ಶಿವಮೊಗ್ಗದಲ್ಲಿ ಕರ್ಫ್ಯೂ ಜಾರಿಯಾದರೂ ಆಟೋ, ಬೈಕುಗಳಿಗೆ ಬೆಂಕಿ

Burnt Auto in Shimoga Tunga Nagara Station

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಕರ್ಫ್ಯೂ ಜಾರಿಯಾದರೂ ಶಿವಮೊಗ್ಗದಲ್ಲಿ ಕಿಡಿಗೇಡಿಗಳ ದುಷ್ಕೃತ್ಯ ನಿಂತಿಲ್ಲ. ಮೂರು ಆಟೋ ರಿಕ್ಷಾ ಮತ್ತು ಎರಡು ಬೈಕ್’ಗೆ ಬೆಂಕಿ ಹಚ್ಚಲಾಗಿದೆ. ಇವತ್ತು ಬೆಳಗಿನ ಜಾವ ಟಿಪ್ಪುನಗರ ಮತ್ತು ಕೊರಮ ಕೇರಿಯಲ್ಲಿ ಆಟೋ ಮತ್ತು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನೆ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ಇದನ್ನೂ ಓದಿ | ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ … Read more

ಶಿವಮೊಗ್ಗ ಸಿಟಿಯಲ್ಲಿ ದೊಡ್ಡ ಸಂಖ್ಯೆಯ ಪೊಲೀಸರ ನಿಯೋಜನೆ, ಎಷ್ಟು ಸಂಖ್ಯೆಯ ಸಿಬ್ಬಂದಿ ಬಂದಿದ್ದಾರೆ?

Police Bandobast at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮತ್ತು ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಿವಮೊಗ್ಗದ ಬಂದೋಬಸ್ತ್’ಗಾಗಿ ಮೂವರು ಎಸ್.ಪಿಗಳನ್ನು ನಿಯೋಜಿಸಲಾಗಿದೆ. ಒಬ್ಬರು ಹೆಚ್ಚುವರಿ ರಕ್ಷಣಾಧಿಕಾರಿ, 12 ಡಿವೈಎಸ್’ಪಿ, 39 ಇನ್ಸ್ ಪೆಕ್ಟರ್, 54 ಸಬ್ ಇನ್ಸ್ ಪೆಕ್ಟರ್, 48 ಎಎಸ್ಐ, 819 ಕಾನ್ಸ್ ಟೇಬಲ್’ಗಳು, 20 ಕೆ.ಎಸ್.ಆರ್.ಪಿ, 10 ಡಿಎಆರ್, 1 ಆರ್.ಎ.ಎಫ್ ತುಕಡಿಯನ್ನು ನಿಯೋಜನೆ ಮಾಡಲಾಗಿದೆ. ಅಹಿತಕರ … Read more

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇಸ್, 12 ಮಂದಿ ಪೊಲೀಸ್ ವಶಕ್ಕೆ

home minister aaraga gnanendra

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಪ್ರಕರಣ ಸಂಬಂಧ 3 ಆರೋಪಿಗಳನ್ನು ಬಂಧಿಸಲಾಗಿದೆ. 12 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ದೃಢವಾದರೆ ಬಂಧಿಸಲಾಗುತ್ತದೆ. ಅಲ್ಲದೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ … Read more

BIG BREAKING | ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಕರ್ಫ್ಯೂ

Police Bandobast at Shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮತ್ತು ಆ ನಂತರದ ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಜಿಲ್ಲಾ ಪೊಲೀಸ್ ಇಲಾಖೆ, ಇವತ್ತು ರಾತ್ರಿಯಿಂದಲೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಬುಧವಾರ ಬೆಳಗ್ಗೆವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. ಇವತ್ತು ರಾತ್ರಿ, ನಾಳೆ ಇಡಿ ದಿನ, ನಾಳೆ ರಾತ್ರಿ ಕರ್ಫ್ಯೂ ಇರಲಿದೆ. ಈ ಸಂದರ್ಭ ಯಾರು ಕೂಡ ಅನಾವಶ್ಯಕವಾಗಿ ಓಡಾಡಬಾರದು ಎಂದು … Read more

ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ನಟ ಪ್ರಥಮ್ ನೆರವು

Bajarangadal Worker Harsha Murdered

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಅವರ ಕುಟುಂಬಕ್ಕೆ ನಟ, ನಿರ್ದೇಶಕ ಪ್ರಥಮ್ ನೆರವು ಘೋಷಿಸಿದ್ದಾರೆ.  ಈ ಸಂಬಂಧ ಫೇಸ್ ಬುಕ್’ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ. ತಮ್ಮ Olle Hudga Pratham ಫೇಸ್ ಬುಕ್ ಖಾತೆಯ ಮೂಲಕ ನೆರವು ಪ್ರಕಟಿಸಿದ್ದಾರೆ. ಅಲ್ಲದೆ ಎಲ್ಲರು ಹರ್ಷನ ಕುಟುಂಬಕ್ಕೆ ನೆರವಾಗುವಂತೆ ಪ್ರಥಮ್ ಮನವಿ ಮಾಡಿದ್ದಾರೆ.

BREAKING NEWS | ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ

breaking news graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಮತ್ತು ಆನಂತರ ಪ್ರಕ್ಷುಬ್ದ ವಾತಾವರಣದ ಹಿನ್ನೆಲೆ, ಶಿವಮೊಗ್ಗ ನಗರದ ಶಾಲೆ, ಕಾಲೇಜಿಗೆ ಮತ್ತೊಂದು ದಿನ ರಜೆ ಘೋಷಣೆ ಮಾಡಲಾಗಿದೆ. ಫೆ.22ರಂದು ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ | ಹರ್ಷ ಹತ್ಯೆ ಪ್ರಕರಣ, ಮೂವರ ಬಂಧನ, ವಿಚಾರಣೆ ಚುರುಕು

‘ಜಯ ರಾಮ, ಶ್ರೀರಾಮ ಎಂದುಕೊಂಡೆ ಹೋದ, ನಮ್ಮ ಕುಟಂಬಕ್ಕೆ ನ್ಯಾಯ ಬೇಕು’

Home Minister Meets Harsha Family

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಹರ್ಷನನ್ನು ಹತ್ಯೆ ಮಾಡಿದ್ದು ಯಾರು ಅನ್ನುವುದು ಗೊತ್ತಿಲ್ಲ. ಆದರೆ ನಮ್ಮ ಕುಟುಂಬಕ್ಕೆ ನ್ಯಾಯ ಕೊಡಿಸಿ. ಜಯರಾಮ್ ಶ್ರೀರಾಮ್ ಎಂದು ಹೇಳಿಕೊಂಡೆ ಹೋದ ಎಂದು ಹತ್ಯೆಗೀಡಾದ ಹರ್ಷನ ಸಹೋದರಿ ಅಶ್ವಿನಿ ಅಳಲು ತೋಡಿಕೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವಿನಿ ಅವರು, ನಾನು ಚಿಕ್ಕಮಗಳೂರಿನಲ್ಲಿ ಇದ್ದೆ. ಫೋನ್ ಮಾಡಿ ನಿನ್ನ ತಮ್ಮನನ್ನು ಹೊಡೆದು ಹಾಕಿದ್ದಾರೆ ಎಂದರು. ವಾಟ್ಸಪ್’ನಲ್ಲಿ ವಿಡಿಯೋ, ಫೋಟೊ ಕಳುಹಿಸಿದರು. ಈಗ ನಾವು … Read more

ಶಿವಮೊಗ್ಗ ನಗರಕ್ಕೆ RAF ಪಡೆ, ಎಲ್ಲೆಲ್ಲೂ ಬಂದೋಬಸ್ತ್

Shimoga city RAF unit visit shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರಾಪಿಡ್ ಆಕ್ಷನ್ ಫೋರ್ಸ್ ಕೂಡ ನಗರಕ್ಕೆ ಆಗಮಿಸಿದೆ. ಶಿವಮೊಗ್ಗ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಗರಕ್ಕೆ ಈಗಾಗಲೇ ರಾಪಿಡ್ ಆಕ್ಷನ್ ಫೋರ್ಸ್ (RAF) ತುಕಡಿ ಆಗಮಿಸಿದೆ. ಪ್ರಮುಖ ಸ್ಥಳದಲ್ಲಿ RAF ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ರಾತ್ರಿ ಬೈಕ್ … Read more