ಕಾರ್ಮಿಕ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್‌ಗಳಿಲ್ಲ, ಸಿಬ್ಬಂದಿಯೂ ಹೆಚ್ಚಿಲ್ಲ, ಶಿವಮೊಗ್ಗದ 10 ಲಕ್ಷ ಕಾರ್ಮಿಕರಿಗೆ ಸೌಲಭ್ಯವೆ ಸಿಕ್ತಿಲ್ಲ

020920 Ayanuru Manjunath Press Meet On Labour Department 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಸೆಪ್ಟಂಬರ್ 2020 ಕಾರ್ಮಿಕರಿಗೆ ಸೌಲಭ್ಯಗಳನ್ನು ಕೊಡಬೇಕಾದ ಕಾರ್ಮಿಕ ಇಲಾಖೆಯೇ ಅಶಕ್ತವಾಗಿದೆ ಅಸಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಹಾಗೂ ವಿಧಾನಪರಿಷತ್ ಶಾಸಕ ಆಯನೂರು ಮಂಜುನಾಥ್ ಆರೋಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಂಘಟಿತ ವಲಯದಲ್ಲಿ ಲಕ್ಷಾಂತರ ಕಾರ್ಮಿಕರಿದ್ದಾರೆ. ಇವರಿಗೆ ಕಾರ್ಮಿಕ ಇಲಾಖೆಯಿಂದ ಸಿಗಬೇಕಾದ ಸೌಲಭ್ಯಗಳೇ ಸಿಗುತ್ತಿಲ್ಲ. ತಾಲೂಕು ಕೇಂದ್ರಗಳಲ್ಲಿ ಇಲಾಖೆಯ ಇನ್ಸ್ ಪೆಕ್ಟರ್‌ಗಳೇ ಇಲ್ಲ. ಜಿಲ್ಲಾ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಇಲಾಖೆಯಲ್ಲಿ ನೊಂದಾಯಿಸಿಕೊಂಡಿರುವ ಕಾರ್ಮಿಕರ ನವೀಕರಣ ಕಾರ್ಯ ಸಮರ್ಪಕವಾಗಿ ನಡೆಯುತ್ತಿಲ್ಲ. … Read more