ಲೋಕಸಭೆ ಚುನಾವಣೆ, ಶಿವಮೊಗ್ಗಕ್ಕೆ ಉಸ್ತುವಾರಿ, ಸಹ ಉಸ್ತುವಾರಿ ನೇಮಿಸಿದ ಜೆಡಿಎಸ್
SHIVAMOGGA LIVE NEWS | 6 FEBRUARY 2024 SHIMOGA : ಲೋಕಸಭೆ ಚುನಾವಣೆಗೆ ಜೆಡಿಎಸ್ ಪಕ್ಷ ಎಲ್ಲ 28 ಕ್ಷೇತ್ರಕ್ಕು ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿದೆ. ಶಿವಮೊಗ್ಗ ಕ್ಷೇತ್ರಕ್ಕು ಜವಾಬ್ದಾರಿ ಹಂಚಲಾಗಿದೆ. ಶಿವಮೊಗ್ಗ ಕ್ಷೇತ್ರಕ್ಕೆ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರನ್ನು ಉಸ್ತುವಾರಿಯಾಗಿ ನೇಮಿಸಲಾಗಿದೆ. ಸಹ ಉಸ್ತುವಾರಿಗಳಾಗಿ ವಿಧಾನ ಪರಿಷತ್ ಸದಸ್ಯ ಭೋಜೆಗೌಡ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಅವರನ್ನು ನೇಮಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 11 ಮಂದಿಗೆ ಕೆಎಫ್‌ಡಿ ಸೋಂಕು ಪಾಸಿಟಿವ್