ಶಿವಮೊಗ್ಗಕ್ಕೆ ಬರ್ತಿದ್ದಾರೆ ಕೇರಳ ರಾಜ್ಯಪಾಲರು, ಎಲ್ಲೆಲ್ಲಿಗೆ ಭೇಟಿ ನೀಡಲಿದ್ದಾರೆ?

Kerala-Governor-to-visit-Shivamogga

ಶಿವಮೊಗ್ಗ: ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ನ.30ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ ಹೈದರಾಬಾದ್‌ನಿಂದ ವಿಮಾನದಲ್ಲಿ ಹೊರಟು 10.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ. ಬೆಳಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್‌ಗೆ ಆಗಮಿಸಲಿದ್ದು, ಶ್ರೀ ಭಗವದ್ಗೀತೆ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.50ಕ್ಕೆ ಶಿವಮೊಗ್ಗದ ಸರ್ಕ್ಯೂಟ್‌ ಹೌಸ್‌ಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಂಡಿಗೋ ವಿಮಾನದ ಮೂಲಕ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.   ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್‌ ನಿರಂತರ … Read more

ಶಿವಮೊಗ್ಗದಲ್ಲಿ ಬೈಕಿನಲ್ಲಿ ಅಕ್ಕಿ ಮೂಟೆ ಇಟ್ಟುಕೊಂಡು ಹೋಗುವಾಗ ಅಪಘಾತ, ಕೇರಳದ ವ್ಯಕ್ತಿ ಸಾವು

ACCIDENT-NEWS-GENERAL-IMAGE.

ಶಿವಮೊಗ್ಗ : ಬೈಕ್‌ನ ಮುಂಭಾಗದಲ್ಲಿ ಅಕ್ಕಮೂಟೆ (Rice Bag) ಇಟ್ಟುಕೊಂಡು ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ಪಿಇಎಸ್‌ ಕಾಲೇಜು ಹಿಂಭಾಗ ಕಿಮ್ಮನೆ ಗಾಲ್ಫ್‌ ಕ್ಲಬ್‌ಗೆ ತೆರಳುವ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕೇರಳ ಮೂಲದ ಎರ್ನಾಕುಲಂನ ಜೋಬಿ ಪೌಲ್‌ (45) ಮೃತ ಬೈಕ್‌ ಸವಾರ. ಇಲ್ಲಿನ ಫಾರಂ ಒಂದರಲ್ಲಿ ಜೋಬಿ ಪೌಲ್‌ ಕೆಲಸ ಮಾಡುತ್ತಿದ್ದರು. ಸಾಗರ ರಸ್ತೆಯ ಅಂಗಡಿಯೊಂದರಲ್ಲಿ ಅಕ್ಕಿ ಮೂಟೆ (Rice Bag) ಖರೀದಿಸಿ, ಅದನ್ನು ಬೈಕಿನ ಮುಂಭಾಗದಲ್ಲಿ … Read more

ಹಸುವನ್ನು ರಕ್ಷಿಸಲು ಬಾವಿಗೆ ಇಳಿದ ವ್ಯಕ್ತಿ ಉಸಿರುಗಟ್ಟಿ ಸಾವು, ಎಲ್ಲಿ? ಹೇಗಾಯ್ತು ಘಟನೆ?

crime name image

ಕೋಣಂದೂರು : ಹಸುವನ್ನು ರಕ್ಷಿಸಲು ಬಾವಿಗಿಳಿದಿದ್ದ ವ್ಯಕ್ತಿ ಉಸಿರುಗಟ್ಟಿ (Suffocation) ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕಾರ್ಕೊಡ್ಲುವಿನಲ್ಲಿ ಘಟನೆ ಸಂಭವಿಸಿದೆ. ಕೇರಳದ ಸತೀಶ್ (45) ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವರು ಈಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಆ ಬಾವಿಗೆ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆ ಇಳಿದಿದ್ದರು. ಈ ಸಂದರ್ಭ ಉಸಿರುಗಟ್ಟಿ (Suffocation) ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಸತೀಶ್‌ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಬುಧವಾರ ಬಾವಿಯಿಂದ ಮೇಲಕ್ಕೆ … Read more

ಕೇರಳದಲ್ಲಿ ಹಕ್ಕಿ ಜ್ವರ, ಬಾತುಕೋಳಿಗಳಲ್ಲಿ ಸೋಂಕು ದೃಢ, ಆತಂಕ

INFORMATION-NEWS-FATAFAT-GENERAL

SHIVAMOGGA LIVE NEWS | 19 APRIL 2024 KERALA : ಕೇರಳದ ಅಲಪ್ಪುಳದ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾತುಕೋಳಿಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಹಕ್ಕಿ ಜ್ವರ ಶಂಕೆ ಮೇಲೆ ಮಾದರಿ ಸಂಗ್ರಹಿಸಿ ಭೂಪಾಲ್‌ನ ಪ್ರಯೋಗಾಲಕ್ಕೆ ಕಳುಹಿಸಲಾಗಿತ್ತು. ಹೆಚ್‌5ಎನ್‌1 ದೃಢವಾದ ಹಿನ್ನೆಲೆ ಎರಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಕ್ಕಿ ಜ್ವರ ಉಳಿದ ಕಡೆಗೆ ಹರಡದಂತೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಾತುಕೋಳಿಗಳ ಜೊತೆಗೆ ಕೋಳಿಗಳು ಮತ್ತು ಇತರೆ ಪಕ್ಷಿಗಳ ಮಾದರಿಯನ್ನೂ ಸಂಗ್ರಹಿಸಲಾಗಿದ್ದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದನ್ನೂ … Read more

ಕೇರಳದ ವ್ಯಕ್ತಿ ಸೊರಬದಲ್ಲಿ ಕೊಲೆ, ಘಟನೆಗೆ ಕಾರಣವೇನು?

Crime-News-General-Image

SHIVAMOGGA LIVE NEWS | 5 DECEMBER 2023 SORABA : ರಬ್ಬರ್‌ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಕೂಲಿ ಕಾರ್ಮಿಕನೊಬ್ಬನನ್ನು ಹತ್ಯೆ ಮಾಡಲಾಗಿದೆ. ಸೊರಬ ತಾಲೂಕಿನ ರಬ್ಬರ್‌ ತೋಟವೊಂದರಲ್ಲಿ ಘಟನೆ ಸಂಭವಿಸಿದೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಹಿತಿ ನೀಡಿದ್ದಾರೆ. ಕೇರಳ ರಾಜ್ಯದ ಕಣ್ಣೂರಿನ ಶಿಜು (42) ಎಂಬಾತ ಹತ್ಯೆಯಾದವನು. ಘಟನೆ ಸಂಬಂಧ ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ. … Read more

BREAKING | ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ 20 ಕಡೆ ಎನ್ಐಎ ಅಧಿಕಾರಿಗಳಿಂದ ಏಕಕಾಲಕ್ಕೆ ಪರಿಶೀಲನೆ, ಕಾರಣವೇನು?

131021 NIA officials Visit Shimoga regarding Naxal Issue

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಶಿವಮೊಗ್ಗ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ 20ಕ್ಕೂ ಹೆಚ್ಚು ಕಡೆ ಇವತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಶೃಂಗೇರಿ, ಕಾರ್ಕಳಕ್ಕೆ ಹೊಂದಿಕೊಂಡಂತೆ ಇರುವ ಶಿವಮೊಗ್ಗದ ಕೆಲವು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ನಕ್ಸಲ್ ಚಳವಳಿ ಸಂಬಂಧ ತನಿಖೆ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ರಾಜ್ಯದ ಮೂರು … Read more