ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೆ ಪತ್ನಿಯೂ ನೇಣಿಗೆ ಶರಣು, ಘಟನೆಗೆ ಪೊಲೀಸ್‌ ಸಿಬ್ಬಂದಿ ಕಾರಣವಾ?

Bhadravathi-Hosa-Siddapura-Swathi-Succumbed-at-her-house.

ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ವಾರದಲ್ಲೇ ಪತ್ನಿಯೂ (Swathi) ನೇಣಿಗೆ ಶರಣಾಗಿರುವ ದಾರುಣ ಘಟನೆ ನಗರದ ಹೊಸ ಸಿದ್ದಾಪುರದಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ಗೃಹಿಣಿಯು ಪೊಲೀಸ್ ಸಿಬ್ಬಂದಿಯೊಬ್ಬರು ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪತಿ ಆತ್ಮಹತ್ಯೆ ಬೆನ್ನಿಗೆ ಪತ್ನಿ ನೇಣಿಗೆ ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಇವರ ಪತಿ ಜಗದೀಶ್ ಅವರು ಕೆಎಸ್ಐಎಸ್ಎಫ್ (KSISF) ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು. ಜೀವನದಲ್ಲಿ ಜುಗುಪ್ಸೆಗೊಂಡು ಫೆಬ್ರವರಿ 14ರಂದು ಜಗದೀಶ್ … Read more