ಗಾಂಧಿ ಬಜಾರ್‌ನ ಅಂಗಡಿ ಮೇಲೆ ಅಧಿಕಾರಿಗಳು ದಾಳಿ, ಮಾಲೀಕನ ವಿರುದ್ಧ ಕೇಸ್, ಯಾಕೆ?
ಶಿವಮೊಗ್ಗ: ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರನ್ನು ವಾಣಿಜ್ಯ ಉದ್ದೇಶಕ್ಕೆ ಬಳಕೆ ಮಾಡುತ್ತಿರುವ ಮಾಹಿತಿ ಹಿನ್ನೆಲೆ ಗಾಂಧಿ ಬಜಾರ್‌ನಲ್ಲಿರುವ ಆಹಾರ ಸಂಸ್ಕರಣಾ ಮಳಿಗೆ (shop) ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭ ಮಳಿಗೆಯಲ್ಲಿ ಗೃಹಬಳಕೆಯ ಎರಡು ಖಾಲಿ ಸಿಲಿಂಡರ್‌ಗಳು ಪತ್ತೆಯಾಗಿವೆ. ಸಿಲಿಂಡರ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸರ್ಕಾರದ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಗೃಹಬಳಕೆಯ ಸಿಲಿಂಡರ್ ಬಳಸುತ್ತಿರುವ ಹಿನ್ನೆಲೆ ಅಂಗಡಿ ಮಾಲೀಕನ ವಿರುದ್ಧ ದೂರು ನೀಡಲಾಗಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ … Read more