ಬಂಜಾರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅಶೋಕ್ ನಾಯ್ಕ್ ದಿಢೀರ್ ರಾಜೀನಾಮೆ, ಕಾರಣವೇನು?
ಶಿವಮೊಗ್ಗ: ಜಿಲ್ಲಾ ಬಂಜಾರ (Banjara) ಸಂಘದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಅಶೋಕ್ ನಾಯ್ಕ್, ಸಂಘದ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆಗೆ ಕಾರಣವೇನು? ವೈಯಕ್ತಿಕ ಮತ್ತು ಕುಟುಂಬದ ಜವಾಬ್ದಾರಿ: ಪ್ರಸಕ್ತ ಸನ್ನಿವೇಶದಲ್ಲಿ ಕುಟುಂಬ ಹಾಗೂ ವೈಯಕ್ತಿಕ ಕೆಲಸಗಳ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾದ ಅನಿವಾರ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಹೊಸ ಪೀಳಿಗೆಗೆ ಅವಕಾಶ: ಸಮಾಜದ … Read more