ಶಿವಮೊಗ್ಗ ಸಿಟಿ ಸೆಂಟರ್ ಮಾಲ್’ನಲ್ಲಿ ಭಾವಚಿತ್ರ ಪ್ರದರ್ಶನ ವಿವಾದ, ಬಿಗುವಿನ ವಾತಾವರಣ
ಶಿವಮೊಗ್ಗ | ಸ್ವಾತಂತ್ರ್ಯೋತ್ಸವದ (INDEPENDENCE) ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ (FREEDOM FIGHTER) ಭಾವಚಿತ್ರಗಳ ಪ್ರದರ್ಶನ ಶಿವಮೊಗ್ಗದಲ್ಲಿ ವಿವಾದಕ್ಕೆ ಕಾರಣವಾಗಿದೆ. ಪರ, ವಿರೋಧ ಪ್ರತಿಭಟನೆ ಹುಟ್ಟುಹಾಕಿದೆ. ಶಿವಮೊಗ್ಗದ ಬ್ಯಾರಿಸ್ ಸಿಟಿ ಸೆಂಟರ್ ಮಾಲ್’ನಲ್ಲಿ ಇವತ್ತು ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು. ಇದು ಈಗ ವಿವಾದಕ್ಕೆ ಕಾರಣವಾಗಿದೆ. ವಿವಾದದ ಕಿಡಿ ಹೊತ್ತಿದ್ದು ಹೇಗೆ? ಸಿಟಿ ಸೆಂಟರ್ ಮಾಲ್’ನ ಒಳ ಆವರಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಪ್ರದರ್ಶನ ಆಯೋಜಿಸಲಾಗಿತ್ತು. … Read more