಿಂದ 11 ಗಂಟೆವರೆಗೆ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ. ಕೋಟೆ ಠಾಣೆ, ದೊಡ್ಡಪೇಟೆ ಠಾಣೆ ಮತ್ತು ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಸಡಿಲಿಕೆ ಮಾಡಲಾಗಿದೆ. ಈ ವೇಳೆ ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಖರೀದಿಸಬಹುದಾಗಿದೆ. … Read more