ಶಿವಮೊಗ್ಗ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ, ನದಿ, ಕೆರೆ ದಂಡೆ ಬಳಿ ಎಚ್ಚರ ವಹಿಸುವಂತೆ ಸೂಚನೆ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020 ಶಿವಮೊಗ್ಗದಲ್ಲಿ ಬಿಟ್ಟೂ ಬಿಡದೆ ಮಳೆಯಾಗುತ್ತಿದೆ. ಹಾಗಾಗಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಮತ್ತು ಮಲೆನಾಡು ಭಾಗದ ಹಲವು ಜಿಲ್ಲೆಗಳು ರೆಡ್ ಅಲರ್ಟ್ ವ್ಯಾಪ್ತಿಯಲ್ಲಿವೆ. ಕಳೆದರಡು ದಿನದಿಂದ ನೈಋತ್ಯ ಮಾನ್ಸೂನ್ ಬಿರುಸಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಸಂಭವವಿದೆ … Read more