ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೂವರ ಕಂಚಿನ ಪ್ರತಿಮೆ ಸ್ಥಾಪನೆಗೆ ಒತ್ತಾಯ
ರಿಪ್ಪನ್‌ಪೇಟೆ : ಮಲೇರಿಯಾ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ಸರ್ಜನ್ ಟಿ.ಜೆ.ಮೆಗ್ಗಾನ್ ಅವರ ಕಂಚಿನ ಪ್ರತಿಮೆಯನ್ನು ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯ (Hospital) ಆವರಣದಲ್ಲಿ ಸ್ಥಾಪಿಸುವಂತೆ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಆಧ್ಯಯನ ಕೇಂದ್ರದ ಟ್ರಸ್ಟಿ ಕಲ್ಲೂರು ಮೇಘರಾಜ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಕಲ್ಲೂರು ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಲ್ಲೂರು ಮೇಘರಾಜ್, ಸಮಾಜವಾದದ ಹರಿಕಾರ ಶಾಂತವೇರಿ ಗೋಪಾಲ ಗೌಡರು ಹಾಗೂ ಗೇಣಿ ಸತ್ಯಾಗ್ರಹದ ರೂವಾರಿ ಹೆಚ್.ಗಣಪತಿಯಪ್ಪ ಅವರ ಕಂಚಿನ ಪ್ರತಿಮೆಯನ್ನೂ ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. … Read more