ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಲಾರಿ ಪಲ್ಟಿ, ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು ಮಕ್ಕಳ ಪ್ರಾಣ
ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 8 ಜನವರಿ 2022 ಸೈಕಲ್’ನಲ್ಲಿ ಏಕಾಏಕಿ ಅಡ್ಡ ಬಂದ ಮಕ್ಕಳಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಲಾರಿ ಪಲ್ಟಿಯಾಗಿದೆ. ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಹೊಸ ಸಿದ್ಧಾಪುರ ಗ್ರಾಮದ ಬಳಿ ರಸ್ತೆಯಲ್ಲಿ ಶಾಲಾ ಮಕ್ಕಳು ಸೈಕಲ್’ನಲ್ಲಿ ದಿಢೀರ್ ಮುಖ್ಯ ರಸ್ತೆಗೆ ಬಂದಿದ್ದಾರೆ. ಇವರಿಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಲಾರಿಯನ್ನು ಚಾಲಕ ಪಕ್ಕಕ್ಕೆ ತಿರುಗಿಸಿದ್ದಾನೆ. ಲಾರಿ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಲಾರಿಯು ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿತ್ತು … Read more