ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ರಣ ಬಿಸಿಲಲ್ಲೂ ಸೇರಿದ್ದರು ದೊಡ್ಡ ಸಂಖ್ಯೆಯ ಜನ
ಶಿವಮೊಗ್ಗ : ದುರ್ಗಿಗುಡಿಯ ಶ್ರೀ ದುರ್ಗಮ್ಮ, ಶ್ರೀ ಮರಿಯಮ್ಮ ದೇವರ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಅಂಗವಾಗಿ ದೇವಸ್ಥಾನದಲ್ಲಿ (Temple) ವಿಶೇಷ ಪೂಜೆ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ದೇವರಿಗೆ ಕೈ ಮುಗಿದು ಶ್ರದ್ಧೆಯಿಂದ ಪ್ರಾರ್ಥನೆ ಸಲ್ಲಿಸಿದರು. ದುರ್ಗಿಗುಡಿಯ ದುರ್ಗಮ್ಮ ಮತ್ತು ಮರಿಯಮ್ಮ ದೇವಿ ದೇವಸ್ಥಾನದಿಂದ (Temple) ದುರ್ಗಿಗುಡಿ ಮುಖ್ಯರಸ್ತೆವರೆಗೆ ರಥೋತ್ಸವ ನಡೆಯಿತು. ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿ ಮೆರವಣಿಗೆ ರಥೋತ್ಸವಕ್ಕು ಮುನ್ನ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಬಳಿಕ ದುರ್ಗಿಗುಡಿಯ ವಿವಿಧೆಡೆ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಕೊಂಡೊಯ್ಯಲಾಯಿತು. … Read more