ಹೊಸನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನ ಮೇಲೆ ಉರುಳಿದ ವಿದ್ಯುತ್ ಕಂಬ
HOSANAGARA, 26 JULY 2024 : ಚಲಿಸುತ್ತಿದ್ದ KSRTC ಬಸ್ಸಿನ ಮೇಲೆ ವಿದ್ಯುತ್ ಕಂಬ ಉರುಳಿದೆ. ಅದೃಷ್ಟವಶಾತ್ ಯಾವುದೇ ಸಮಸ್ಯೆ ಆಗಿಲ್ಲ. ಕರೆಂಟ್ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ. ಹೊಸನಗರ ತಾಲೂಕು ಸಂಪೆಕಟ್ಟೆ ನಿಟ್ಟೂರು ಮಧ್ಯೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಹೊಸನಗರ ನಗರ ಮಾರ್ಗವಾಗಿ ನಿಟ್ಟೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ತೆರಳುತ್ತಿತ್ತು. ಆಗ ವಿದ್ಯುತ್ ಕಂಬ ಬಸ್ಸಿನ ಮೇಲೆ ಉರುಳಿದೆ. ಮೆಸ್ಕಾಂ ಸಿಬ್ಬಂದಿ ಕಂಬ ತೆರವು ಮಾಡಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು. … Read more