ರಿಪ್ಪನ್‌ಪೇಟೆ ಸೇರಿ ವಿವಿಧೆಡೆ ಡಿ.3ರಂದು ಇಡೀ ದಿನ ಕರೆಂಟ್ ಇರಲ್ಲ
ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಮೆಸ್ಕಾಂ ಶಾಖೆ ವ್ಯಾಪ್ತಿಯಲ್ಲಿ ಡಿ.3ರಂದು ಬೆಳಗ್ಗೆ 9.30ರಿಂದ ಸಂಜೆ 6 ರವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಬಾಳೂರು, ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶ ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ತಿಳಿಸಿದೆ. ಇದನ್ನೂ ಓದಿ » ಕೋಣಂದೂರು ಬಳಿ ಡೆತ್ ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ