ವಿದ್ಯಾನಗರದ ಮೇಲ್ಸೇತುವೆ, ಚಿತ್ರದುರ್ಗವರೆಗಿನ ಹೈವೇ, ಶಿವಮೊಗ್ಗ ಹೊಸ ಸೇತುವೆ ಕೆಲಸ ಇವತ್ತಿಂದ ಶುರು

050921 Shivamogga Vidyanagara ROB Bridge

ಶಿವಮೊಗ್ಗ ಲೈವ್.ಕಾಂ |SHIMOGA NEWS | 5 ಸೆಪ್ಟೆಂಬರ್ 2021 ಶಿವಮೊಗ್ಗದಲ್ಲಿ ಇವತ್ತು ಶಂಕುಸ್ಥಾಪನೆಯಾದ ಕಾಮಗಾರಿಗಳು ಕಾಲಮಿತಿಯೊಳಗೆ ಮತ್ತು ಗುಣಮಟ್ಟದೊಂದಿಗೆ ಪೂರ್ಣಗೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು. ಶಿವಮೊಗ್ಗದ ಅರಕೇಶ್ವರ ದೇಗುಲದ ಬಳಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಸಚಿವ ಕೆ.ಎಸ್.ಈಶ್ವರಪ್ಪ ಅವರ ಅವಧಿಯಲ್ಲಿ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿವೆ. ಉಳಿದ ಕಾಮಗಾರಿಗಳಿಗೆ ನಮ್ಮ ಇಲಾಖೆಯಿಂದ ಸಹಕಾರ ನೀಡುತ್ತೇವೆ … Read more

ಬಾರಂದೂರು ಬಳಿ ಭೀಕರ ಅಪಘಾತ, ಸೀಟ್’ನಲ್ಲೇ ಸಿಕ್ಕಿಬಿದ್ದು ಚಾಲಕ ಸಾವು

260821 Accident Between Two Cars at barandur in Bhadravathi

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 26 ಆಗಸ್ಟ್ 2021 ಎರಡು ಕಾರುಗಳ ಮಧ್ಯೆ ಮುಖಾಮುಖಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಒಂದು ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಭದ್ರಾವತಿಯ ಬಾರಂದೂರು ಸಮೀಪ ಟಾಟಾ ಸುಮೊ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಓಮ್ನಿ ಕಾರು ಚಾಲಕ ಮಂಜುನಾಥ್ ತಲೆಗೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಹೇಗಾಯ್ತು ಆಪಘಾತ? ಗೃಹೋಪಯೋಗಿ ವಸ್ತುಗಳ ಮಾರಾಟಕ್ಕಾಗಿ ಮಂಜುನಾಥ್ ಮತ್ತು … Read more

ಸೇತುವೆ, ರಸ್ತೆ ಕುಸಿತ, ತೀರ್ಥಹಳ್ಳಿ, ಹೊಸನಗರದ ಹೆದ್ದಾರಿಗಳಲ್ಲಿ ಭಾರಿ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗ ಪ್ರಕಟ

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021 ಹೊಸನಗರದ ನಗರ ಮತ್ತು ಚಿಕ್ಕಪೇಟೆ ನಡುವೆ ಇರುವ ಸೇತುವೆ ಕುಸಿದಿದೆ. ಇತ್ತ ತೀರ್ಥಹಳ್ಳಿಯ ಭಾರತೀಪುರ ತಿರುವಿನಲ್ಲಿ ರಸ್ತೆ ಕುಸಿತ ಉಂಟಾಗಿದೆ. ಆದ್ದರಿಂದ  ಈ ಮಾರ್ಗಗಳಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಹೊಸನಗರದಿಂದ ನಗರ – ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 (ಸಿ) ರಲ್ಲಿ ಸೇತುವೆ ಕುಸಿದಿದೆ. ನಗರ – ಚಿಕ್ಕಪೇಟೆ ರಸ್ತೆಯಲ್ಲಿ ಈ … Read more

ಹೆದ್ದಾರಿಯಲ್ಲಿ ಹರಿಯುತ್ತಿದೆ ತುಂಗಾ ನದಿ ನೀರು, ಶಿವಮೊಗ್ಗ ತೀರ್ಥಹಳ್ಳಿ ಸಂಚಾರ ವ್ಯತ್ಯಯ

230721 Tunga River At Tuduru Road 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 23 ಜುಲೈ 2021 ತುಂಗಾ ನದಿ ಉಕ್ಕಿ ಹರಿದು ರಸ್ತೆ, ಗದ್ದೆಗಳು ಜಲಾವೃತವಾಗಿವೆ. ಇದರಿಂದ ಶಿವಮೊಗ್ಗ ತೀರ್ಥಹಳ್ಳಿ ನಡುವೆ ರಸ್ತೆ ಸಂಚಾರ ವ್ಯತ್ಯಯವಾಗಿದೆ. ತೀರ್ಥಹಳ್ಳಿಯ ತೂದೂರಿನಲ್ಲಿ ತುಂಗಾ ನದಿ ಉಕ್ಕಿ ಹರಿಯುತ್ತಿದೆ. ಹೊಳೆ ನೀರು ರಸ್ತೆಗೆ ಬಂದಿದೆ. ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ನೀರಿನ ರಭಸಕ್ಕೆ ರಸ್ತೆ ಪಕ್ಕದಲ್ಲಿ ನಿಂತಿವೆ. ಹಾಗಾಗಿ ಶಿವಮೊಗ್ಗ ತೀರ್ಥಹಳ್ಳಿ ನಡುವೆ ರಸ್ತೆ ಸಂಚಾರ ವ್ಯತ್ಯಯ ಉಂಟಾಗಿದೆ. ಅಕ್ಕಪಕ್ಕದ ಜಮೀನಿಗೂ ನೀರು ನುಗ್ಗಿದೆ. ನಾಟಿ ಮಾಡಿದ್ದ … Read more

ಹೈವೇ ರಸ್ತೆಯಲ್ಲಿ ಉರುಳಿದ ಮರ, ಕಾರು ಪೀಸ್ ಪೀಸ್, ಒಳಗಿದ್ದವರಿಗೆ ಗಾಯ

220721 Sagara Road Tree Falls Down On Car 1

ಶಿವಮೊಗ್ಗ ಲೈವ್.ಕಾಂ | SAGARA NEWS | 22 ಜುಲೈ 2021 ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದಿದೆ. ಕಾರಿನಲ್ಲಿದ್ದವರಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ – ಆನಂದಪುರ ರಸ್ತೆಯ ಬನದಕೊಪ್ಪ ಎಂಬಲ್ಲಿ ಘಟನೆ ಸಂಭವಿಸಿದೆ. ಮರ ಬಿದ್ದಿದ್ದರಿಂದ ಕಾರಿನಲ್ಲಿದ್ದವರಿಗೆ ಗಾಯವಾಗಿದೆ. ಕೂಡಲೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮರ ಬಿದ್ದ ರಭಸಕ್ಕೆ ಮಾರುತಿ ಕಾರು ನಜ್ಜುಗುಜ್ಜಾಗಿದೆ. ಪೊಲೀಸ್ ಇಲಾಖೆಯ 112 ವಾಹನ, ಹೈವೇ ಪ್ಯಾಟ್ರೋಲಿಂಗ್ ಸಿಬ್ಬಂದಿಗಳು ಪರಿಶೀಲನೆ … Read more

ತುಮಕೂರು – ಶಿವಮೊಗ್ಗ ಚತುಷ್ಪಥ ಹೆದ್ದಾರಿಗೆ ಆರು ಸಾವಿರ ಕೋಟಿ ಪರಿಷ್ಕೃತ ಅಂದಾಜು, ಸಂಸದ ರಾಘವೇಂದ್ರ ಸಂತೋಷ

040221 Raghavendra Meets Nitin Gadkari 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021 ತುಮಕೂರು – ಶಿವಮೊಗ್ಗ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ 6397.47 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರು ಅನುಮೋದನೆ ನೀಡಿರುವುದರಿಂದ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ಈ  ಯೋಜನೆಯಿಂದಾಗಿ ತುಮಕೂರು – ಶಿವಮೊಗ್ಗ ನಡುವೆ 5 ದೊಡ್ಡ ಸೇತುವೆಗಳು, 66 ರೈಲ್ವೆ ಕೆಳಸೇತುವೆ, ಮೇಲ್ಸೇತುವೆಗಳು, 7 ಕಡೆ ಬೈಪಾಸ್‌ಗಳು ನಿರ್ಮಾಣವಾಗಲಿದೆ. ಬೆಂಗಳೂರಿನಿಂದ … Read more

SHIMOGA | ಗಾಡಿಕೊಪ್ಪ ಸಮೀಪ ಸಾಗರ ರಸ್ತೆಯಲ್ಲಿ ಹೆದ್ದಾರಿ ತಡೆ, ಒಂದು ಗಂಟೆ ರಸ್ತೆಯಲ್ಲೇ ಕುಳಿತ ರೈತರು

060221 Farmers Protest in Sagara road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 06 FEBRUARY 2021 ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಸರ್ಕಾರ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗದಲ್ಲೂ ರೈತರು ಹೆದ್ದಾರಿ ತಡೆದ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಗಾಡಿಕೊಪ್ಪದಲ್ಲಿ ಸಾಗರ ರಸ್ತೆಯಲ್ಲಿ ಹೆದ್ದಾರಿ ತಡೆ ಚಳವಳಿ ನಡೆಸಲಾಯಿತು. ಸುಮಾರು ಒಂದು ಗಂಟೆ ಚಳವಳಿ ನಡೆಯಿತು. ದೆಹಲಿಯಲ್ಲಿ ರೈತರು ನಡೆಸುತ್ತಿರುವ ಚಳವಳಿಗೆ ಬೆಂಬಲವಾಗಿ ಶಿವಮೊಗ್ಗ ಜಿಲ್ಲೆಯಲ್ಲೂ ಹೆದ್ದಾರಿ ತಡೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಹಠಮಾರಿ ಧೋರಣೆ … Read more

SAGARA | ತಾಳಗುಪ್ಪದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ, ಸಮಸ್ಯೆ ಬಗೆಹರಿಯದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ

030221 Talaguppa Road Block Protest 1

ಶಿವಮೊಗ್ಗ ಲೈವ್.ಕಾಂ | SAGARA NEWS | 03 FEBRUARY 2021 ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ವಿರೋಧಿಸಿ ಸಾಗರ ತಾಲೂಕು ತಾಳಗುಪ್ಪದಲ್ಲಿ  ಇವತ್ತು ಪ್ರತಿಭಟನೆ ನಡೆಸಲಾಯಿತು. ರಸ್ತೆ ತಡೆ ನಡೆಸಿದ ಸ್ಥಳೀಯರು, ಹೆದ್ದಾರಿ ಪ್ರಾಧಿಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಷ್ಟ್ರೀಯ ಹೆದ್ದಾರಿ 206ರಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸರಿಯಾಗಿ ಮಣ್ಣು ಹಾಕಿಲ್ಲ. ಗ್ರಾವೆಲ್ ಸರಿಯಾಗಿ ಆಗದೆ ಇರುವುದರಿಂದ ಅಪಘಾತಗಳು ಹೆಚ್ಚಾಗಿವೆ. ಇಕ್ಕೆಲಗಳಲ್ಲಿ ಸರಿಯಾಗಿ ಡಾಂಬರೀಕರಣವು ಆಗಿಲ್ಲ.  ಹಾಗಾಗಿ ರಸ್ತೆಯ ಅಂಚಿಗೆ ಬಂದು ಹಲವು ದ್ವಿಚಕ್ರ ವಾಹನ ಸವಾರರು … Read more

ಶಿವಮೊಗ್ಗ – ಚಿತ್ರದುರ್ಗ ಹೆದ್ದಾರಿ ಕೆಲಸ, ವಿದ್ಯಾನಗರದಲ್ಲಿ ಮೇಲ್ಸೇತುವೆ, ತೀರ್ಥಹಳ್ಳಿಯಲ್ಲೂ ವಿವಿಧ ರಸ್ತೆ ಕಾಮಗಾರಿ ಶುರು

Shimoga Bhadravathi Road 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 DECEMBER 2020 ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಡಿಸೆಂಬರ್ 19ರಂದು ಆನ್‍ಲೈನ್‍ ಮೂಲಕ ಸಚಿವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ವಿಡಿಯೋಗಾಗಿ ಕ್ಲಿಕ್ ಮಾಡಿ | ಈಗ ಬಟ್ಟೆ ಒಗೆಯುವುದು ಇನ್ನೂ ಸುಲಭ, ಬಂದಿದೆ ಪೋರ್ಟೆಬಲ್ ವಾಷಿಂಗ್ ಮಿಷಿನ್, ಹೇಗಿದೆ ಗೊತ್ತಾ? ಶಿವಮೊಗ್ಗದಲ್ಲಿ ಎಲ್ಲಿ … Read more

ಅರಹತೊಳಲು, ಕೈಮರದಲ್ಲಿ ಹೆದ್ದಾರಿ ತಡೆದು ರೈತರ ಆಕ್ರೋಶ, ವಿಧಾನಸೌಧ ಮುತ್ತಿಗೆಯ ಎಚ್ಚರಿಕೆ

021220 Farmers Protest at Arahatolalu Highway 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020 ದೆಹಲಿ ಪ್ರವೇಶಿಸಲು ರೈತರಿಗೆ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಮತ್ತು ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅರಹತೊಳಲು, ಕೈಮರದಲ್ಲಿ ಇಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿದ್ದಾರೆ. ರೈತರಿಗೆ ದೆಹಲಿ ಪ್ರವೇಶಿಸಲು ಅವಕಾಶ ನೀಡದೆ … Read more