ಶಿವಮೊಗ್ಗ ದಸರಾ ಉದ್ಘಾಟನೆಗೆ ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್ ಜನರಲ್, ಯಾವಾಗ ಉದ್ಘಾಟನೆ?
ಶಿವಮೊಗ್ಗ ದಸರಾ: ಭಾರತೀಯ ಸೇನೆಯ ನಿವೃತ್ತ ಲೆಫ್ಟಿನೆಂಟ್ ಜನರಲ್ ಬಗ್ಗವಳ್ಳಿ ಸೋಮಶೇಖರ್ ರಾಜು ಈ ಬಾರಿ ಶಿವಮೊಗ್ಗ ದಸರಾ (Shimoga Dasara) ಉದ್ಘಾಟಿಸಲಿದ್ದಾರೆ. ಸೆ.22ರಂದು ಬೆಳಗ್ಗೆ 11 ಗಂಟೆಗೆ ಕೋಟೆ ಶ್ರೀ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಾದ ಮಧು ಬಂಗಾರಪ್ಪ, ಬಿ.ಎಸ್.ಸುರೇಶ್, ರಹೀಂ ಖಾನ್, ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದಾರೆ. ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು. … Read more