ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ, ಫೋಟೊಗ್ರಾಫರ್ ಕೊನೆಯುಸಿರು
ಶಿವಮೊಗ್ಗ: ನಿಂತಿದ್ದ ಗೂಡ್ಸ್ ವಾಹನಕ್ಕೆ ಕಾರು ಡಿಕ್ಕಿಯಾಗಿ (Car Mishap) ಫೋಟೊಗ್ರಾಫರ್ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಪಿಳ್ಳಂಗೆರೆ ಸಮೀಪ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಹೆಚ್.ಪಿ.ಚೇತನ್ (36) ಮೃತ ಫೋಟೊಗ್ರಾಫರ್. ಸ್ನೇಹಿತನೊಂದಿಗೆ ಕಾರಿನಲ್ಲಿ ಶಿವಮೊಗ್ಗದಿಂದ ತಮ್ಮೂರು ಭದ್ರಾವತಿ ತಾಲೂಕು ಹನುಮಂತಾಪುರಕ್ಕೆ ತೆರಳುವಾಗ ನಿಂತಿದ್ದ ಗೂಡ್ಸ್ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಗಂಭೀರ ಗಾಯಗೊಂಡಿದ್ದ ಚೇತನ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. ಚೇತನ್ ಸ್ನೇಹಿತ ಶಿವು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. … Read more