‘ಕುವೆಂಪು ವಿಶ್ವವಿದ್ಯಾಲಯದಲ್ಲಿ ಪಾಸಾದ ವಿದ್ಯಾರ್ಥಿಗಳು ಫೇಲ್‌ʼ, NSUI ಗರಂ

NSUI-memorandum-about-Re-valuation

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯವು ಡಿಜಿಟಲ್ ರೂಪದಲ್ಲಿ ನಡೆಸಿದ ಮೌಲ್ಯಮಾಪನದಲ್ಲಿ ಸಾಕಷ್ಟು ಲೋಪಗಳಿವೆ. ಆದ್ದರಿಂದ ಮರುಮೌಲ್ಯಮಾಪನ (Valuation) ಮಾಡಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ವತಿಯಿಂದ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿ ಕಾಲೇಜಿನಲ್ಲಿ 50 ರಿಂದ 60 ವಿದ್ಯಾರ್ಥಿಗಳು 0,5,6,7 ಅಂಕಗಳನ್ನು ಪಡೆದು ಅನುತ್ತೀರ್ಣ ಗೊಂಡಿದ್ದಾರೆ ಹಾಗೂ ಉತ್ತೀರ್ಣ ಗೊಂಡ ಸಾಕಷ್ಟು ವಿದ್ಯಾರ್ಥಿಗಳು ಅನುತ್ತೀರ್ಣಗೊಂಡಿದ್ದಾರೆ. ವಿಶ್ವ ವಿದ್ಯಾಲಯದ ಪರೀಕ್ಷಾಂಗ ವಿಭಾಗವು ವಿದ್ಯಾರ್ಥಿಗಳ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ ಎನ್ನುವುದಕ್ಕೆ ಇದು ಸಾಕ್ಷಿ. ಪರೀಕ್ಷಾ ಶುಲ್ಕ, ಮರುಮೌಲ್ಯ ಮಾಪನ ಎಂದು … Read more

ಶಂಕರಘಟ್ಟದ ಕುವೆಂಪು ವಿವಿ ಸಮೀಪ ಧಗಧಗ ಹೊತ್ತಿ ಉರಿದ ಬೇಕರಿ

Cake-Mane-bakery-in-Shankaraghatta.

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಮುಂಭಾಗ ಬೇಕರಿಯಲ್ಲಿ (Bakery) ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬೇಕರಿಯಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ. ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಬೇಕರಿಯಲ್ಲಿ ರಾತ್ರಿ 3 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಅಕ್ಕಪಕ್ಕದ ಮನೆಯವರು, ಸ್ಥಳೀಯರು ಎಚ್ಚರವಾಗಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಬೇಕರಿ ಒಳಗಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ. ಶಾರ್ಟ್‌ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿರುವ … Read more

ಭಾರತದ ಟಾಪ್‌ ವಿವಿಗಳಲ್ಲಿ ಕುವೆಂಪು ವಿಶ್ವವಿದ್ಯಾಲಯಕ್ಕೆ ಸ್ಥಾನ, ಇಲ್ಲಿದೆ ಡಿಟೇಲ್ಸ್‌

kuvempu-University-

ಶಿವಮೊಗ್ಗ: ದೆಹಲಿಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಗುರುವಾರ ಬಿಡುಗಡೆಗೊಳಿಸಿರುವ 2025ನ ಸಾಲಿನ ರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಗಳ ರ‍್ಯಾಂಕಿಂಗ್‌ನಲ್ಲಿ (ಎನ್‌ಐಆರ್‌ಎಫ್) ದೇಶದ ಸರ್ಕಾರಿ ವಿಶ್ವವಿದ್ಯಾಲಯಗಳ (University) ವಿಭಾಗದಲ್ಲಿ ಕುವೆಂಪು ವಿಶ್ವವಿದ್ಯಾಲಯ 51 ರಿಂದ 100ರ ರ‍್ಯಾಂಕ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದೇಶದ 4,100ಕ್ಕೂ ಹೆಚ್ಚು ಶೈಕ್ಷಣಿಕ ಸಂಸ್ಥೆಗಳ ಈ ರ‍್ಯಾಂಕಿಂಗ್ ಪಟ್ಟಿಯಲ್ಲಿ ಕುವೆಂಪು ವಿ.ವಿ. ಸರ್ಕಾರಿ ವಿಶ್ವವಿದ್ಯಾಲಯಗಳ ವಿಭಾಗದಲ್ಲಿ 51ರಿಂದ 100ರೊಳಗೆ ಸ್ಥಾನ ಪಡೆದಿದೆ. ಉಳಿದಂತೆ ಮೈಸೂರು ವಿವಿ 20ನೇ ಸ್ಥಾನ, ಬೆಂಗಳೂರು ವಿವಿ 26ನೇ … Read more

ಕುವೆಂಪು ವಿವಿ ಸ್ನಾತಕೋತ್ತರ ವಿಭಾಗಕ್ಕೆ ಸೇರುವವರಿಗೆ ಗುಡ್‌ ನ್ಯೂಸ್‌

Kuvempu University File Image 2

ಶಿವಮೊಗ್ಗ: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ (University) 2025–26ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ ಭರ್ತಿಯಾಗದೇ ಉಳಿದಿರುವ ಖಾಲಿ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ (Applications) ಆಹ್ವಾನಿಸಲಾಗಿದೆ. ಸೆ.15 ರೊಳಗಾಗಿ ಅರ್ಜಿ ಸಲ್ಲಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ » ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್‌, ಏನಿದು ರ‍್ಯಾಂಕಿಂಗ್‌? ವಿವಿ ಪಡೆದ ಅಂಕಗಳೆಷ್ಟು? applications for kuvempu university

ಕುವೆಂಪು ವಿಶ್ವವಿದ್ಯಾಲಯಕ್ಕೆ ದೇಶದಲ್ಲೇ 30ನೇ ರ‍್ಯಾಂಕ್‌, ಏನಿದು ರ‍್ಯಾಂಕಿಂಗ್‌? ವಿವಿ ಪಡೆದ ಅಂಕಗಳೆಷ್ಟು?

200125 Kuvempu University and Vice chancellor Prof Sharat ananthamurthy

ಶಂಕರಘಟ್ಟ: ಪ್ರತಿಷ್ಠಿತ ಮ್ಯಾಗಜಿನ್ ಔಟ್ ಲುಕ್- ಐಕೇರ್ ಸಂಸ್ಥೆ ಬಿಡುಗಡೆ ಮಾಡಿರುವ ದೇಶದ ಸಾರ್ವಜನಿಕ ವಿಶ್ವವಿದ್ಯಾಲಯದ ರ‍್ಯಾಂಕಿಂಗ್‌ನಲ್ಲಿ (Ranking) ಕುವೆಂಪು ವಿವಿ 30ನೇ ಶ್ರೇಣಿ ಪಡೆದು ಮಹತ್ವದ ಸಾಧನೆ ಮಾಡಿದೆ ಎಂದು ಕುವೆಂಪು ವಿವಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಐದು ಮಾನದಂಡಗಳಲ್ಲಿ ಸಾರ್ವಜನಿಕ ವಿಶ್ವವಿದ್ಯಾಲಯಗಳನ್ನು 1000 ಅಂಕಗಳಿಗೆ ಮೌಲ್ಯಮಾಪನ ಮಾಡಿ ರ‍್ಯಾಂಕಿಂಗ್‌ ನೀಡಲಾಗಿದೆ. ಶೈಕ್ಷಣಿಕ ಮತ್ತು ಸಂಶೋಧನಾ ಚಟುವಟಿಕೆಗಳಿಗೆ 400 ಅಂಕಗಳು, ಕೈಗಾರಿಕಾ ವಿನಿಮಯಕ್ಕೆ 200 ಅಂಕಗಳು, ಮೂಲ ಸೌಕರ್ಯಗಳಿಗೆ 150 ಅಂಕಗಳು, ಆಡಳಿತ ಮತ್ತು ವಿಸ್ತರಣೆಗೆ 150 … Read more

ಕುವೆಂಪು ವಿವಿಗೆ 15 ದಿನದ ಗಡುವು, ಬೇಡಿಕೆ ಈಡೇರದಿದ್ದರೆ ಬಂದ್‌ ಎಚ್ಚರಿಕೆ, ವಿದ್ಯಾರ್ಥಿಗಳ ಡಿಮಾಂಡ್‌ಗಳೇನು?

NSUI-protest-at-Kuvempu-University

ಶಂಕರಘಟ್ಟ: ನಿಗದಿತ ಸಮಯಕ್ಕೆ ಪರೀಕ್ಷೆ ಫಲಿತಾಂಶ ಪ್ರಕಟಿಸಬೇಕು. ಫಲಿತಾಂಶದಲ್ಲಿ ನಿರಂತರವಾಗಿ ಕಂಡು ಬರುತ್ತಿರುವ ಸಮಸ್ಯೆಗಳನ್ನು ಪರಿಹರಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್‌ಎಸ್‌ಯುಐ ಜಿಲ್ಲಾ ಘಟಕದಿಂದ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತಿಭಟನೆ (Protest) ನಡೆಸಲಾಯಿತು. ಎನ್‌ಎಸ್‌ಯುಐ ಬೇಡಿಕೆಗಳೇನು? ಕುವೆಂಪು ವಿವಿಯ ರಂಭಾಪುರಿ ಕಾಲೇಜಿನಲ್ಲಿ ಮೂಲ ಸೌಕರ್ಯಗಳ ಕೊರತೆ ಇದೆ. ಕೊಠಡಿಗಳಲ್ಲಿ ಮಳೆ ನೀರು ಸೋರುತ್ತಿದೆ. ಕಳೆದ 2 ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಸ್ಪಂದಿಸುತ್ತಿಲ್ಲ. ಕಾಲೇಜಿನಲ್ಲಿ ಬಿಸಿಎ ಪದವಿಗೆ ಸರ್ಕಾರಿ ಸೀಟುಗಳಿದ್ದರೂ ಮನಬಂದಂತೆ ಪ್ರವೇಶ ಶುಲ್ಕ ವಿಧಿಸಲಾಗುತ್ತಿದೆ. … Read more

ಕುವೆಂಪು ವಿಶ್ವವಿದ್ಯಾಲಯ, ಅರ್ಜಿ ಸಲ್ಲಿಸುವ ದಿನಾಂಕ ಮುಂದಕ್ಕೆ

kuvempu-University-

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯವು 2025-26ನೇ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ ಮತ್ತು ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಾತಿಗೆ (Admission) ಸಂಬಂಧಿಸಿದಂತೆ ಯುಯುಸಿಎಂಎಸ್ ಪೋರ್ಟಲ್ ಮೂಲಕ ಆಹ್ವಾನಿಸಲಾದ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿದೆ. ಇಲ್ಲಿದೆ ಪ್ರಮುಖ ದಿನಾಂಕಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 8 ಮೆರಿಟ್ ಆಧಾರಿತ ಪಟ್ಟಿ ಬಿಡುಗಡೆ: ಆಗಸ್ಟ್ 18 ಪ್ರವೇಶಾತಿ ಕೌನ್ಸಿಲಿಂಗ್: ಮೆರಿಟ್ ಮತ್ತು ಸ್ಪೆಷಲ್‌ ಕೆಟಗರಿ: ಆಗಸ್ಟ್ 20 ಮೆರಿಟ್ ಕಮ್ ಪೇಮೆಂಟ್: ಆಗಸ್ಟ್ 21 ವರ್ಗಾವಣೆಗೆ ಕೊನೆಯ ದಿನಾಂಕ: ಆಗಸ್ಟ್ … Read more

ಕುವೆಂಪು ವಿಶ್ವವಿದ್ಯಾಲಯಕ್ಕೆ ಮತ್ತೊಮ್ಮೆ A ಗ್ರೇಡ್‌, ಹೇಗಿತ್ತು ಮೌಲ್ಯಮಾಪನ? ಕುಲಪತಿ ಹೇಳಿದ್ದೇನು?

kuvempu-University-

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ(NAAC) ‘ಎ’ ಗ್ರೇಡ್ ಮಾನ್ಯತೆ ನೀಡಿದೆ. ಇದನ್ನೂ ಓದಿ » ಫೋನ್‌ ಪೇಯಲ್ಲಿ ಕರೆಂಟ್‌ ಬಿಲ್‌ ಕಟ್ಟಿದ ಶಿವಮೊಗ್ಗದ ವಕ್ತಿಗೆ ಸ್ವಲ್ಪ ಹೊತ್ತಿಗೆ ಕಾದಿತ್ತು ಶಾಕ್ 2018ರ ಅಕ್ಟೋಬರ್ ತಿಂಗಳಿನಿಂದ 2024ರ ಸೆಪ್ಟೆಂಬರ್ ವರೆಗಿನ ಮೌಲ್ಯಮಾಪನ ಅವಧಿಯಲ್ಲಿ ವಿಶ್ವವಿದ್ಯಾಲಯದಲ್ಲಿ ನಡೆದ ಶೈಕ್ಷಣಿಕ ಕಾರ್ಯಕ್ರಮಗಳು, ವಿದ್ಯಾರ್ಥಿ ಕೇಂದ್ರಿತ ಸುಧಾರಣೆಗಳು, ಮತ್ತು ಮೂಲಭೂತ ಸೌಕರ್ಯಗಳಲ್ಲಿನ ಸುಧಾರಣೆಗಳನ್ನು ನ್ಯಾಕ್ ತಂಡ ಕಳೆದ ತಿಂಗಳು ಪರಿಶೀಲನೆ ನಡೆಸಿತ್ತು. ಇದೀಗ ನ್ಯಾಕ್ ಸಂಸ್ಥೆ ಫಲಿತಾಂಶವನ್ನು ವಿಶ್ವವಿದ್ಯಾಲಯದೊಂದಿಗೆ … Read more

ಕುವೆಂಪು ವಿವಿ ನಿವೃತ್ತ ಪ್ರೊಫೆಸರ್‌ ಚಂದ್ರೇಶೇಖರ್‌ ಅಭಿನಂದನಾ ಸಮಾರಂಭ, ಹೇಗಿತ್ತು? ಯಾರೆಲ್ಲ ಏನೆಲ್ಲ ಮಾತನಾಡಿದರು?

Professor-Chandrshekar-felicitated-at-Shimoga

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಹಳೇ ವಿದ್ಯಾರ್ಥಿಗಳ ಸಮೂಹದ ವತಿಯಿಂದ ರಾಜ್ಯಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿವೃತ್ತ ಮುಖ್ಯಸ್ಥ ಪ್ರೊ.ಕೆ.ಚಂದ್ರಶೇಖರ್‌ ಅಭಿನಂದನಾ ಸಮಾರಂಭ (FELICITATION) ನಡೆಸಲಾಯಿತು. ಶಿವಮೊಗ್ಗದ ಪತ್ರಿಕಾ ಭವನದ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುವೆಂಪು ವಿಶ್ವವಿದ್ಯಾಲಯದ ನಿವೃತ್ತ ಕುಲಸಚಿವ ಪ್ರೊ. ಹೂವಯ್ಯಗೌಡ, ಪತ್ರಿಕೋದ್ಯಮ ವಿಭಾಗದ ನಿವೃತ್ತ ಮುಖ್ಯಸ್ಥ ಪೂರ್ಣಾನಂದ, ದಸಂಸ ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಇಂಗ್ಲಿಷ್‌ ವಿಭಾಗದ ಪ್ರಾಧ್ಯಾಪಕ ದತ್ತಾತ್ರೇಯ, ರಾಜ್ಯಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಎಂ.ಎಚ್‌. ಪ್ರಹ್ಲಾದಪ್ಪ ಉಪಸ್ಥಿತರಿದ್ದರು.  ಹಳೇ ವಿದ್ಯಾರ್ಥಿಗಳಾದ ರಾಘವೇಂದ್ರ … Read more

ಪ್ರಶ್ನೆ ಪತ್ರಿಕೆ ಗೊಂದಲ ವಿಚಾರ, ಕುವೆಂಪು ವಿವಿ ಪರೀಕ್ಷಾಂಗ ಕುಲಸಚಿವರಿಂದ ಮಹತ್ವದ ಪ್ರಕಟಣೆ

Kuvempu-University-Examination-Registrar-sm-gopinath

ಶಂಕರಘಟ್ಟ: ಪ್ರಶ್ನೆ ಪತ್ರಿಕೆ ಗೊಂದಲದಿಂದ ಬಿ.ಎ. 6ನೇ ಸೆಮಿಸ್ಟರ್‌ ಕನ್ನಡ ಐಚ್ಛಿಕ ಪರೀಕ್ಷೆಯನ್ನು (Examination) ಮುಂದೂಡಲಾಗಿದೆ. ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುತ್ತದೆ. ಇನ್ನು, ಗೊಂದಲಕ್ಕೆ ಕಾರಣರಾದ ಅಧ್ಯಾಪಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ತಿಳಿಸಿದ್ದಾರೆ. ಪ್ರಶ್ನೆ ಪತ್ರಿಕೆಯಲ್ಲಿ ಉಂಟಾಗಿದ್ದ ಗೊಂದಲದಿಂದ ಇಂದು ನಡೆಯಬೇಕಿದ್ದ ಪರೀಕ್ಷೆ ದಿಢೀರ್‌ ಮುಂದೂಡಿಕೆಯಾಗಿತ್ತು. ಈ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಈಗ ಗೊಂದಲಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ವಿವಿ ಪ್ರಕಟಣೆಯಲ್ಲಿ ತಿಳಿಸಿದೆ. ವಿವಿ … Read more