ಲಾಡ್ಜ್ ಕೊಠಡಿಯಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಮೃತದೇಹ ಪತ್ತೆ
SHIMOGA NEWS, 17 OCTOBER 2024 : ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ತೀರ್ಥಹಳ್ಳಿ ತಹಶೀಲ್ದಾರ್ ಜೆ.ಬಿ.ಜಕ್ಕಣಗೌಡರ್ (54) ಲಾಡ್ಜ್‌ವೊಂದರ (Lodge) ಕೊಠಡಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರುವ ಕುರಿತು ಪೊಲೀಸರು ಶಂಕಿಸಿದ್ದಾರೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ವೈಭವ್ ಲಾಡ್ಜ್‌ನ ಕೊಠಡಿಯಲ್ಲಿ ಬುಧವಾರ ರಾತ್ರಿ ಮೃತದೇಹ ಪತ್ತೆಯಾಗಿದೆ. ನ್ಯಾಯಾಲಯದ ಕೆಲಸಕ್ಕೆ ತೆರಳಿದ್ದರು ನ್ಯಾಯಾಲಯದ ಕೆಲಸ ನಿಮಿತ್ತ ತಹಶೀಲ್ದಾರ್ ಜೆ.ಬಿ.ಜಕ್ಕಣಗೌಡರ್ ಬೆಂಗಳೂರಿಗೆ ತೆರಳಿದ್ದರು. ವೈಭವ್ ಲಾಡ್ಜ್‌ನಲ್ಲಿ ಉಳಿದಿದ್ದರು. ಮಂಗಳವಾರ ಸಂಜೆಯಿಂದಲೂ ಜಕ್ಕಣಗೌಡರ್ ಅವರು ಯಾರ ಸಂಪರ್ಕಕ್ಕೂ ಅವರು ಸಿಕ್ಕಿರಲಿಲ್ಲ. … Read more