ರಾಜೀನಾಮೆ ಬಳಿಕ ಮುಂದೇನು, ಕಾರ್ಯಕರ್ತರ ಸಭೆಯಲ್ಲಿ ಪ್ಲಾನ್ ಬಿಚ್ಚಿಟ್ಟ ಈಶ್ವರಪ್ಪ

Eshwarappa-Meeting-In-BJP-Office-before-resignation

SHIVAMOGGA LIVE NEWS | SHIMOGA | 15 ಏಪ್ರಿಲ್ 2022 ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಈಶ್ವರಪ್ಪ ಅವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು. ಇದಕ್ಕೂ ಮೊದಲು ಅಭಿಮಾನಿಗಳು ರಾಜೀನಾಮೆ ಸಲ್ಲಿಸದಂತೆ ಈಶ್ವರಪ್ಪ ಅವರಿಗೆ ಆಗ್ರಹಿಸಿದರು. ಈ ವೇಳೆ ಕಾರ್ಯಕರ್ತರು, ಅಭಿಮಾನಿಗಳನ್ನು ಸಮಧಾನ ಪಡಿಸಿ ಬೆಂಗಳೂರಿತ್ತ ಪ್ರಯಾಣ ಆರಂಭಿಸಿದರು. ಬಿಜೆಪಿ ಕಚೇರಿಯಿಂದ ಸಚಿವ ಈಶ್ವರಪ್ಪ ಅವರು ಬೆಂಗಳೂರಿಗೆ ಪ್ರಯಾಣ ಆರಂಭಿಸಿದರು. ಸಚಿವ ಈಶ್ವರಪ್ಪ ಅವರ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಅವರೊಂದಿಗೆ ಬೆಂಗಳೂರಿಗೆ ತೆರಳಿದ್ದಾರೆ. ನಿಗದಿಯಂತೆ ಇವತ್ತು ಸಂಜೆ … Read more

ಕಣ್ಣೀರು ಹಾಕುತ್ತ ಈಶ್ವರಪ್ಪ ಸುತ್ತುವರಿದ ಮಹಿಳೆಯರು

Eshwarappa-sorrounded-by-Women-during-resingnation

SHIVAMOGGA LIVE NEWS | SHIMOGA | 15 ಏಪ್ರಿಲ್ 2022 ನಿರ್ದೋಷಿಯಾಗಿ ಬರುತ್ತೇನೆ. ಮತ್ತ ಮಂತ್ರಿ ಆಗಿಯೇ ಆಗುತ್ತೇನೆ. ಇದು ಸಚಿವ ಕೆ.ಎಸ್.ಈಶ್ವರಪ್ಪ ಅವರ ಭರವಸೆಯ ಮಾತುಗಳು. ಶಿವಮೊಗ್ಗ ನಗರ ಬಿಜೆಪಿ ಕಾರ್ಯಾಲಯ ಉದ್ಘಾಟನಾ ಸಮಾರಂಭದ ವೇಳೆ ಕಾರ್ಯಕರ್ತೆಯರು ಮತ್ತು ಅಭಿಮಾನಿಗಳು ಈಶ್ವರಪ್ಪ ಅವರನ್ನು ಸುತ್ತುವರೆದರು. ರಾಜೀನಾಮೆ ನೀಡದಂತೆ ಒತ್ತಾಯಿಸಿದರು. ಕಣ್ಣೀರು ಹಾಕಿದ ಮಹಿಳೆಯರು ಈಶ್ವರಪ್ಪ ಅವರನ್ನು ಸುತ್ತುವರೆದ ಮಹಿಳಾ ಅಭಿಮಾನಿಗಳು ರಾಜೀನಾಮೆ ಕೊಡಬೇಡಿ ಎಂದು ಮನವಿ ಮಾಡಿದರು. ಕೆಲವು ಮಹಿಳೆಯರು ಈಶ್ವರಪ್ಪ ಅವರ ಮುಂದೆ … Read more

ತುರ್ತು ಸುದ್ದಿಗೋಷ್ಠಿಯಲ್ಲಿ ಸಚಿವ ಈಶ್ವರಪ್ಪ ಹೇಳಿದ ಟಾಪ್ 5 ವಿಚಾರಗಳು ಇಲ್ಲಿದೆ

Eshwarappa-Resignation-top-5-points

SHIVAMOGGA LIVE NEWS | SHIMOGA | 14 ಏಪ್ರಿಲ್ 2022

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹಿನ್ನೆಲೆ ಸಚಿವ ಸ್ಥಾನಕ್ಕೆ ಕೆ.ಎಸ್.ಈಶ್ವರಪ್ಪ ಅವರು ರಾಜೀನಾಮೆ ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ ಅವರು ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈಶ್ವರಪ್ಪ ಹೇಳಿದ್ದೇನು?

Point 1‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದಲ್ಲಿನ ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ. ನಾಳೆ ಸಂಜೆ ಬೆಂಗಳೂರಿಗೆ ಹೋಗಿ ರಾಜೀನಾಮೆ ಪತ್ರ ನೀಡುತ್ತೇನೆ.’

Read more

ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ

Congress-Protest-in-Shimoga-at-Eshwarappa-House

SHIVAMOGGA LIVE NEWS | SHIMOGA | 14 ಏಪ್ರಿಲ್ 2022 ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್.ಈಶ್ವರಪ್ಪ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ ನಡೆಯಿತು. ಮಲ್ಲೇಶ್ವರ ನಗರದಲ್ಲಿರುವ ಸಚಿವ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ರೈಲ್ವೆ ಗೇಟ್ ಬಳಿ ಬ್ಯಾರಿಕೇಡ್ ಮಲ್ಲೇಶ್ವರ ನಗರ ರಸ್ತೆಯ ರೈಲ್ವೆ ಗೇಟ್ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಮುತ್ತಿಗೆ … Read more

ಸಚಿವ ಈಶ್ವರಪ್ಪ ವಿರುದ್ಧ ಷಡ್ಯಂತ್ರ ಆರೋಪ, ಶಿವಮೊಗ್ಗದಲ್ಲಿ ಬೆಂಬಲಿಗರ ಆಕ್ರೋಶ

Protest-in-favour-of-KS-Eshwarappa

SHIVAMOGGA LIVE NEWS | SHIMOGA | 13 ಏಪ್ರಿಲ್ 2022 ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರು ಯಾವುದೆ ಕಾರಣಕ್ಕೂ ರಾಜೀನಾಮೆ ನೀಡಬಾರದು ಎಂದು ಆಗ್ರಹಿಸಿ ಶಿವಮೊಗ್ಗದಲ್ಲಿ ರಾಷ್ಟ್ರ ಭಕ್ತರ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ರಾಷ್ಟ್ರ ಭಕ್ತರ ಸಂಘಟನೆ ಕಾರ್ಯಕರ್ತರು, ಸಚಿವ ಈಶ್ವರಪ್ಪ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಸಂತೋಷ್ ಪಾಟೀಲ್ ಸಾವಿನ ಪ್ರಕರಣದಲ್ಲಿ ಬೇಕಂತಲೆ ಅವರ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು … Read more

‘ರಾಜೀನಾಮೆ ಕೊಡಲ್ಲ, ವಾಟ್ಸಪ್ ಡೆತ್ ನೋಟ್ ಮೇಲೆ ಅನುಮಾನ’ ಹೀಗಂತ ಸಚಿವ ಈಶ್ವರಪ್ಪ ಹೇಳಲು ಕಾರಣವೇನು?

KS-Eshwarappa-Press-meet

SHIVAMOGGA LIVE NEWS | SHIMOGA POLITICS | 13 ಏಪ್ರಿಲ್ 2022 ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಅಮೂಲಾಗ್ರ ತನಿಖೆ ನಡೆಸಬೇಕು. ಆದರೆ ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ತಾವು ನೂರಕ್ಕೆ ನೂರು ರಾಜೀನಾಮೆ ನೀಡುವುದಿಲ್ಲ ಎಂದು ತಿಳಿಸಿದರು. ‘ಅದನ್ನ ಡೆತ್ ನೋಟ್ ಅಂತಾರಾ?’ ಡಿವೈಎಸ್’ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಡೆತ್ ನೋಟ್ ಹಿಡಿದುಕೊಂಡು ಬಿಜೆಪಿಯವರು ಪ್ರತಿಭಟನೆ … Read more

ಸಚಿವ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಶ್ರೀಕಾಂತ್ ಆಕ್ರೋಶ

M-Srikanth-JDS-Leader-Shrikanth.webp

SHIVAMOGGA LIVE NEWS | SHIMOGA | 13 ಏಪ್ರಿಲ್ 2022 ಕೆ.ಎಸ್. ಈಶ್ವರಪ್ಪ ಕೂಡಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್‌ ಒತ್ತಾಯಿಸಿದ್ದಾರೆ. ಸಚಿವ ಈಶ್ವರಪ್ಪ ಅವರು ಗುತ್ತಿಗೆದಾರರಿಗೆ ಶೇ. 40 ಕಮೀಷನ್ ಕೇಳಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿಲ್ಲ. ಆದ್ದರಿಂದ ಇವತ್ತು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಇದರ ಹೊಣೆಯನ್ನು ಸರ್ಕಾರ ಹೊತ್ತು ಮೃತರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. ಸಚಿವ ಈಶ್ವರಪ್ಪ ವಿರುದ್ಧ … Read more

ಶಿವಮೊಗ್ಗದಲ್ಲಿ ಪಂಜು ಹಿಡಿದು ಸಚಿವರ ಕಚೇರಿಗೆ ಮುತ್ತಿಗೆ ಯತ್ನ

NSUI-Protest-against-Eshwarappa-in-Shimoga

SHIVAMOGGA LIVE NEWS | PROTEST | 12 ಏಪ್ರಿಲ್ 2022 ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣರಾದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶಿವಮೊಗ್ಗದಲ್ಲಿ NSUI ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಶಿವಪ್ಪನಾಯಕ ಪ್ರತಿಮೆ ಮುಂಭಾಗದಿಂದ ಪಂಜಿನ ಮೆರವಣಿಗೆ ಆರಂಭಿಸಿದ NSUI ಕಾರ್ಯಕರ್ತರು ಸಚಿವ ಈಶ್ವರಪ್ಪ ಅವರ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಸಚಿವರ ಕಚೇರಿಗೆ ಮುತ್ತಿಗೆ ಯತ್ನ ನೆಹರೂ ರಸ್ತೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕಚೇರಿ ಇದೆ. ಈ ಕಚೇರಿಗೆ NSUI … Read more

ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಮನೆಗೆ ಮುತ್ತಿಗೆ ಯತ್ನ

Shimoga-Youth-Congress-Protest-against-Eshwarappa

SHIVAMOGGA LIVE NEWS | Youth Congress | 12 ಏಪ್ರಿಲ್ 2022 ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಖಂಡಿಸಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಶಿವಮೊಗ್ಗದ ಮಲ್ಲೇಶ್ವರ ನಗರದಲ್ಲಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರ ನಿವಾಸಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಬಿ.ಹೆಚ್.ರಸ್ತೆಯಿಂದ ಮಲ್ಲೇಶ್ವರ … Read more

ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಆತ್ಮಹತ್ಯೆ

santosh-patil-suicide-in-the-name-of-Eshwarappa

SHIVAMOGGA LIVE NEWS | SUICIDE| 12 ಏಪ್ರಿಲ್ 2022 ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಶೇ.40ರಷ್ಟು ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೂ ಮೊದಲು ಅವರು ತಮ್ಮ ಆಪ್ತರಿಗೆ ವಾಟ್ಸಪ್ ಮೆಸೇಜ್ ಕಳುಹಿಸಿದ್ದಾರೆ. ಉಡುಪಿ KSRTC ಬಸ್ ನಿಲ್ದಾಣ ಸಮೀಪದ ಶಾಂಭವಿ ಲಾಡ್ಜ್’ನಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊಬೈಲ್ ಲೊಕೇಷನ್ ಆಧಾರದ ಮೇಲೆ ಲಾಡ್ಜ್’ಗಳಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಆಗ ಸಂತೋಷ್ ಪಾಟೀಲ್ … Read more