ಕೋಣಂದೂರು ಬಳಿ ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

KONANDUR-THIRTHAHALLI-NEWS

ಕೋಣಂದೂರು: ಸಮೀಪದ ಹೊಸಕೇರಿ ನಿವಾಸಿ ನಾಗರಾಜ (52) ಡೆತ್ ನೋಟ್ ಬರೆದಿಟ್ಟು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಟ್ ಫಂಡ್ ವ್ಯವಹಾರಕ್ಕೆ ಸಂಬಂಧಿಸಿದಂತೆ ತನ್ನ ಮನೆಯ ದಾಖಲೆ ಪತ್ರಗಳನ್ನು ಸಂಬಂಧಿಕರೊಬ್ಬರಿಗೆ ಕೊಟ್ಟು ಜಾಮೀನಿಗೆ ಸಹಿ ಮಾಡಿದ್ದರು.  ಇದನ್ನೂ ಓದಿ » ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ ಈ ಕಾರಣಕ್ಕೆ ಚಿಟ್ ಫಂಡ್‌ನವರು ಕಿರುಕುಳ ನೀಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಸುವನ್ನು ರಕ್ಷಿಸಲು ಬಾವಿಗೆ ಇಳಿದ ವ್ಯಕ್ತಿ ಉಸಿರುಗಟ್ಟಿ ಸಾವು, ಎಲ್ಲಿ? ಹೇಗಾಯ್ತು ಘಟನೆ?

crime name image

ಕೋಣಂದೂರು : ಹಸುವನ್ನು ರಕ್ಷಿಸಲು ಬಾವಿಗಿಳಿದಿದ್ದ ವ್ಯಕ್ತಿ ಉಸಿರುಗಟ್ಟಿ (Suffocation) ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕಾರ್ಕೊಡ್ಲುವಿನಲ್ಲಿ ಘಟನೆ ಸಂಭವಿಸಿದೆ. ಕೇರಳದ ಸತೀಶ್ (45) ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವರು ಈಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಆ ಬಾವಿಗೆ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆ ಇಳಿದಿದ್ದರು. ಈ ಸಂದರ್ಭ ಉಸಿರುಗಟ್ಟಿ (Suffocation) ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ. ಸತೀಶ್‌ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಬುಧವಾರ ಬಾವಿಯಿಂದ ಮೇಲಕ್ಕೆ … Read more

ಕೋಣಂದೂರು ಸಮೀಪ ಕಾರುಗಳ ಸರಣಿ ಅಪಘಾತ, ಹರಿಹರಪುರ ಮಠದ ಶ್ರೀಗಳು ಪಾರು

070325-Swamiji-Car-accident-near-konanduru-in-thirthahalli.webp

ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ (Swamiji) ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ ಮತ್ತೊಂದು ಕಾರು ಸ್ವಾಮೀಜಿ ಇದ್ದ ಕಾರಿಗೆ ಅಪ್ಪಳಿಸಿದೆ. ಮೂರು ವಾಹನಗಳು ಜಖಂ ಆಗಿವೆ. … Read more

ಕೋಣಂದೂರಿನಲ್ಲಿ ಯಕ್ಷಗಾನ, ಧಾರ್ಮಿಕ ಕಾರ್ಯಕ್ರಮ, ಮಾಜಿ ಸಚಿವ ಶ್ರೀರಾಮುಲು ಭಾಗಿ

Former-Minister-Sri-Ramulu-visits-konanduru.

SHIVAMOGGA LIVE NEWS | 24 JANUARY 2024 THIRTHAHALLI : ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳದ ವತಿಯಿಂದ ಆಯೋಜಿಸಿದ್ದ ಸಂಪೂರ್ಣ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನದಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಭಾಗವಹಿಸಿದ್ದರು. ತೀರ್ಥಹಳ್ಳಿ ತಾಲೂಕು ಕೋಣಂದೂರಿನ ಹಾಲವನಹಳ್ಳಿಯಲ್ಲಿ ರವೀಂದ್ರ ಅವರು ಯಕ್ಷಗಾನ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದರು. ಮಾಜಿ ಸಚಿವ ಬಿ.ಶ್ರೀರಾಮುಲು ಅವರು ವಿವಿಧ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಾಜಿ ಸಚಿವ ಕಿಮ್ಮನೆ ರತ್ನಾಕರ್‌, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ, ಪ್ರೆಸ್ಟೀಜ್‌ … Read more

ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ | ಶಿಕಾರಿಪುರದಲ್ಲಿ ಬೈಪಾಸ್‌ ವಿರುದ್ಧ ಹೋರಾಟ | ಟ್ರಾಕ್ಟರ್‌ ಪಲ್ಟಿ, ವ್ಯಕ್ತಿ ಸಾವು

FATAFAT-NAMMURA-NEWS.webp

SHIVAMOGGA LIVE NEWS | 1 DECEMBER 2023 ಭದ್ರಾವತಿಯಲ್ಲಿ ಅಂಗಡಿಗಳ ಮೇಲೆ ದಾಳಿ BHADRAVATHI : ಉಜ್ಜನಿಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಯಿತು. 20 ಮಂದಿ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ. 2 ಸಾವಿರ ರೂ. ದಂಡ ವಿಧಿಸಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ.ಅಶೋಕ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸುಶೀಲಾಬಾಯಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಆನಂದಮೂರ್ತಿ ಮತ್ತು ತಾಜ್ … Read more

ಕೋಣಂದೂರು ಸಮೀಪ ವಿದ್ಯುತ್‌ ಸ್ಪರ್ಶಿಸಿ ವೃದ್ಧೆ ಸಾವು

111023-Kagundi-near-konandur-incident.webp

SHIVAMOGGA LIVE NEWS | 11 OCTOBER 2023  KONANDURU : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ಧೆಯೊಬ್ಬರು (Woman) ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗುಂಡಿ ಗ್ರಾಮದಲ್ಲಿ ಮಂಗಳವಾರ ಘಟನೆ ಸಂಭವಿಸಿದೆ. ವರಮಹಾಲಕ್ಷ್ಮಿ (73) ಎಂಬುವರು ಮೃತ ದುರ್ದೈವಿ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ- ಇಸ್ರೇಲ್‌ನಲ್ಲಿರುವ ಶಿವಮೊಗ್ಗದ ನಿವಾಸಿಗಳು ಸೇಫ್‌, ಮಾಹಿತಿ ಸಂಗ್ರಹ  

ತೀರ್ಥಹಳ್ಳಿಯಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌

Raid-on-Areca-Plantation-in-Thirthahalli-Konanduru

SHIVAMOGGA LIVE NEWS | 10 AUGUST 2023 THIRTHAHALLI : ಅಡಿಕೆ ತೋಟದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ (Police Raid) ನಡೆಸಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ – ನೆಹರು ರಸ್ತೆಯಲ್ಲಿ ಸರಣಿ ಕಳ್ಳತನ, ಬ್ರಾಂಡೆಡ್‌ ಶೂ, ಚಪ್ಪಲಿ ಹೊತ್ತೊಯ್ದ ಖದೀಮರು ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಲಿಗೆ ಗ್ರಾಮದಲ್ಲಿ ಅಡಿಕೆ ತೋಟದ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಯಲಾಗಿತ್ತು. ದಾಳಿ … Read more

ಹಣ ದುರುಪಯೋಗ, ಪಿಡಿಓ ಸಸ್ಪೆಂಡ್, ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಓ ಆದೇಶ

ಶಿವಮೊಗ್ಗ ಲೈವ್.ಕಾಂ | 14 ಡಿಸೆಂಬರ್ 2018 ಹಣ ದುರುಪಯೋಗ ಮಾಡಿರುವ ಆರೋಪದ ಹಿನ್ನೆಲೆ ಪಿಡಿಓ ಒಬ್ಬರನ್ನು ಅಮಾನತು ಮಾಡಲಾಗಿದೆ. ಈ ಸಂಬಂಧ ಜಿಲ್ಲಾ ಪಂಚಾಯಿತಿ ಸಿಇಓ ಶಿವರಾಮೇಗೌಡ ಆದೇಶ ಹೊರಡಿಸಿದ್ದಾರೆ. ಕೋಣಂದೂರು ಗ್ರಾಮ ಪಂಚಾಯಿತಿಯ ಪಿಡಿಓ ಕೆ.ಎಸ್.ಕುಮಾರ್ ಅಮಾನತುಗೊಂಡವರು. ಮುಖ್ಯ ಲೆಕ್ಕಾಧಿಕಾರಿ ನೀಡಿದ ವರದಿ ಅನುಸಾರ ಕೆ.ಸಿ.ಎಸ್ (ಸಿಸಿಎ) ನಿಯಮ 10ರ ಅಡಿಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಪಿಡಿಓ ಅಮಾನತಿಗೆ ಕಾರಣಗಳೇನು? ಪಿಡಿಓ ಕೆ.ಎಸ್.ಕುಮಾರ್, ಹಿಂದಿನ ಪಿಡಿಓ ಸಹಿ ಫೋರ್ಜರಿ ಮಾಡಿ, … Read more