ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು KFD ಪ್ರಕರಣ, ಶಿಕ್ಷಕರೊಬ್ಬರಿಗೆ ಸೋಂಕು ದೃಢ

Shimoga Map Graphics

ಶಿವಮೊಗ್ಗದ ಲೈವ್.ಕಾಂ | SHIMOGA NEWS | 28 ಜನವರಿ 2022 ಶಿವಮೊಗ್ಗದಲ್ಲಿ ಒಂದೇ ತಿಂಗಳಲ್ಲಿ ಎರಡನೇ KFD ಪ್ರಕರಣ ಪತ್ತೆಯಾಗಿದೆ. ಶಿಕ್ಷಕರೊಬ್ಬರಿಗೆ KFD ಸೋಂಕು (ಮಂಗನ ಕಾಯಿಲೆ) ದೃಢವಾಗಿದೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಜ್ವರದಿಂದ ಬಳಲುತ್ತಿದ್ದ ಶಿಕ್ಷಕ, ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ರಕ್ತದ ಮಾದರಿಯನ್ನು KFD ಲ್ಯಾಬ್’ಗೆ ಕಳುಹಿಸಲಾಗಿತ್ತು. KFD ಪಾಸಿಟಿವ್ ಬಂದ ಹಿನ್ನೆಲೆ ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. … Read more

BREAKING NEWS | ಮದುವೆ ಮನೆಯಲ್ಲಿ ಊಟ ಮಾಡಿದ ಹಲವರಲ್ಲಿ ವಾಂತಿ, ಭೇದಿ

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಮದುವೆ ಸಮಾರಂಭವೊಂದರಲ್ಲಿ ಊಟ ಮಾಡಿದ್ದ ಹಲವರಲ್ಲಿ ವಾಂತಿ, ಭೇದಿ, ತಲೆನೋವು ಕಾಣಿಸಿಕೊಂಡಿದೆ. ಕೂಡಲೆ ಎಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಶಿವಮೊಗ್ಗ ತಾಲೂಕು ಆಲದಹಳ್ಳಿಯ ಸಮುದಾಯ ಭವನದಲ್ಲಿ ಇವತ್ತು ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಎರಡು ಜೋಡಿ ಸಪ್ತಪದಿ ತುಳಿದಿವೆ. ಮಹೂರ್ತ ಮುಗಿಯುತ್ತಿದ್ದಂತೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟವಾಗುತ್ತಿದ್ದಂತೆ ಹಲವರು ಅಸ್ವಸ್ಥ ಮದುವೆ ಸಮಾರಂಭದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿದ್ದಾರೆ. ಕೂಡಲೆ ಅವರನ್ನು ಹೊಳಲೂರು … Read more

ಶಿವಮೊಗ್ಗದಲ್ಲಿ ಮಳೆ, ಬಿಸಿಲಿನ ಕಣ್ಣಾಮುಚ್ಚಾಲೆ, ಹೆಚ್ಚುತ್ತಿದೆ ಆರೋಗ್ಯ ಸಮಸ್ಯೆ, ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ಮಳೆ?

Shivamogga-Rain-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಕೆಲವೆಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಇನ್ನು ಕೆಲವು ಕಡೆ ಮಳೆ, ಬಿಸಿಲಿನ ಕಣ್ಣಾ ಮುಚ್ಚಾಲೆ ಮುಂದುವರೆದಿದೆ. ಇದು ಜನರಲ್ಲಿ ಆತಂಕ ಮೂಡಿಸಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 35.03 ಮಿ.ಮೀ ಮಳೆಯಾಗಿದೆ. ಈ ಪೈಕಿ ಶಿವಮೊಗ್ಗ ತಾಲೂಕಿನಲ್ಲಿ 9.60 ಮಿ.ಮೀ, ಭದ್ರಾವತಿಯಲ್ಲಿ 7.20 ಮಿ.ಮೀ, ತೀರ್ಥಹಳ್ಳಿಯಲ್ಲಿ 25. 80 ಮಿ.ಮೀ, ಸಾಗರದಲ್ಲಿ 17.40 ಮಿ.ಮೀ, ಶಿಕಾರಿಪುರದಲ್ಲಿ 7.40 ಮಿ.ಮೀ, … Read more

ಗಂಟಲು ನೋವು ತಾಳಲಾರದೆ ನೇಣು ಬಿಗಿದು ಮಹಿಳೆ ಆತ್ಮಹತ್ಯೆ

Suicide-Hanging-General

ಶಿವಮೊಗ್ಗ ಲೈವ್.ಕಾಂ | SORABA NEWS | 29 ಆಗಸ್ಟ್ 2021 ಗಂಟಲು ನೋವು ತಾಳಲಾರದೆ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುನೀತಾ ಕೋಟ್ಯಪ್ಪ (25) ನೇಣಿಗೆ ಶರಣಾದ ಮಹಿಳೆ. ಸುನೀತಾ ಕೋಟ್ಯಪ್ಪ ಅವರು ಕೆಲ ಸಮಯದಿಂದ ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಹಾಗಾಗಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಆದರೆ ನೋವು ಕಡಿಮೆಯಾಗಿರಲಿಲ್ಲ. ಇದರಿಂದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ | ರಿಪ್ಪನ್ ಪೇಟೆ ಬಳಿ ಕಾಡಲ್ಲಿ … Read more

ಪ್ರಾಥಮಿಕ ಆರೋಗ್ಯ ಸುರಕ್ಷತಾಕಾರಿಗಳ ಸಂಘಕ್ಕೆ ನೂತನ ಅಧ್ಯಕ್ಷೆ, ಕಾರ್ಯದರ್ಶಿ ಆಯ್ಕೆ

Shimoga Map Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 ಆಗಸ್ಟ್ 2021 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರಾಥಮಿಕ ಆರೋಗ್ಯ ಸುರಕ್ಷತಾಕಾರಿಗಳ ಸಂಘದ ವತಿಯಿಂದ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರಿಗೆ ಮನವಿ ಸಲ್ಲಿಸಲಾಯಿತು. ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯ ಬೆನ್ನಿಗೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಮಾಡಿದ್ದಾರೆ. ಇದೆ ವೇಳೆ ಪ್ರಾಥಮಿಕ ಆರೋಗ್ಯ ಸುರಕ್ಷತಾಕಾರಿಗಳ ಸಂಘಕ್ಕೆ ಜಿಲ್ಲಾ ಅಧ್ಯಕ್ಷರಾಗಿ ಟಿ.ಆಶಾ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಆಶಾ, ಖಜಾಂಚಿ ದುರ್ಗಮ್ಮ, ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಸಂಘದ ಸದಸ್ಯರಾದ … Read more

ಆಸ್ಪತ್ರೆಗೆ ದಾಖಲಾಗಿ 72 ಗಂಟೆಯಲ್ಲಿ ಸೋಂಕಿತರ ಸಾವು, ಶಿವಮೊಗ್ಗದಲ್ಲಿ ಇಂತಹ ಕೇಸ್ ಹೆಚ್ಚು, ಬರ್ತಿದೆ ತಜ್ಞರ ಟೀಮ್

130621 Minister Sudhakar Visit Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 JUNE 2021 ಶಿವಮೊಗ್ಗ ಜಿಲ್ಲೆಯಲ್ಲಿ ಕರೋನದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದೆ. ಇದರ ಆಡಿಟ್ ನಡೆಸೋಕೆ ರಾಜ್ಯ ಸರ್ಕಾರ ಈಗ ತಜ್ಞರ ಸಮಿತಿ ಕಳುಹಿಸಲು ನಿರ್ಧರಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸಾವುಗಳ ಕುರಿತು ಈಗಾಗಲೆ ಜಿಲ್ಲಾ ಮಟ್ಟದಲ್ಲಿ ಆಡಿಟ್ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಾಗಿರಲು ಕಾರಣವನ್ನು ಕಂಡುಕೊಳ್ಳಲು ಬೆಂಗಳೂರಿನಿಂದ ತಜ್ಞರ ಸಮಿತಿಯನ್ನು ಕಳುಹಿಸಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಆಸ್ಪತ್ರೆಗೆ … Read more

ವೈದ್ಯಾಧಿಕಾರಿ ಆತ್ಮಹತ್ಯೆಗೆ ಕಾರಣರಾದವರಿಗೆ ಶಿಕ್ಷೆ ಕೊಡಿ, ಕೋವಿಡ್ ಪರೀಕ್ಷೆ ಒತ್ತಡ ಕಡಿಮೆ ಮಾಡಿ

210820 Doctors Protest in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಆಗಸ್ಟ್ 2020 ತಾಲೂಕು ಆರೋಗ್ಯಾಧಿಕಾರಿ ಸಾವಿಗೆ ಕಾರಣರಾದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು, ಆರೋಗ್ಯ ಇಲಾಖೆ ವೈದ್ಯರು ಮತ್ತು ಸಿಬ್ಬಂದಿಗೆ ಕರ್ತವ್ಯ ಒತ್ತಡ ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಇವತ್ತು ಪ್ರತಿಭಟನೆ ನಡೆಸಲಾಯಿತು. ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವೈದ್ಯಾಧಿಕಾರಿ ಡಾ.ನಗೇಂದ್ರ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಸಿಇಒ ಪ್ರಶಾಂತ್ ಮಿಶ್ರಾ ಅವರ ಒತ್ತಡವೆ ಇದಕ್ಕೆ … Read more