ಖಾಲಿ ಜಾಗದಲ್ಲಿ ಮದ್ಯ ಸೇವನೆಗೆ ಅಕ್ಷೇಪ, ಮನೆಗೆ ನುಗ್ಗಿ ಚಾಕು ಇರಿತ

Sagara-Rural-Police-Station-General-Image

SHIVAMOGGA LIVE NEWS | SAGARA | 29 ಜೂನ್ 2022 ಖಾಲಿ ಜಾಗದಲ್ಲಿ ಮದ್ಯ ಸೇವನೆಗೆ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಮನೆಗೆ ನುಗ್ಗಿ ವ್ಯಕ್ತಿಯೊಬ್ಬರಿಗೆ ಚಾಕು ಇರಿಯಲಾಗಿದೆ. ಕುಟುಂಬದವರ ಮುಂದೆ ಚಾಕು ಇರಿದು, ಕೊಲೆ ಬೆದರಿಕೆ ಒಡ್ಡಲಾಗಿದೆ ಎಂದು ಆರೋಪಿಸಲಾಗಿದೆ. ಸಾಗರದ ಕುಗ್ವೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಸುರೇಶ್ ಎಂಬುವವರಿಗೆ ಚಾಕು ಇರಿದಿದ್ದು, ಎಡಗೈಗೆ ಗಾಯವಾಗಿದೆ. ಏನಿದು ಪ್ರಕರಣ? ಸುರೇಶ್ ಅವರ ಮನೆ ಪಕ್ಕದ ಖಾಲಿ ಜಾಗದಲ್ಲಿ ಮೂವರು ಯುವಕರು ಮದ್ಯಾಹ್ನ ಮದ್ಯ ಸೇವನೆ ಮಾಡುತ್ತಿದ್ದರು. ಇದನ್ನು … Read more

ಬಸ್, ಬೈಕ್ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸಾವು

Sagara-Kugve-Bus-and-Bike-collision

SHIVAMOGGA LIVE NEWS | 17 ಮಾರ್ಚ್ 2022 ಬೈಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಯುವಕ ಮೃತಪಟ್ಟಿದ್ದಾರೆ. ಸಾಗರ ಸಮೀಪದ ಅಂಬಾಪುರ ಕುಗ್ವೆ ತಿರುವಿನಲ್ಲಿ ಘಟನೆ ಸಂಭವಿಸಿದೆ. ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಡುವಾಣಿಯ ಅನಿಲ್ (30) ಮೃತಪಟ್ಟಿದ್ದಾರೆ. ಅನಿಲ್ ಅವರು ತೆರಳುತ್ತಿದ್ದ ಬೈಕ್ ಮತ್ತು ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಗಂಭೀರ ಗಾಯಗೊಂಡಿದ್ದ ಅನಿಲ್ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು. ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ … Read more

ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಸಾವು, ಆತ್ಮಹತ್ಯೆ ಶಂಕೆ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 28 ನವೆಂಬರ್ 2021 ರೈಲುಗೆ ಸಿಲುಕಿ ವ್ಯಕ್ತಿಯೊಬ್ಬರು ರಾತ್ರಿ ಮೃತಪಟ್ಟಿದ್ದಾರೆ. ರೈಲ್ವೆ ಹಳಿ ಮೇಲೆ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕು ಕುಗ್ವೆ – ಶಿರವಾಳ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಎಂದು ಹೇಳಲಾಗುತ್ತಿದೆ. ಇದು ಆತ್ಮಹತ್ಯೆಯೋ, ಅಪಘಾತವೋ ಅನ್ನುವುದು ತನಿಖೆಯಿಂದ ತಿಳಿಯಬೇಕಿದೆ. ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ … Read more

ಹೈವೇ ರಸ್ತೆಯಲ್ಲಿ ಹಿಟ್ ಅಂಡ್ ರನ್, ಬೈಕ್ ಸವಾರ ಸ್ಥಳದಲ್ಲೇ ಸಾವು

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜುಲೈ 2021 ಬೈಕ್‍ ಸವಾರನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿ ಹೊಡೆದ ವಾಹನದ ಶೋಧ ಕಾರ್ಯ ನಡೆಯುತ್ತಿದೆ. ಶಿವರಾಜ್ (26) ಮೃತ ದುರ್ದೈವಿ. ಸಾಗರ ತಾಲೂಕು ಕುಗ್ವೆ ಗ್ರಾಮದ ಶಿವರಾಜ್, ಭಾನುವಾರ ರಾತ್ರಿ ಮನೆಗೆ ಮರಳುತ್ತಿದ್ದಾಗ ಘಟನೆ ಸಂಭವಿಸಿದೆ. ಖಂಡಿಕಾ ಕ್ರಾಸ್‍ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿವರಾಜ್ ಚಲಿಸುತ್ತಿದ್ದ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವರಾಜ್ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಸಾಗರ … Read more