ಸೋಗಾನೆ ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಟೀ ಕ್ಯಾಂಟೀನ್‌ಗೆ ನುಗ್ಗಿದ ಕಾರು
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರು (car) ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ಟೀ ಕ್ಯಾಂಟೀನ್‌ಗೆ ನುಗ್ಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಗಾನೆ ಕ್ರಾಸ್‌ನಲ್ಲಿ ಘಟನೆ ಸಂಭವಿಸಿದೆ. ಕಾರು ಡಿಕ್ಕಿಯಾಗಿ ಭಂಡಾರಿ ಕ್ಯಾಂಪ್‌ನ ಚಲುವ ಗಂಭೀರವಾಗಿ ಗಾಯಗೊಂಡಿದ್ದಾರೆ. ಸುಬ್ಬು, ವಿಜಯಲಕ್ಷ್ಮಿ ಎಂಬುವವರು ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ರಸ್ತೆಯ ಎಡಬದಿಯ ಕ್ಯಾಂಟೀನ್‌ಗೆ ನುಗ್ಗಿದೆ. ಘಟನೆಯಲ್ಲಿ … Read more