ಶಿವಮೊಗ್ಗಕ್ಕೆ ಪೂರ್ವ ವಲಯ ಐಜಿಪಿ ದೌಡು, ಸಿಟಿಯಲ್ಲಿ ಬಂದೋಬಸ್ತ್ ಕಟ್ಟುನಿಟ್ಟು

IGP Visit Shivamogga City

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಭಜರಂಗದಳ ಕಾರ್ಯಕರ್ತನ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೂರ್ವ ವಲಯ ಐಜಿಪಿ ಆಗಮಿಸಿದ್ದಾರೆ. ಹೊರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರು ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅವರು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ಅವರಿಂದ ಪರಿಸ್ಥಿತಿ ಮತ್ತು ಬಂದೋಬಸ್ತ್ ಕುರಿತು ಮಾಹಿತಿ ಪಡೆದಿದ್ದಾರೆ. ಅಲ್ಲದೆ ಶಿವಮೊಗ್ಗ ನಗರದಲ್ಲಿ ಗಸ್ತು ಆರಂಭಿಸಿದ್ದಾರೆ. ಇನ್ನೊಂದು ಕಡೆ … Read more

ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ, ಶಾಲೆ, ಕಾಲೇಜಿಗೆ ರಜೆ, ಬಿಗಿ ಬಂದೋಬಸ್ತ್

Police Bandobasth at Shimoga city

ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022 ಭಜರಂಗದಳ ಕಾರ್ಯಕರ್ತನ ಬರ್ಬರ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದುಷ್ಕರ್ಮಿಗಳ ಗುಂಪು ಹರ್ಷ (22) ಎಂಬಾತನನ್ನು ಹತ್ಯೆ ಮಾಡಿದ್ದಾರೆ. ಇದರಿಂದ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಹತ್ಯೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಆದ್ದರಿಂದ ನಗರದಾದ್ಯಂತ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ … Read more

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022 ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಗಾಯಗೊಂಡಿದ್ದು, ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಾಗರ ರಸ್ತೆಯ ಪಿಇಎಸ್ ಕಾಲೇಜು ಬಳಿ ಘಟನೆ ಸಂಭವಿಸಿದೆ. ಅರುಣ್ ಕುಮಾರ್ ಎಂಬುವವರು ಸಮೀಪದ ಫಾರಂಗೆ ಹೋಗಿ ಕೆಲಸ ಮುಗಿಸಿ ಶಿವಮೊಗ್ಗಕ್ಕೆ ಮರಳುತ್ತಿದ್ದರು. ಅರುಣ್ ಕುಮಾರ್ ಅವರು ಚಲಿಸುತ್ತಿದ್ದ ಬೈಕಿಗೆ ಅದೆ ಮಾರ್ಗದಲ್ಲಿ ವೇಗವಾಗಿ ಬಂದ ಮತ್ತೊಂದು ಬೈಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ … Read more

ಮಹಿಳೆ ಸ್ನಾನ ಮಾಡುವುದನ್ನು ಕದ್ದು ನೋಡಿದ ಯುವಕ, ಪ್ರಶ್ನಿಸಿದ್ದಕ್ಕೆ ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ

crime name image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022 ಮಹಿಳೆಯೊಬ್ಬರು ಸ್ನಾನ ಮಾಡುವಾಗ ಬಾತ್ ರೂಂ ವೆಂಟಿಲೇಟರ್’ನಿಂದ ಕದ್ದು ನೋಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕರಿಬ್ಬರು ವ್ಯಕ್ತಿಗೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ಕೊಲೆ ಮಾಡುವುದಾಗಿಯು ಬೆದರಿಕೆ ಒಡ್ಡಿದ್ದಾರೆ. ಶಿವಮೊಗ್ಗದ ಟಿಪ್ಪು ನಗರದಲ್ಲಿ ಗುರುವಾರ ಬೆಳಗ್ಗೆ ಘಟನೆ ಸಂಭವಿಸಿದೆ. ಮಹಿಳೆ ಸ್ನಾನ ಮಾಡುವಾಗ ಸಯ್ಯದ್ ಹುಸೇನ್ ಎಂಬಾತ ಕದ್ದು ನೋಡಿದ್ದಾನೆ. ಇದನ್ನು ಅರಿತ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಅಕ್ಕಪಕ್ಕದವರು ಸಯ್ಯದ್ ಹುಸೇನ್’ನನ್ನು ಹಿಡಿದು, ಬುದ್ದಿವಾದ ಹೇಳಿ ಕಳುಹಿಸಿದ್ದಾರೆ. ಮಚ್ಚು … Read more

ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಡಬಲ್ ಮರ್ಡರ್

murder graphical image

ಶಿವಮೊಗ್ಗದ ಲೈವ್.ಕಾಂ | SHIMOGA NEWS | 20 ಫೆಬ್ರವರಿ 2022 ಶಿವಮೊಗ್ಗ ನಗರದಲ್ಲಿ ಕಳೆದ ರಾತ್ರಿ ಡಬಲ್ ಮರ್ಡರ್ ಸಂಭವಿಸಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಹತ್ಯೆ ಮಾಡಲಾಗಿದೆ. ಸಲೀಮ್ ಅಹಮದ್ (22) ಮತ್ತು ಅಬ್ದುಲ್ ದಸ್ತಗೀರ್ (23) ಹತ್ಯೆಯಾದವರು. ಸೂಳೆಬೈಲು 7ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ. ಕಳೆದ ರಾತ್ರಿ ಕ್ಷುಲಕ ವಿಚಾರಕ್ಕೆ ಜಗಳವಾಗಿದೆ. ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದ್ದು, ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ALSO READ | About … Read more

ಶಿವಮೊಗ್ಗ ಪ್ರೆಸ್ ಟ್ರಸ್ಟ್ ಆದರ್ಶ ಇನ್ನಿಲ್ಲ

Press Trust Adarsh

ಶಿವಮೊಗ್ಗದ ಲೈವ್.ಕಾಂ | SHIMOGA NEWS | 19 ಫೆಬ್ರವರಿ 2022 ಶಿವಮೊಗ್ಗ ಪ್ರೆಸ್ ಟ್ರಸ್ಟ್ ಸಿಬ್ಬಂದಿ ಆದರ್ಶ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಆದರ್ಶ (30) ಅವರು ಕಾಶಿಪುರದಲ್ಲಿ ಇರುವ ತಮ್ಮ ಮನೆಯಲ್ಲಿ ಕಳೆದ ರಾತ್ರಿ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಟುಂಬದವರು ಕೂಡಲೆ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಆದರ್ಶ ಅವರು ಕೊನೆಯುಸಿರೆಳೆದಿದ್ದಾರೆ. ಸಂತಾಪ | ಆದರ್ಶ ಅವರ … Read more

ಧ್ವಾಜಾರೋಹಣ ಮಾಡಿದ ಪಿಎಫ್ಐ ಮುಖಂಡರ ವಿರುದ್ಧ ಪ್ರಕರಣ

Shimoga Map Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 19 ಫೆಬ್ರವರಿ 2022 ನಿಷೇಧಾಜ್ಞೆ ಆದೇಶವನ್ನು ಉಲ್ಲಂಘಿಸಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಗುಂಪುಗೂಡಿ ಸಂಸ್ಥಾಪನಾ ದಿನಾಚರಣೆ ಮಾಡಿದ್ದಾರೆ. ಇದರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ಕೆ.ಆರ್.ಪುರಂ, ಬೈಪಾಸ್ ರಸ್ತೆ, ಇಲಿಯಾಸ್ ನಗರ, ಆರ್.ಎಂ.ಎಲ್ ನಗರ, ಮಾರ್ನಮಿಬೈಲಿನಲ್ಲಿ ಪಿಎಫ್ಐ ಸಂಸ್ಥಾಪನಾ ದಿನಾಚರಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪಿಎಫ್ಐ ಸಂಘಟನೆ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. .ಇದನ್ನೂ … Read more

ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ ಭೂ ಸ್ವಾಧೀನದಿಂದ ಬೇಸತ್ತು ರೈತ ಆತ್ಮಹತ್ಯೆ

farmer suicide poison

ಶಿವಮೊಗ್ಗದ ಲೈವ್.ಕಾಂ | SHIKARIPURA NEWS | 19 ಫೆಬ್ರವರಿ 2022 ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲ್ವೆ ಮಾರ್ಗ ನಿರ್ಮಾಣ ಯೋಜನೆಗೆ ಮೂರು ಎಕರೆ ಅಡಕೆ ತೋಟ ಭೂಸ್ವಾಧೀನಗೊಂಡಿದ್ದರಿಂದ ಮನನೊಂದ ರೈತ ತೋಟದಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದ ಅರುಣ್ ನಾಯ್ಕ (35) ಆತ್ಮಹತ್ಯೆ ಮಾಡಿಕೊಂಡ ರೈತ. ಶಿವಮೊಗ್ಗ-ಶಿಕಾರಿಪುರ ರೈಲ್ವೆ ಮಾರ್ಗಕ್ಕೆ ಪ್ರಾಥಮಿಕ ಹಂತದ ಸರ್ವೇ ಕಾರ್ಯ ಮುಗಿದಿದ್ದು, ಜಮೀನು ಸ್ವಾಧೀನಪಡಿಸಿಕೊಂಡಿರುವ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಪರಿಹಾರ ವಿತರಣಾ ಕಾರ್ಯ ಕೈಗೊಂಡಿದೆ. ತಾಲೂಕಿನ … Read more

ದುಡ್ಡು, ಪರ್ಸ್ ಕಳೆದುಕೊಂಡಿದ್ದ ಮಹಿಳೆಯ ಮನೆ ಹುಡುಕಿ ತಲುಪಿಸಿದ ಪಂಕ್ಚರ್ ಶಾಪ್ ರಫೀಕ್

cycle Shop owner returns purse

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022 ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಚಿಕಿತ್ಸೆ ಪಡೆಯಲು ಬ್ಯಾಂಕಿನಿಂದ 10 ಸಾವಿರ ರೂ. ಹಣ ಬಿಡಿಸಿಕೊಂಡು ಮನೆಗೆ ಮರಳುವ ವೇಳೆ ಪರ್ಸ್ ಕಳೆದುಕೊಂಡು ಚಿಂತೆಗೀಡಾಗದ್ದರು. ಆದರೆ ಆ ಚಿಂತೆ ಒಂದೇ ದಿನದಲ್ಲಿ ಮಾಯವಾಗಿ ಕಳೆದು ಹೋಗಿದ್ದ ಹಣದ ಪರ್ಸ್ ಕೈ ಸೇರಿತ್ತು. ನಡೆದ ಘಟನೆ ಏನು? ದುರ್ಗಿಗುಡಿ ಶ್ರೀ ಶನೇಶ್ವರ ದೇವಸ್ಥಾನ ಬಳಿ ಚಿಕ್ಕ ಸೈಕಲ್ ಪಂಕ್ಚರ್ ಅಂಗಡಿ ನಡೆಸುತ್ತಿರುವ ರಫೀಕ್ ಖಾನ್ ಎಂಬುವರಿಗೆ ನಗರದ ಸವಳಂಗ … Read more

ತಿಥಿ ಕಾರ್ಯಕ್ಕೆ ಹೋಗಿದ್ದ ಗುತ್ತಿಗೆದಾರರ ಮನೆಯಲ್ಲಿ ಲಕ್ಷ ಲಕ್ಷ ಮೌಲ್ಯದ ಆಭರಣ, ನಗದು ಕಳವು

jayanagara police station in shimoga

ಶಿವಮೊಗ್ಗದ ಲೈವ್.ಕಾಂ | SHIMOGA NEWS | 18 ಫೆಬ್ರವರಿ 2022 ಶಿವಮೊಗ್ಗದಲ್ಲಿ ಗುತ್ತಿಗೆದಾರರೊಬ್ಬರ ಮನೆಯ ಬಾಲ್ಕನಿಯ ಕಿಟಕಿ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಮಾಡಲಾಗಿದೆ. ಗುತ್ತಿಗೆದಾರರ ಕುಟುಂಬದವರು ಊರಿನಲ್ಲಿ ಇಲ್ಲದ ವೇಳೆ ಘಟನೆ ಸಂಭವಿಸಿದೆ. ಬಸವನಗುಡಿಯಲ್ಲಿ ಇರುವ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಘಟನೆ ಸಂಭವಿಸಿದೆ. ಮಹಡಿ ಮನೆಯವರು ಮತ್ತು ಮನೆ ಕೆಲಸದಾಕೆ ಮೇಲೆ ಅನುಮಾನವಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಏನಿದು ಪ್ರಕರಣ? ಗುತ್ತಿಗೆದಾರರು ತಮ್ಮ ತಾಯಿಯ ತಿಥಿ ಕಾರ್ಯಕ್ಕೆ ಕುಟುಂಬ ಸಹಿತ ಗೋಕರ್ಣಕ್ಕೆ ತೆರಳಿದ್ದರು. ಮನೆ ಕೆಲಸದಾಕೆ … Read more