ದ್ವಿಚಕ್ರ ವಾಹನದಲ್ಲಿ ತೆರಳುವ ಮಹಿಳೆಯರೆ ಎಚ್ಚರ, ಶಿವಮೊಗ್ಗದ ವಿದ್ಯಾರ್ಥಿನಿಯಿಂದ ದಾಖಲಾಯ್ತು ಕೇಸ್
ಶಿವಮೊಗ್ಗ: ಬೈಕ್‌ನಲ್ಲಿ ಬಂದ ಆಗಂತುಕನೊಬ್ಬ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿ ಕೊರಳಲ್ಲಿದ್ದ ಚಿನ್ನದ ಸರ (Gold Chain) ಕಸಿದು ಆಕೆಯನ್ನು ಬೀಳಿಸಿ ಪರಾರಿಯಾಗಿದ್ದಾನೆ. ಶಿವಮೊಗ್ಗದ ಕಲ್ಲೂರು – ಅಗಸವಳ್ಳಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೋಚಿಂಗ್‌ಗೆ ತೆರಳುತ್ತಿದ್ದ ಬಿ.ಕಾಂ ವಿದ್ಯಾರ್ಥಿನಿ ಲಕ್ಷ್ಮಿ ಅವರ ಚಿನ್ನದ ಸರ ಕಳ್ಳತನವಾಗಿದೆ. ಲಕ್ಷ್ಮಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಚಿನ್ನದ ಸರ ಕಸಿದುಕೊಂಡಿದ್ದಾನೆ. ನಿಯಂತ್ರಣ ತಪ್ಪಿ ಲಕ್ಷ್ಮಿ ತಮ್ಮ ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. ₹74,000 … Read more