ವಿಧಾನಸೌಧದಲ್ಲಿ ಕೆಲಸ ಕೊಡಿಸ್ತೀನಿ ಅಂದ, ಲಕ್ಷ ಲಕ್ಷ ಹಣ ಪಡೆದವನ ಹಿನ್ನೆಲೆ ಪರಿಶೀಲಿಸಿದಾಗ ಕಾದಿತ್ತು ಆಘಾತ
ಶಿವಮೊಗ್ಗ : ವಿಧಾನಸೌಧದಲ್ಲಿ ಕೆಲಸ (Job Scam) ಕೊಡಿಸುವುದಾಗಿ ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ 10 ಲಕ್ಷ ರೂ. ವಂಚಿಸಲಾಗಿದೆ. ಈ ಸಂಬಂಧ ಸರ್ಕಾರಿ ಶಾಲೆಯ ಸಹ ಶಿಕ್ಷಕನೊಬ್ಬನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಯುವಕನೊಬ್ಬನಿಗೆ ವೆಂಕಟೇಶ ಮೂರ್ತಿ ಎಂಬಾತನ ಪರಿಚಯವಾಗಿತ್ತು. ಆತ ತಾನು ಬಿಬಿಎಂಪಿಯಲ್ಲಿ ಗುತ್ತಿಗೆದಾರ ಎಂದು ಪರಿಚಯಿಸಿಕೊಂಡಿದ್ದ. ಸ್ವಲ್ಪ ಸಮಯದ ಬಳಿಕ ವಿಧಾನಸೌಧದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ (Job Scam) ವೆಂಕಟೇಶ ಮೂರ್ತಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಅಲ್ಲದೆ ಶಿವಮೊಗ್ಗದ ಯುವಕನಿಂದ … Read more